AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ಏಳುವ ಸಾಧ್ಯತೆ; ಅ. 28ರಿಂದ ಆಂಧ್ರ, ಪಶ್ಚಿಮ ಬಂಗಾಳದಲ್ಲಿ ಭಾರಿ ಮಳೆ

ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಲಘು ವಾಯುಭಾರ ಕುಸಿತವು ಮುಂದಿನ ಕೆಲವು ದಿನಗಳಲ್ಲಿ ತೀವ್ರಗೊಂಡು 'ಚಂಡಮಾರುತ'ವಾಗಿ ಮಾರ್ಪಡುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. ಈ ಸೈಕ್ಲೋನ್ ಪ್ರಭಾವದಿಂದ ಕರಾವಳಿ ಆಂಧ್ರಪ್ರದೇಶ ಮತ್ತು ಒಡಿಶಾದ ಹಲವು ಭಾಗಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಈ ಲಘು ವಾಯುಭಾರ ಕುಸಿತವು ಅಕ್ಟೋಬರ್ 26ರ ಬೆಳಗಿನ ವೇಳೆಗೆ ಪಶ್ಚಿಮ-ಮಧ್ಯ ಬಂಗಾಳ ಕೊಲ್ಲಿಯ ಮೇಲ್ಭಾಗದಲ್ಲಿ ಚಂಡಮಾರುತವಾಗಿ ರೂಪಗೊಳ್ಳಲಿದೆ.

ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ಏಳುವ ಸಾಧ್ಯತೆ; ಅ. 28ರಿಂದ ಆಂಧ್ರ, ಪಶ್ಚಿಮ ಬಂಗಾಳದಲ್ಲಿ ಭಾರಿ ಮಳೆ
ಚಂಡಮಾರುತImage Credit source: PTI
ಸುಷ್ಮಾ ಚಕ್ರೆ
|

Updated on: Oct 23, 2026 | 7:51 PM

Share

ನವದೆಹಲಿ, ಅಕ್ಟೋಬರ್ 23: ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಲಘು ವಾಯುಭಾರ ಕುಸಿತವು ಚಂಡಮಾರುತವಾಗಿ ಮಾರ್ಪಡುವ ಸಾಧ್ಯತೆಯಿದ್ದು, ಅಕ್ಟೋಬರ್ 28ರಿಂದ ಪಶ್ಚಿಮ ಬಂಗಾಳದ ಕರಾವಳಿ ಹಾಗೂ ಪಶ್ಚಿಮ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಇಂದು ತಿಳಿಸಿದೆ. ಈ ಹವಾಮಾನ ವೈಪರೀತ್ಯದಿಂದಾಗಿ ರಾಜ್ಯದ ದಕ್ಷಿಣ ಭಾಗಗಳಲ್ಲಿ ಹಗಲಿನ ತಾಪಮಾನವು 2ರಿಂದ 3 ಡಿಗ್ರಿಯಷ್ಟು ಕುಸಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಹೇಳಿದೆ.

ದಕ್ಷಿಣ ಬಂಗಾಳ ಕೊಲ್ಲಿಯ ಮೇಲ್ಭಾಗದಲ್ಲಿರುವ ಲಘು ವಾಯುಭಾರ ಕುಸಿತವು ಅಕ್ಟೋಬರ್ 26ರ ವೇಳೆಗೆ ಚಂಡಮಾರುತವಾಗಿ ಬದಲಾಗಲಿದ್ದು, ಪಶ್ಚಿಮ-ವಾಯುವ್ಯ ದಿಸೆಯಲ್ಲಿ ಉತ್ತರ ಆಂಧ್ರಪ್ರದೇಶ ಹಾಗೂ ದಕ್ಷಿಣ ಒಡಿಶಾ ಕರಾವಳಿಯತ್ತ ಚಲಿಸಲಿದೆ. ಅಕ್ಟೋಬರ್ 28ರಿಂದ ದಕ್ಷಿಣ ಬಂಗಾಳದ ಎಲ್ಲಾ ಜಿಲ್ಲೆಗಳಲ್ಲಿ ಗಂಟೆಗೆ 40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಗುಡುಗು ಸಹಿತ ಮಳೆಯಾಗಲಿದೆ.

ಇದನ್ನೂ ಓದಿ: ತಿರುಪತಿಯಲ್ಲಿ ಧಾರಾಕಾರ ಮಳೆ: ತಿಮ್ಮಪ್ಪನ ದರ್ಶನಕ್ಕೆ ಬಂದ ಭಕ್ತರಿಗೆ ಸಂಕಷ್ಟ

ಭಾರಿ ಮಳೆಯಾಗುವ ಜಿಲ್ಲೆಗಳು:

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ, ಪೂರ್ವ ಮೇದಿನಿಪುರ, ಪಶ್ಚಿಮ ಮೇದಿನಿಪುರ, ಝಾರ್‌ಗ್ರಾಮ್, ಪುರುಲಿಯಾ ಮತ್ತು ಬ್ಯಾಂಕುರಾ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ರಾಜ್ಯದ ರಾಜಧಾನಿ ಕೊಲ್ಕತ್ತಾದಲ್ಲೂ ಅಕ್ಟೋಬರ್ 28ರಿಂದ ಗುಡುಗು ಸಹಿತ ಮಳೆ ನಿರೀಕ್ಷಿಸಲಾಗಿದೆ.

ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ:

ಹವಾಮಾನ ಇಲಾಖೆಯು ಅಕ್ಟೋಬರ್ 26ರಿಂದ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ. ಆಗ್ನೇಯ ಮತ್ತು ಪೂರ್ವ-ಮಧ್ಯ ಬಂಗಾಳ ಕೊಲ್ಲಿಯಲ್ಲಿ ನಿರ್ಮಾಣವಾಗಿದ್ದ ಮೇಲ್ಮೈ ಸುಂಟರಗಾಳಿ ಪ್ರಭಾವದಿಂದ ಇಂದು ಬೆಳಿಗ್ಗೆ 5.30ಕ್ಕೆ ಲಘು ವಾಯುಭಾರ ಕುಸಿತ ಉಂಟಾಗಿದ್ದು, ಅಕ್ಟೋಬರ್ 24ರಂದು ಇದು ವಾಯುಭಾರ ಕುಸಿತವಾಗಿ ರೂಪುಗೊಳ್ಳಲಿದೆ.

ಈ ನಡುವೆ, ಈಶಾನ್ಯ ಮಾನ್ಸೂನ್ ಪ್ರಭಾವದಿಂದ ಮುಂದಿನ 4 ದಿನಗಳಲ್ಲಿ ಆಂಧ್ರಪ್ರದೇಶದಾದ್ಯಂತ ಅಲ್ಲಲ್ಲಿ ಭಾರಿ ಮಳೆಯಾಗಲಿದೆ ಎಂದು ಆಂಧ್ರಪ್ರದೇಶ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ.

ಇದನ್ನೂ ಓದಿ: ಜಯನಗರ, ಲಾಲ್‌ಬಾಗ್, ಮಾರ್ಕೆಟ್‌ ಸುತ್ತಮುತ್ತ ಮಳೆರಾಯನ ದಿಢೀರ್ ಎಂಟ್ರಿ, ಅ.26ರವರೆಗೆ ಯೆಲ್ಲೋ ಅಲರ್ಟ್

ಮುಂದಿನ ಎರಡು ದಿನಗಳಲ್ಲಿ ಈ ಸೈಕ್ಲೋನ್ ಪಶ್ಚಿಮ-ವಾಯುವ್ಯ ದಿಸೆಯಲ್ಲಿ ಚಲಿಸಿ, ಉತ್ತರ ಆಂಧ್ರಪ್ರದೇಶ ಮತ್ತು ಅದನ್ನು ಹೊಂದಿಕೊಂಡಂತಿರುವ ದಕ್ಷಿಣ ಒಡಿಶಾ ಕರಾವಳಿಯತ್ತ ಸಾಗುವ ನಿರೀಕ್ಷೆಯಿದೆ. ಇದರ ಪರಿಣಾಮವಾಗಿ ಅಕ್ಟೋಬರ್ 27ರಿಂದ 29ರವರೆಗೆ ಕರಾವಳಿ ಆಂಧ್ರಪ್ರದೇಶ ಹಾಗೂ ಒಡಿಶಾದಲ್ಲಿ ಅತ್ಯಂತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಉತ್ತರ ಹಿಂದೂ ಮಹಾಸಾಗರ ಪ್ರದೇಶದಲ್ಲಿ ರೂಪುಗೊಳ್ಳುವ ಸೈಕ್ಲೋನ್‌ಗಳಿಗೆ ಹೆಸರಿಡುವ ವಿಶ್ವ ಹವಾಮಾನ ಸಂಸ್ಥೆ ಮತ್ತು ಐಎಂಡಿಯ ಪಟ್ಟಿಯ ಪ್ರಕಾರ, ಈ ಮುಂಬರುವ ಚಂಡಮಾರುತಕ್ಕೆ ‘ಅರ್ನಬ್’ ಎಂದು ಹೆಸರಿಡಲಾಗುವುದು. ಬಂಗಾಳಿ ಭಾಷೆಯಲ್ಲಿ ‘ಅರ್ನಬ್’ ಎಂದರೆ ‘ಸಮುದ್ರ’ ಎಂದರ್ಥವಾಗಿದ್ದು, ಈ ಹೆಸರನ್ನು ಬಾಂಗ್ಲಾದೇಶ ಸೂಚಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More