Cyclone Yaas: ತೀವ್ರ ಸ್ವರೂಪಕ್ಕೆ ತಿರುಗಿದ ಯಾಸ್​ ಚಂಡಮಾರುತ; ಒಡಿಶಾ, ಪಶ್ಚಿಮ ಬಂಗಾಳದಲ್ಲಿ ಕಟ್ಟೆಚ್ಚರ

ಹವಾಮಾನ ಇಲಾಖೆ ನೀಡಿರುವ ಮಾಹಿತಿ ಪ್ರಕಾರ ಬೆಳಗ್ಗೆ 8.30ರ ಸುಮಾರಿಗೆ ಚಂಡಮಾರುತ ಭೂಮಿಗೆ ಬಂದಪ್ಪಳಿಸಲಾರಂಭಿಸಿದ್ದು ಸದ್ಯ ಬಾಲಾಸೋರ್ ಪ್ರದೇಶದಿಂದ ಸುಮಾರು 40 ಕಿ.ಮೀ ದೂರದಲ್ಲಿದೆ. ಮಿದ್ನಾಪುರ್ ಸಮೀಪ ಕೆಲವೆಡೆ ಸಮುದ್ರದ ನೀರು ಜನವಸತಿ ಪ್ರದೇಶಗಳಿಗೆ ನುಗ್ಗಿದ್ದು, ಕೆಲವೇ ಹೊತ್ತಲ್ಲಿ ಇದು ಇನ್ನೂ ತೀವ್ರಗೊಳ್ಳುವ ಸಾಧ್ಯತೆ ದಟ್ಟವಾಗಿದೆ.

Cyclone Yaas: ತೀವ್ರ ಸ್ವರೂಪಕ್ಕೆ ತಿರುಗಿದ ಯಾಸ್​ ಚಂಡಮಾರುತ; ಒಡಿಶಾ, ಪಶ್ಚಿಮ ಬಂಗಾಳದಲ್ಲಿ ಕಟ್ಟೆಚ್ಚರ
Karnataka Weather: ಕರಾವಳಿ-ಮಲೆನಾಡಿನಲ್ಲಿ ಅಬ್ಬರಿಸುತ್ತಿರುವ ಮುಂಗಾರು, ಇನ್ನೂ 2 ದಿನ ಮಳೆಯೋ ಮಳೆ
Follow us
Skanda
|

Updated on: May 26, 2021 | 11:03 AM

ಒಡಿಶಾ/ಕೋಲ್ಕತ್ತಾ: ಯಾಸ್ ಚಂಡಮಾರುತ ಪಶ್ಚಿಮ ಬಂಗಾಳದ ಕೆಲ ಭಾಗ ಹಾಗೂ ಒಡಿಶಾದಲ್ಲಿ ತೀವ್ರ ಸ್ವರೂಪದ ಪರಿಣಾಮ ಬೀರಬಹುದೆಂದು ಅಂದಾಜಿಸಲಾಗಿದ್ದು, ಈಗಾಗಲೇ ಒಡಿಶಾದ ಕಡಲತೀರಕ್ಕೆ ಚಂಡಮಾರುತ ಬಂದಪ್ಪಳಿಸಲಾರಂಭಿಸಿದೆ. ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ಯಾಸ್ ಚಂಡಮಾರುತ ಒಡಿಶಾದ ಭದ್ರಕ್‌ ಜಿಲ್ಲೆಯ ಧಾಮ್ರ ಬಂದರು ಬಳಿ ಭೂಪ್ರದೇಶಕ್ಕೆ ಅಪ್ಪಳಿಸಬಹುದೆಂದು ಭಾರತೀಯ ಹವಾಮಾನ ಇಲಾಖೆ ಅಂದಾಜಿಸಿದೆ. ಈ ಚಂಡಮಾರುತವು ಕಡಲತೀರಕ್ಕೆ ಅಪ್ಪಳಿಸುವ ಪ್ರಕ್ರಿಯೆ ನಾಲ್ಕು ಗಂಟೆ ಕಾಲ ಮುಂದುವರೆಯಲಿದ್ದು, ಇಂದು ಮಧ್ಯಾಹ್ನದವರೆಗೂ ಭೂಮಿಗೆ ಅಪ್ಪಳಿಸುವ ಪ್ರಕ್ರಿಯೆ ನಡೆಯಲಿದೆ. ಒಡಿಶಾದ ಬಾಲಸೋರ್ – ದಾಮ್ರಾ ಬಂದರು ಬಳಿ ಯಾಸ್ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದ್ದು, ಬಾಲಸೋರ್ ಸಮುದ್ರದ ಬಳಿ ಆರು ಅಡಿ ಎತ್ತರದವರೆಗೂ ಸಮುದ್ರದ ಅಲೆಗಳು ‌‌ಏಳುತ್ತಿರುವುದು ಯಾಸ್ ತೀವ್ರತೆಗೆ ಸಾಕ್ಷಿಯಾಗಿದೆ.

