AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಪ್ರಧಾನ ಕಚೇರಿ ಹೊರಗೆ ಎಎಪಿ ಪ್ರತಿಭಟನೆ, ದಲಿತ ಬಾಲಕನ ಕುಟುಂಬಕ್ಕೆ ₹20 ಲಕ್ಷ ಪರಿಹಾರ ಘೋಷಿಸಿದ ಅಶೋಕ್ ಗೆಹ್ಲೋಟ್

Dalit boy death ಪ್ರಸ್ತುತ ಪ್ರಕರಣದ ತ್ವರಿತ ವಿಚಾರಣೆ ನಡೆಸಲಾಗುವುದು ಎಂದು ಹೇಳಿದ ಗೆಹ್ಲೋಟ್, ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಪರಿಹಾರ ಧನ ನೀಡುವುದರ ಜತೆಗೆ ಎಐಸಿಸಿಯಿಂದ (AICC) ಸಹಾಯಧನವಾಗಿ ₹20 ಲಕ್ಷ ನೀಡಲಾಗುವುದು.

ಕಾಂಗ್ರೆಸ್ ಪ್ರಧಾನ ಕಚೇರಿ ಹೊರಗೆ ಎಎಪಿ ಪ್ರತಿಭಟನೆ, ದಲಿತ ಬಾಲಕನ ಕುಟುಂಬಕ್ಕೆ ₹20 ಲಕ್ಷ ಪರಿಹಾರ ಘೋಷಿಸಿದ ಅಶೋಕ್ ಗೆಹ್ಲೋಟ್
ಎಎಪಿ ಪ್ರತಿಭಟನೆ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Aug 18, 2022 | 2:55 PM

Share

ಹಲಿ: ಮೇಲ್ಜಾತಿಯವರಿಗಾಗಿ ಇರಿಸಿದ ನೀರಿನ ಪಾತ್ರೆ ಮುಟ್ಟಿದ್ದಕ್ಕಾಗಿ ಶಾಲಾ ಶಿಕ್ಷಕನಿಂದ ಥಳಿತಕ್ಕೊಳಗಾಗಿ ಸಾವಿಗೀಡಾದ ದಲಿತ ಬಾಲಕನ (Dalit boy) ಕುಟುಂಬಕ್ಕೆ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ (Ashok Gehlot) ಗುರುವಾರ ಪರಿಹಾರ ಘೋಷಿಸಿದ್ದಾರೆ. ಪ್ರಸ್ತುತ ಪ್ರಕರಣದ ತ್ವರಿತ ವಿಚಾರಣೆ ನಡೆಸಲಾಗುವುದು ಎಂದು ಹೇಳಿದ ಗೆಹ್ಲೋಟ್, ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಪರಿಹಾರ ಧನ ನೀಡುವುದರ ಜತೆಗೆ ಎಐಸಿಸಿಯಿಂದ (AICC) ಸಹಾಯಧನವಾಗಿ 20 ಲಕ್ಷ ನೀಡಲಾಗುವುದು. ಕುಟುಂಬದ ಸದಸ್ಯರೊಬ್ಬರಿಗೆ ಕೆಲಸ ನೀಡುವುದರ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ. ಪ್ರಕರಣವನ್ನು ತ್ವರಿತ ವಿಚಾರಣೆ ಮಾಡಲಾಗುವುದು ಎಂದು ಹೇಳಿದ ಸಿಎಂ 9ರ ಹರೆ ಯ ಮುಗ್ಧ ಬಾಲಕನ ಸಾವಿಗೆ ಇಡೀ ದೇಶವೇ ಮರುಗಿದೆ ಎಂದು ಹೇಳಿದ್ದಾರೆ. ಬಾಲಕನ ಸಾವಿನ ಬಗ್ಗೆ ಇತರ ಪಕ್ಷಗಳ ಜತೆ ಕಾಂಗ್ರೆಸ್ ಪಕ್ಷ ಕೂಡಾ ಆಕ್ರೋಶ ವ್ಯಕ್ತ ಪಡಿಸಿದ ಬೆನ್ನಲ್ಲೇ ಗೆಹ್ಲೋಟ್ ಈ ಪರಿಹಾರ ಘೋಷಿಸಿದ್ದಾರೆ.

