AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶ: ಸಮವಸ್ತ್ರ ಧರಿಸದ ದಲಿತ ವಿದ್ಯಾರ್ಥಿನಿಯ ಮೇಲೆ ಹಲ್ಲೆ ನಡೆಸಿ, ಶಾಲೆಯಿಂದ ಹೊರದಬ್ಬಿದ ಗ್ರಾಮದ ಮಾಜಿ ಮುಖ್ಯಸ್ಥ

ಮನೋಜ್ ಕುಮಾರ್ ದುಬೆ ಎಂಬ ವ್ಯಕ್ತಿ ವಿದ್ಯಾರ್ಥಿನಿ ಮೇಲೆ ಹಲ್ಲೆ ನಡೆಸಿ ಜಾತಿ ನಿಂದನೆ ಮಾಡಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ. ದುಬೆ ಶಾಲೆಯ ಅಧಿಕಾರಿಯೂ ಅಲ್ಲ ಶಿಕ್ಷಕನೂ ಅಲ್ಲ

ಉತ್ತರ ಪ್ರದೇಶ: ಸಮವಸ್ತ್ರ ಧರಿಸದ ದಲಿತ ವಿದ್ಯಾರ್ಥಿನಿಯ ಮೇಲೆ ಹಲ್ಲೆ ನಡೆಸಿ, ಶಾಲೆಯಿಂದ ಹೊರದಬ್ಬಿದ ಗ್ರಾಮದ ಮಾಜಿ ಮುಖ್ಯಸ್ಥ
ಉತ್ತರ ಪ್ರದೇಶ ಪೊಲೀಸರು
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Aug 23, 2022 | 5:27 PM

Share

ಭದೋಹಿ: ಶಾಲೆಯಲ್ಲಿ ಸಮವಸ್ತ್ರ ಧರಿಸದೆ ಇದ್ದುದಕ್ಕೆ ದಲಿತ  (Dalit) ವಿದ್ಯಾರ್ಥಿನಿ ಮೇಲೆ ಹಲ್ಲೆ ನಡೆಸಿ ಆಕೆಯನ್ನು ಶಾಲೆಯಿಂದ ಹೊರದಬ್ಬಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ವಿದ್ಯಾರ್ಥಿನಿ ಜತೆ ಈ ರೀತಿ ವರ್ತಿಸಿದ್ದು ಶಾಲೆಯ ಶಿಕ್ಷಕರು ಅಥವಾ ಆಡಳಿತಾಧಿಕಾರಿಗಳು ಅಲ್ಲ, ಅಲ್ಲಿನ ಗ್ರಾಮದ ಮಾಜಿ ಮುಖ್ಯಸ್ಥ!. ಮನೋಜ್ ಕುಮಾರ್ ದುಬೆ ಎಂಬ ವ್ಯಕ್ತಿ ವಿದ್ಯಾರ್ಥಿನಿ ಮೇಲೆ ಹಲ್ಲೆ ನಡೆಸಿ ಜಾತಿ ನಿಂದನೆ ಮಾಡಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ. ದುಬೆ ಶಾಲೆಯ ಅಧಿಕಾರಿಯೂ ಅಲ್ಲ ಶಿಕ್ಷಕನೂ ಅಲ್ಲ. ಆದರೆ ಈತ ದಿನಾ ಶಾಲೆಗೆ ಹೋಗಿ ಅಲ್ಲಿನ ವಿದ್ಯಾರ್ಥಿಗಳು ಶಿಕ್ಷಕರ ಜತೆ ಕೆಟ್ಟದಾಗಿ ವರ್ತಿಸುತ್ತಿದ್ದ ಎಂದಿದ್ದಾರೆ ಪೊಲೀಸರು. ಇಲ್ಲಿನ ಸರ್ಕಾರಿ ಶಾಲೆಯೊಂದಕ್ಕೆ ಭೇಟಿ ನೀಡಿದ ಮನೋಜ್ ಕುಮಾರ್ ದುಬೆ ಎಂಟನೇ ತರಗತಿಯ ವಿದ್ಯಾರ್ಥಿನಿಯಲ್ಲಿ ಯಾಕೆ ಸಮವಸ್ತ್ರ ಧರಿಸಿಲ್ಲ ಎಂದು ಪ್ರಶ್ನಿಸಿದ್ದಾರೆ ಎಂದು ಚೌರಿ ಪೊಲೀಸ್ ಠಾಣೆಯ ಇನ್ ಚಾರ್ಜ್ ಗಿರಿಜಾ ಶಂಕರ್ ಯಾದವ್ ಹೇಳಿದ್ದಾರೆ.

