ಕಿಂಗ್ ಚಾರ್ಲ್ಸ್ ಪಟ್ಟಾಭಿಷೇಕದಲ್ಲಿ ಪಾಲ್ಗೊಳ್ಳಲಿದ್ದಾರೆ ಮುಂಬೈ ಡಬ್ಬಾವಾಲಾಗಳು; ಅವರು ಕೊಡುವ ಸ್ಪೆಷಲ್ ಗಿಫ್ಟ್ ಹೀಗಿದೆ

ಮುಂಬೈ ಡಬ್ಬಾವಾಲಾಗಳು ಬ್ರಿಟಿಷ್ ರಾಜಮನೆತನದೊಂದಿಗೆ ಉತ್ತಮ ಸಂಬಂಧವನ್ನು ಹೊಂದಿದ್ದಾರೆ. ಅವರ ಮದುವೆಗೆ ಇಬ್ಬರು ಡಬ್ಬಾವಾಲಾಗಳನ್ನು ಆಹ್ವಾನಿಸಲಾಗಿತ್ತು. ಇದು ನಮಗೆ ಗೌರವವಾಗಿತ್ತು. ಅವರು ರಾಜನಾಗಲಿದ್ದಾ

ಕಿಂಗ್ ಚಾರ್ಲ್ಸ್ ಪಟ್ಟಾಭಿಷೇಕದಲ್ಲಿ ಪಾಲ್ಗೊಳ್ಳಲಿದ್ದಾರೆ ಮುಂಬೈ ಡಬ್ಬಾವಾಲಾಗಳು; ಅವರು ಕೊಡುವ ಸ್ಪೆಷಲ್ ಗಿಫ್ಟ್ ಹೀಗಿದೆ
ಮುಂಬೈ ಡಬ್ಬಾವಾಲಾಗಳು
Follow us
ರಶ್ಮಿ ಕಲ್ಲಕಟ್ಟ
|

Updated on: May 03, 2023 | 7:12 PM

ಮೇ 6 ರಂದು ಚಾರ್ಲ್ಸ್‌ ಪಟ್ಟಾಭಿಷೇಕ (King Charles’coronation) ಸಮಾರಂಭದಲ್ಲಿ ಭಾಗವಹಿಸಲು ತಮ್ಮನ್ನು ಆಹ್ವಾನಿಸಲಾಗಿದೆ ಎಂದು ಹೇಳಿರುವ ಮುಂಬೈನ ಪ್ರಸಿದ್ಧ ಡಬ್ಬಾವಾಲಾಗಳು (Mumbai Dabbawalas) ಮಂಗಳವಾರ ಬ್ರಿಟನ್‌ನ (Britain) ರಾಜ ಚಾರ್ಲ್ಸ್‌ಗೆ ಕೊಡಲಿರುವ ಉಡುಗೊರೆಗಳನ್ನು ಖರೀದಿಸುತ್ತಿರುವುದು ಕಂಡುಬಂದಿದೆ. ಡಬ್ಬಾವಾಲಾಗಳು ಪುಣೇರಿ ಪಗಡಿ ಮತ್ತು ವಾರಕರಿ ಸಮುದಾಯದ ಶಾಲು ಖರೀದಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ. 74 ವರ್ಷ ವಯಸ್ಸಿನ ರಾಜನ ಪಟ್ಟಾಭಿಷೇಕ ಸಮಾರಂಭದಲ್ಲಿ ಪಾಲ್ಗೊಳ್ಳಲು ಬ್ರಿಟಿಷ್ ರಾಯಭಾರ ಕಚೇರಿಯು ಡಬ್ಬಾವಾಲಾಗಳಿಗೆ ಆಹ್ವಾನವನ್ನು ಕಳುಹಿಸಿದೆ ಎಂದು ವರದಿಯಾಗಿದೆ.