ಎಸ್​​ಸಿ- ಎಸ್​ಟಿ ಕಾಯ್ದೆ ಪ್ರಕಾರ ಪರಿಹಾರ ಧನ ಜತೆ ಹೆಚ್ಚುವರಿ ಪರಿಹಾರ ಧನವನ್ನು ಮುಖ್ಯಮಂತ್ರಿಯವರ ಪರಿಹಾರ ನಿಧಿಯಿಂದ ನೀಡಲಾಗುವುದು. ಎಐಸಿಸಿ ನಿರ್ದೇಶದ ಪ್ರಕಾರ ರಾಜ್ಯ ಕಾಂಗ್ರೆಸ್ ಸಮಿತಿಯಿಂದ ಹೆಚ್ಚುವರಿ ₹20 ಲಕ್ಷ ಪರಿಹಾರ ಧನವನ್ನು ಬಾಲಕನ ಕುಟುಂಬಕ್ಕೆ ನೀಡಲಾಗುವುದು ಎಂದು ಗೆಹ್ಲೋಟ್ ಸರಣಿ ಟ್ಲೀಟ್ ನಲ್ಲಿ ಹೇಳಿದ್ದಾರೆ. ಇದಕ್ಕಿಂತ ಮುಂಚೆ ರಾಜ್ಯ ಸರ್ಕಾ 5 ಲಕ್ಷ ಪರಿಹಾಯ ಧನ ಘೋಷಿಸಿತ್ತು. ಪ್ರಸ್ತುತ ಪ್ರಕರಣ ಬಗ್ಗೆ ತ್ವರಿತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಇದನ್ನೂ ಓದಿ
Image
BIG NEWS: ದಲಿತರ ಮೇಲಿನ ದೌರ್ಜನ್ಯ: ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಪೊಲೀಸ್ ವಶಕ್ಕೆ
Image
ರಾಜಸ್ಥಾನದಲ್ಲಿ ದಲಿತ ಬಾಲಕನ ಸಾವು ಪ್ರಕರಣ: ಶಾಸಕನ ರಾಜೀನಾಮೆ ಬೆನ್ನಲ್ಲೇ 12 ಕೌನ್ಸಿಲರ್​​ಗಳ ರಾಜೀನಾಮೆ
Image
BIG NEWS: ದಲಿತರ ಮೇಲಿನ ದೌರ್ಜನ್ಯ: ರಾಜಸ್ಥಾನದ ಕಾಂಗ್ರೆಸ್ ಶಾಸಕ ಪನಾ ಚಂದ್ ಮೇಘವಾಲ್ ರಾಜೀನಾಮೆ
Image
ನೀರಿನ ಪಾತ್ರೆ ಮುಟ್ಟಿದ್ದಕ್ಕೆ ಶಾಲಾ ಶಿಕ್ಷಕನಿಂದ ಥಳಿತಕ್ಕೊಳಗಾದ ದಲಿತ ಬಾಲಕ ಸಾವು; ರಾಜಸ್ಥಾನ ಸರ್ಕಾರದ ವಿರುದ್ಧ ಬಿಜೆಪಿ, ಬಿಎಸ್​​ಪಿ ಕಿಡಿ

ಏತನ್ಮಧ್ಯೆ, ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷ ಕಾಂಗ್ರೆಸ್ ಪ್ರಧಾನ ಕಚೇರಿ ಹೊರಗೆ ಪ್ರತಿಭಟನೆ ನಡೆಸಿದೆ. ಘೋಷಣೆ ಕೂಗಿ ಪ್ರತಿಭಟನೆ ನಡೆಸುತ್ತಿದ್ದ ಪ್ರತಿಭಟನಾಕಾರರನ್ನು ಚದುರಿಸಲು ಬಹು ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ಪೊಲೀಸರು ಕೆಲವು ಎಎಪಿ ಕಾರ್ಯಕರ್ತರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ರಾಜಸ್ಥಾನದ ಜಲೋರ್‌ನಲ್ಲಿ ಜುಲೈ 20 ರಂದು ಶಾಲೆಯಲ್ಲಿ ನೀರಿನ ಪಾತ್ರೆಯನ್ನು ಮುಟ್ಟಿದ ಆರೋಪದ ಮೇಲೆ ಒಂಬತ್ತು ವರ್ಷದ ದಲಿತ ವಿದ್ಯಾರ್ಥಿಯನ್ನು ಶಿಕ್ಷಕರೊಬ್ಬರು ಥಳಿಸಿದ್ದರು. ಅಹಮದಾಬಾದ್‌ನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಾಲಕ ಆಗಸ್ಟ್ 13 ರಂದು ಅಸು ನೀಗಿದ್ದು,ಆರೋಪಿ ಶಿಕ್ಷಕ ಚೈಲ್ ಸಿಂಗ್ (40) ನ್ನು ಬಂಧಿಸಲಾಗಿದೆ.

Published On - 2:11 pm, Thu, 18 August 22

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?