AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಚಂಡಮಾರುತದ ಭೀತಿ?-ಒಡಿಶಾ, ಆಂಧ್ರಪ್ರದೇಶದಲ್ಲಿ ಡಿ.5ರವರೆಗೂ ಭಾರಿ ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಒಡಿಶಾದಲ್ಲಿ ಡಿಸೆಂಬರ್​ 2ರಿಂದ 5ರವರೆಗೆ ಭಾರಿ ಮಳೆಯಾಗಲಿದೆ. ಹಾಗೇ ಡಿಸೆಂಬರ್ ಮೊದಲವಾರದಲ್ಲಿ ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಏಳುವ ಸಾಧ್ಯತೆ ಹೆಚ್ಚಾಗಿದೆ ಎಂದು ಭಾರತ ಹವಾಮಾನ ಇಲಾಖೆ ನಿರ್ದೇಶಕ ಮೃತ್ಯುಂಜಯ ಮೋಹಪಾತ್ರಾ ತಿಳಿಸಿದ್ದಾರೆ. 

ಮತ್ತೆ ಚಂಡಮಾರುತದ ಭೀತಿ?-ಒಡಿಶಾ, ಆಂಧ್ರಪ್ರದೇಶದಲ್ಲಿ ಡಿ.5ರವರೆಗೂ ಭಾರಿ ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ
ಮಳೆ
TV9 Web
| Edited By: |

Updated on: Nov 30, 2021 | 4:14 PM

Share

ದಕ್ಷಿಣ ಅಂಡಮಾನ್​ ಸಾಗರದಲ್ಲಿ ವಾಯುಭಾರ ಕುಸಿತವಾಗಲಿದ್ದು, ಚಂಡಮಾರುತ  ಏಳುವ ಸಾಧ್ಯತೆ ಇದೆ.  ಈ ಚಂಡಮಾರುತ ಸ್ವರೂಪದ ಗಾಳಿಯು ಒಡಿಶಾ ಮತ್ತು ಆಂಧ್ರಪ್ರದೇಶದ ಮೇಲೆ ಪರಿಣಾಮ ಬೀರಲಿದ್ದು, ತತ್ಪರಿಣಾಮ ನವೆಂಬರ್ 30ರಿಂದ (ಇಂದಿನಿಂದ) ಡಿಸೆಂಬರ್​ 2ರವರೆಗೆ ಆಂಧ್ರಪ್ರದೇಶ, ಒಡಿಶಾದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತದ ಹವಾಮಾನ ಇಲಾಖೆ ತಿಳಿಸಿದೆ. ಇಂದು ದಕ್ಷಿಣ ಅಂಡಮಾನ್​ ಸಾಗರದಲ್ಲಿ ವಾಯುಭಾರ ಕುಸಿತವಾಗಿ ಚಂಡಮಾರುತ ಏಳುವ ಸಾಧ್ಯತೆಯಿದೆ. ಗಾಳಿ ಪಶ್ಚಿಮ-ವಾಯುವ್ಯದತ್ತ ಚಲಿಸಲಿದೆ. ನಂತರ ಇದು ಇನ್ನು 24 ಗಂಟೆಯಲ್ಲಿ ಆಗ್ನೇಯ ಮತ್ತು ಬಂಗಾಳಕೊಲ್ಲಿಯ ವಾಯುಭಾರ ಕುಸಿತಕ್ಕೆ ಕಾರಣವಾಗಲಿದೆ ಡಿಸೆಂಬರ್​ ಎಂದೂ ಹವಾಮಾನ ಇಲಾಖೆ ತಿಳಿಸಿದೆ.

ಡಿಸೆಂಬರ್ ಮೊದಲವಾರದಲ್ಲಿ ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಏಳುವ ಸಾಧ್ಯತೆ ಹೆಚ್ಚಾಗಿದೆ. ಒಡಿಶಾದಲ್ಲಿ ಡಿಸೆಂಬರ್​ 2ರಿಂದ 5ರವರೆಗೆ ಭಾರಿ ಮಳೆಯಾಗಲಿದೆ ಎಂದು ಭಾರತ ಹವಾಮಾನ ಇಲಾಖೆ ನಿರ್ದೇಶಕ ಮೃತ್ಯುಂಜಯ ಮೋಹಪಾತ್ರಾ ತಿಳಿಸಿದ್ದಾರೆ.  ಹಾಗೇ, ರಾಜಸ್ಥಾನ, ದೆಹಲಿ, ಹರ್ಯಾಣ, ಉತ್ತರಪ್ರದೇಶದ ಪಶ್ಚಿಮ ಭಾಗದಲ್ಲಿ, ಉತ್ತರಾಖಂಡ್​ಗಳಲ್ಲಿ ಕೂಡ ಮಳೆಯಾಗಬಹುದು. ಹವಾಮಾನದಲ್ಲಿ ಸಂಪೂರ್ಣ ಬದಲಾವಣೆ ಆಗಬಹುದು ಎಂದು ಐಎಂಸಿ ಸೈಂಟಿಸ್ಟ್ ಆರ್​.ಕೆ.ಜೆನಮಣಿ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಡಿಕೆಶಿ, ಸಿದ್ದರಾಮಯ್ಯ ಭಂಡಾಸುರ, ಮಂಡಾಸುರರು: ಶ್ರೀರಾಮುಲು ವಾಗ್ದಾಳಿ

Follow Us
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
ಕೈ ಹೈಕಮಾಂಡ್ ಶಿಫಾರಸ್ಸಿನ ಪಟ್ಟಿಯಲ್ಲಿ ಮತ್ತೊಂದು ಬದಲಾವಣೆ
ಕೈ ಹೈಕಮಾಂಡ್ ಶಿಫಾರಸ್ಸಿನ ಪಟ್ಟಿಯಲ್ಲಿ ಮತ್ತೊಂದು ಬದಲಾವಣೆ
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