ಮುಂಬೈ ಡಬ್ಬಾವಾಲಾಗಳು ಬ್ರಿಟಿಷ್ ರಾಜಮನೆತನದೊಂದಿಗೆ ಉತ್ತಮ ಸಂಬಂಧವನ್ನು ಹೊಂದಿದ್ದಾರೆ. ಅವರ ಮದುವೆಗೆ ಇಬ್ಬರು ಡಬ್ಬಾವಾಲಾಗಳನ್ನು ಆಹ್ವಾನಿಸಲಾಗಿತ್ತು. ಇದು ನಮಗೆ ಗೌರವವಾಗಿತ್ತು. ಅವರು ರಾಜನಾಗಲಿದ್ದಾರೆ. ಆದ್ದರಿಂದ, ನಾವು ಕಿಂಗ್ ಚಾರ್ಲ್ಸ್‌ಗೆ ಪುಣೇರಿ ಪಗಡಿ ಮತ್ತು ವಾರಕರಿ ಸಮುದಾಯದ ಶಾಲುಗಳನ್ನು ಉಡುಗೊರೆಯಾಗಿ ನೀಡಲು ಬಯಸುತ್ತೇವೆ ಎಂದು ಮುಂಬೈ ಡಬ್ಬಾವಾಲಾಗಳ ವಕ್ತಾರ ವಿಷ್ಣು ಕಲ್ಡೋಕೆ ಹೇಳಿದ್ದಾರೆ.

2003 ರಲ್ಲಿ ಚಾರ್ಲ್ಸ್ III ಅವರು ನಗರಕ್ಕೆ ಭೇಟಿ ನೀಡಿದಾಗ ಮುಂಬೈನ ಚರ್ಚ್‌ಗೇಟ್ ನಿಲ್ದಾಣದಲ್ಲಿ ಡಬ್ಬಾವಾಲಾಗಳನ್ನು ಭೇಟಿಯಾದರು ಎಂದು ವರದಿಯಾಗಿದೆ. ನಂತರ 2005 ರಲ್ಲಿ, ಇಬ್ಬರು ಡಬ್ಬಾವಾಲಾಗಳು ಚಾರ್ಲ್ಸ್ ಮತ್ತು ಕ್ಯಾಮಿಲ್ಲಾ ಪಾರ್ಕರ್-ಬೌಲ್ಸ್ ಅವರ ರಾಜಮನೆತನದ ವಿವಾಹದಲ್ಲಿ ಭಾಗವಹಿಸಿದರು.

ಇದನ್ನೂ ಓದಿ: Supriya Sule: ಶರದ್ ಪವಾರ್ ರಾಜೀನಾಮೆ; ಸುಪ್ರಿಯಾ ಸುಳೆ ಎನ್‌ಸಿಪಿಯ ನೂತನ ಮುಖ್ಯಸ್ಥರಾಗುವ ಸಾಧ್ಯತೆ?

2022 ರಲ್ಲಿ ರಾಣಿ ಎಲಿಜಬೆತ್ II ನಿಧನರಾದಾಗ, ಮುಂಬೈ ಡಬ್ಬಾವಾಲಾ ಅಸೋಸಿಯೇಷನ್ ತಮ್ಮ ದುಃಖವನ್ನು ವ್ಯಕ್ತಪಡಿಸಿತು. ಪ್ರಿನ್ಸ್ ಚಾರ್ಲ್ಸ್ ಭಾರತಕ್ಕೆ ಭೇಟಿ ನೀಡಿದಾಗಿನಿಂದ ಮುಂಬೈ ಡಬ್ಬಾವಾಲಾ ಅಸೋಸಿಯೇಷನ್ ಬ್ರಿಟಿಷ್ ರಾಜಮನೆತನದೊಂದಿಗೆ ಬಹಳ ನಿಕಟ ಸಂಬಂಧವನ್ನು ಹೊಂದಿದೆ. ರಾಣಿ ಎಲಿಜಬೆತ್ II ರ ಸಾವಿನ ಸುದ್ದಿ ಕೇಳಿ ನಮಗೆ ತುಂಬಾ ದುಃಖವಾಗಿದೆ.ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇವೆ ಎಂದು ಸಂಘದ ಅಧ್ಯಕ್ಷ ಸುಭಾಷ್ ತಳೇಕರ್ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್