ಇದಕ್ಕೆ ಆ ವಿದ್ಯಾರ್ಥಿನಿ ಶಾಲಾ ಸಮವಸ್ತ್ರ ಖರೀದಿ ಮಾಡಿಲ್ಲ. ಅಪ್ಪ ನನಗೆ ತಂದುಕೊಟ್ಟ ನಂತರ ನಾನು ಸಮವಸ್ತ್ರ ಧರಿಸಿ ಬರುವೆ ಎಂದು ಹೇಳಿದ್ದಾಳೆ. ಇದನ್ನು ಕೇಳಿದೊಡನೆ ದುಬೆ ಬಾಲಕಿ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿ ಬೈದಿದ್ದಾರೆ. ಆಮೇಲೆ ಆಕೆಯನ್ನು ಶಾಲೆಯಿಂದ ಹೊರದಬ್ಬಿದ್ದಾರೆ ಎಂದು ಯಾದವ್ ಹೇಳಿದ್ದಾರೆ.

ಎರಡು ದಿನಗಳ ಹಿಂದೆಯಷ್ಟೇ ಉತ್ತರ ಪ್ರದೇಶದ  ಮುಜಾಫರ್ ನಗರದಲ್ಲಿ ಗ್ರಾಮದ ಮುಖ್ಯಸ್ಥ ದಲಿತ ವ್ಯಕ್ತಿಯೊಬ್ಬರ ಮೇಲೆ ಚಪ್ಪಲಿಯಿಂದ ಹಲ್ಲೆ ನಡೆಸಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಪೊಲೀಸರ ಪ್ರಕಾರ ದಲಿತ ವ್ಯಕ್ತಿ ದಿನೇಶ್ ಕುಮಾರ್(27) ಎಂಬಾತನ ಮೇಲೆ ಹಲ್ಲೆ ನಡೆದಿದೆ. ತಾಜ್​​ಪುರ್ ಗ್ರಾಮದ ಮುಖ್ಯಸ್ಥ ಶಕ್ತಿ ಮೋಹನ್ ಗುಜಾರ್ ಮತ್ತು ರೇತಾ ನಾಗ್ಲಾ ಗ್ರಾಮದ ಮಾಜಿ ಮುಖ್ಯಸ್ಥ ಗಜೇ ಸಿಂಗ್ ಸೇರಿ ದಿನೇಶ್ ಕುಮಾರ್ ಮೇಲೆ ಹಲ್ಲೆ ನಡೆಸಿದ್ದು, ಕೊಲ್ಲುವುದಾಗಿ ಬೆದರಿಕೆಯೊಡ್ಡಿದ್ದಾರೆ. ಹಲ್ಲೆ ನಡೆಸಿರುವ ಇಬ್ಬರು ವ್ಯಕ್ತಿಗಳ ವಿರುದ್ಧ ಐಪಿಸಿ ಮತ್ತು ಎಸ್​​ಸಿ/ ಎಸ್​​ಟಿ ವಿರುದ್ಧ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ನಗರದ ಸುಪರಿಟೆಂಡೆಂಟ್ ಆಫ್ ಪೊಲೀಸ್ ಅರ್ಪಿತ್ ವಿಜಯ್​​ವರ್ಗೀಯ ಹೇಳಿದ್ದಾರೆ. ಗ್ರಾಮದ ಮುಖ್ಯಸ್ಥ ಶಕ್ತಿ ಮೋಹನ್​​ನ್ನು ಪೊಲೀಸರು ಬಂಧಿಸಿದ್ದು, ಮತ್ತೊಬ್ಬ ಆರೋಪಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

Published On - 5:05 pm, Tue, 23 August 22

Follow Us
TV9 Web
TV9 Web

TV9 Kannada

Read More
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!