ಹವಾಮಾನ ಇಲಾಖೆ ನೀಡಿರುವ ಮಾಹಿತಿ ಪ್ರಕಾರ ಬೆಳಗ್ಗೆ 8.30ರ ಸುಮಾರಿಗೆ ಚಂಡಮಾರುತ ಭೂಮಿಗೆ ಬಂದಪ್ಪಳಿಸಲಾರಂಭಿಸಿದ್ದು ಸದ್ಯ ಬಾಲಾಸೋರ್ ಪ್ರದೇಶದಿಂದ ಸುಮಾರು 40 ಕಿ.ಮೀ ದೂರದಲ್ಲಿದೆ. ಮಿದ್ನಾಪುರ್ ಸಮೀಪ ಕೆಲವೆಡೆ ಸಮುದ್ರದ ನೀರು ಜನವಸತಿ ಪ್ರದೇಶಗಳಿಗೆ ನುಗ್ಗಿದ್ದು, ಕೆಲವೇ ಹೊತ್ತಲ್ಲಿ ಇದು ಇನ್ನೂ ತೀವ್ರಗೊಳ್ಳುವ ಸಾಧ್ಯತೆ ದಟ್ಟವಾಗಿದೆ. ಇನ್ನು ಕೆಲ ಗಂಟೆಗಳಲ್ಲಿ ಸಮುದ್ರ ತೀರಕ್ಕೆ ಯಾಸ್ ಚಂಡಮಾರುತ ಅಪ್ಪಳಿಸಲಿದ್ದು, ಈ ವೇಳೆ 130-140ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸಲಿದ್ದು, ಭಾರೀ ಮಳೆಯೂ ಸುರಿಯಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

ಮುನ್ನೆಚ್ಚರಿಕಾ ಕ್ರಮವಾಗಿ ನಾಳೆ ಬೆಳಿಗ್ಗೆ 5 ಗಂಟೆವರೆಗೆ ಒಡಿಶಾದ ಭುವನೇಶ್ವರ್ ವಿಮಾನ ನಿಲ್ದಾಣ ಹಾಗೂ ಪಶ್ಚಿಮ ಬಂಗಾಳದ ಕೋಲ್ಕತಾ, ದುರ್ಗಾಪುರ ವಿಮಾನ ನಿಲ್ದಾಣ ಬಂದ್ ಆಗಿದ್ದು, ಒಡಿಶಾ, ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ NDRF ನ 115 ತಂಡಗಳು ರಕ್ಷಣಾ ಕಾರ್ಯಾಚರಣೆಗೆ ನಿಯೋಜನೆಗೊಂಡಿವೆ.

ಇದನ್ನೂ ಓದಿ: Cyclone Yaas ಪಶ್ಚಿಮ ಬಂಗಾಳ, ಒಡಿಶಾದಲ್ಲಿ 11 ಲಕ್ಷ ಜನರ ಸ್ಥಳಾಂತರ, ನಾಳೆ ಒಡಿಶಾದ ಧಮ್ರಾ ಬಂದರು ಬಳಿ ಯಾಸ್ ಅಪ್ಪಳಿಸುವ ಸಾಧ್ಯತೆ 

Karnataka Rain: ಯಾಸ್ ಚಂಡಮಾರುತದ ಪ್ರಭಾವ; ಕರ್ನಾಟಕದಲ್ಲಿ ಇಂದಿನಿಂದ ಮೇ 29ರವರೆಗೂ ವ್ಯಾಪಕ ಮಳೆ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