Covid cases in India: ಭಾರತದಲ್ಲಿ 800 ದಾಟಿದ ದೈನಂದಿನ ಕೋವಿಡ್ ಪ್ರಕರಣಗಳ ಸಂಖ್ಯೆ, ಇದು 4 ತಿಂಗಳುಗಳಲ್ಲಿ ಅತಿ ಹೆಚ್ಚು

ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ, ದೇಶದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ4.46 ಕೋಟಿಗೆ ಏರಿದೆ.ಸಕ್ರಿಯ ಪ್ರಕರಣಗಳು ಒಟ್ಟು ಸೋಂಕುಗಳಲ್ಲಿ 0.01 ಪ್ರತಿಶತವನ್ನು ಒಳಗೊಂಡಿವೆ.

Covid cases in India: ಭಾರತದಲ್ಲಿ 800 ದಾಟಿದ ದೈನಂದಿನ ಕೋವಿಡ್ ಪ್ರಕರಣಗಳ ಸಂಖ್ಯೆ, ಇದು 4 ತಿಂಗಳುಗಳಲ್ಲಿ ಅತಿ ಹೆಚ್ಚು
ಪ್ರಾತಿನಿಧಿಕ ಚಿತ್ರ
Follow us
ರಶ್ಮಿ ಕಲ್ಲಕಟ್ಟ
|

Updated on:Mar 18, 2023 | 5:43 PM

126 ದಿನಗಳ ನಂತರ ಶನಿವಾರದಂದು ಭಾರತದಲ್ಲಿ ದೈನಂದಿನ ಕೋವಿಡ್ (Covid 19) ಪ್ರಕರಣಗಳ ಸಂಖ್ಯೆ 800 ದಾಟಿದೆ. 843 ಹೊಸ ಸೋಂಕುಗಳೊಂದಿಗೆ, ಸಕ್ರಿಯ ಪ್ರಕರಣಗಳ ಸಂಖ್ಯೆ 5,389 ಕ್ಕೆ ಏರಿದೆ. ಕೇಂದ್ರ ಆರೋಗ್ಯ ಸಚಿವಾಲಯದ (Union health ministry) ಅಂಕಿಅಂಶಗಳ ಪ್ರಕಾರ, ದೇಶದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ4.46 ಕೋಟಿಗೆ ಏರಿದೆ.ಸಕ್ರಿಯ ಪ್ರಕರಣಗಳು ಒಟ್ಟು ಸೋಂಕುಗಳಲ್ಲಿ 0.01 ಪ್ರತಿಶತವನ್ನು ಒಳಗೊಂಡಿವೆ. ರಾಷ್ಟ್ರೀಯ ಕೋವಿಡ್ ಚೇತರಿಕೆ ದರವು 98.80 ಪ್ರತಿಶತದಷ್ಟಿದೆ. ಕೇರಳ(Kerala), ಮಹಾರಾಷ್ಟ್ರ, ಕರ್ನಾಟಕ ಮತ್ತು ಗುಜರಾತ್‌ಗಳಲ್ಲಿ ಅತಿ ಹೆಚ್ಚು ವೈರಲ್ ಸೋಂಕು ಪ್ರಕರಣಗಳಿವೆ ಎಂದು ಆರೋಗ್ಯ ಸಚಿವಾಲಯದ ಅಂಕಿ ಅಂಶಗಳು ತಿಳಿಸಿವೆ.

ಕರ್ನಾಟಕದಲ್ಲಿ ಶುಕ್ರವಾರ 127 ಹೊಸ ಕೋವಿಡ್-19 ಪ್ರಕರಣಗಳನ್ನು ದಾಖಲಿಸಿದ್ದು, ಹಿಂದಿನ ದಿನ ದಾಖಲಾದ 77 ಪ್ರಕರಣಗಳಿಗೆ ಹೋಲಿಸಿದರೆ, ಅದರಲ್ಲಿ 77 ಪ್ರಕರಣಗಳು ರಾಜ್ಯ ರಾಜಧಾನಿ ಬೆಂಗಳೂರಿನಿಂದ ವರದಿ ಆಗಿದೆ ಎಂದು ಆರೋಗ್ಯ ಇಲಾಖೆಯ ಅಂಕಿಅಂಶಗಳು ತಿಳಿಸಿವೆ. 130 ಚೇತರಿಕೆಗಳೊಂದಿಗೆ ಸಕ್ರಿಯ ಪ್ರಕರಣಗಳ ಸಂಖ್ಯೆ 584 ರಷ್ಟಿದೆ. ಕರ್ನಾಟಕದ ಒಟ್ಟು ಕೋವಿಡ್ ಸಂಖ್ಯೆ 40.75 ಲಕ್ಷದಷ್ಟಿದೆ, ಧನಾತ್ಮಕ ದರವು ಶೇಕಡಾ 3.28 ರಷ್ಟಿದೆ.

ದೇಶದಲ್ಲಿ ಏರಿಕೆಯಾದ ಕೋವಿಡ್ ಪ್ರಕರಣ: ಕ್ರಮ ಕೈಗೊಳ್ಳುವಂತೆ ಕೇಂದ್ರ ಸೂಚನೆ

  1. ಜಾರ್ಖಂಡ್ ಮತ್ತು ಮಹಾರಾಷ್ಟ್ರ ತಲಾ ಒಂದು ಸಾವು ವರದಿ ಮಾಡಿದ್ದು, ಕೇರಳದಲ್ಲಿ ಇಬ್ಬರು ಸಾವಿಗೀಡಾಗಿದ್ದಾರೆ.
  2. ಭಾರತದ ದೈನಂದಿನ ಸರಾಸರಿ ಹೊಸ ಕೋವಿಡ್ ಪ್ರಕರಣಗಳು ತಿಂಗಳಿಗೆ ಆರು ಬಾರಿ ಹೆಚ್ಚುತ್ತಿವೆ. ಒಂದು ತಿಂಗಳ ಹಿಂದೆ (ಫೆ 18) 112 ರಷ್ಟಿದ್ದ ದೈನಂದಿನ ಸರಾಸರಿ ಹೊಸ ಪ್ರಕರಣಗಳು ಈಗ (ಮಾರ್ಚ್ 18) 626 ಆಗಿದೆ.
  3. ಸಕ್ರಿಯ ಪ್ರಕರಣಗಳು ಈಗ ಒಟ್ಟು ಸೋಂಕುಗಳಲ್ಲಿ 0.01 ಪ್ರತಿಶತವನ್ನು ಒಳಗೊಂಡಿವೆ. ಆರೋಗ್ಯ ಸಚಿವಾಲಯದ ವೆಬ್‌ಸೈಟ್ ಪ್ರಕಾರ, ರಾಷ್ಟ್ರೀಯ ಕೋವಿಡ್ ಚೇತರಿಕೆ ದರವು 98.80 ಪ್ರತಿಶತದಷ್ಟು ದಾಖಲಾಗಿದೆ.
  4. ರೋಗದಿಂದ ಚೇತರಿಸಿಕೊಂಡವರ ಸಂಖ್ಯೆ 4,41,58,161 ಕ್ಕೆ ಏರಿದೆ. ಸಾವಿನ ಪ್ರಮಾಣವು ಶೇಕಡಾ 1.19 ರಷ್ಟಿದೆ.
  5. ಸಚಿವಾಲಯದ ವೆಬ್‌ಸೈಟ್ ಪ್ರಕಾರ, ರಾಷ್ಟ್ರವ್ಯಾಪಿ ವ್ಯಾಕ್ಸಿನೇಷನ್ ಡ್ರೈವ್ ಅಡಿಯಲ್ಲಿ 220.64 ಕೋಟಿ ಡೋಸ್ ಕೋವಿಡ್-19 ಲಸಿಕೆಗಳನ್ನು ನೀಡಲಾಗಿದೆ.
  6. ವೈರಲ್ ಸೋಂಕಿನ ಹಠಾತ್ ಹೆಚ್ಚಳವನ್ನು ನಿಯಂತ್ರಿಸುವತ್ತ ಗಮನಹರಿಸಬೇಕು ಎಂದು ಕೇಂದ್ರವು ಆರು ರಾಜ್ಯಗಳಿಗೆ ಪತ್ರ ಬರೆದಿದೆ. ಕೇಂದ್ರ ಆರೋಗ್ಯ ಕಾರ್ಯದರ್ಶಿ ಬುಧವಾರ ಮಹಾರಾಷ್ಟ್ರ, ಗುಜರಾತ್, ತೆಲಂಗಾಣ, ತಮಿಳುನಾಡು, ಕೇರಳ ಮತ್ತು ಕರ್ನಾಟಕಕ್ಕೆ ಪತ್ರ ಬರೆದು ಪರೀಕ್ಷೆ, ಚಿಕಿತ್ಸೆ, ಟ್ರ್ಯಾಕಿಂಗ್ ಮತ್ತು ಲಸಿಕೆಗೆ ಒತ್ತು ನೀಡುವಂತೆ ಕೇಳಿಕೊಂಡಿದ್ದಾರೆ.
  7. ಆರು ರಾಜ್ಯಗಳಿಗೆ ಬರೆದ ಪತ್ರದಲ್ಲಿ, ಆರೋಗ್ಯ ಸಚಿವಾಲಯವು ಕೆಲವು ರಾಜ್ಯಗಳಲ್ಲಿ ಹೆಚ್ಚಿನ ಸಂಖ್ಯೆಯ ಪ್ರಕರಣಗಳನ್ನು ವರದಿ ಮಾಡುತ್ತಿದೆ ಎಂದು ತಿಳಿಸಿದ್ದು, ಸೋಂಕಿನ ಸ್ಥಳೀಯ ಹರಡುವಿಕೆಯನ್ನ ಇದು ಸೂಚಿಸುತ್ತದೆ ಎಂದಿದ್ದಾರೆ. ಈ ನಿಟ್ಟಿನಲ್ಲಿ ಸೋಂಕನ್ನು ತಡೆಗಟ್ಟಲು ಮೌಲ್ಯಮಾಪನ ಆಧಾರಿತ ವಿಧಾನವನ್ನು ಅನುಸರಿಸುವ ಅವಶ್ಯಕತೆಯಿದೆ ಎಂದು ಹೇಳಿದ್ದಾರೆ.
  8. ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು ಶನಿವಾರದಂದು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದಿದ್ದು, ಕೆಲವು ರಾಜ್ಯಗಳಲ್ಲಿ ಕೋವಿಡ್ ಪರೀಕ್ಷಾ ಪಾಸಿಟಿವಿಟಿ ದರಗಳು ಕ್ರಮೇಣ ಏರಿಕೆಯಾಗುತ್ತಿವೆ. ಈ ಸಮಸ್ಯೆಯನ್ನು ತ್ವರಿತವಾಗಿ ಪರಿಹರಿಸಬೇಕು ಎಂದು ಹೇಳಿದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:41 pm, Sat, 18 March 23

ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