ಉತ್ತರ ಪ್ರದೇಶದಲ್ಲಿನ ಗ್ರಾಮದ ಮುಖ್ಯಸ್ಥನಿಂದ ದಲಿತ ವ್ಯಕ್ತಿ ಮೇಲೆ ಚಪ್ಪಲಿಯಿಂದ ಹಲ್ಲೆ; ಕೃತ್ಯ ಕ್ಯಾಮೆರಾದಲ್ಲಿ ಸೆರೆ
ಭೀಮ್ ಆರ್ಮಿ ಕಾರ್ಯಕರ್ತರು ಮತ್ತು ದಲಿತ ಸಮುದಾಯದ ಸದಸ್ಯರು ಈ ಕೃತ್ಯ ಖಂಡಿಸಿ ಚಪ್ಪರ್ ಪೊಲೀಸ್ ಠಾಣೆ ಹೊರಗೆ ಪ್ರತಿಭಟನೆ ನಡೆಸಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಒತ್ತಾಯಿಸಿದ್ದಾರೆ.

ಮುಜಾಫರ್ ನಗರ: ಉತ್ತರ ಪ್ರದೇಶದ (Uttar Pradesh) ಮುಜಾಫರ್ ನಗರದಲ್ಲಿ (Muzaffarnagar) ಗ್ರಾಮದ ಮುಖ್ಯಸ್ಥ ದಲಿತ ವ್ಯಕ್ತಿಯೊಬ್ಬರ ಮೇಲೆ ಚಪ್ಪಲಿಯಿಂದ ಹಲ್ಲೆ ನಡೆಸಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದೆ. ಪೊಲೀಸರ ಪ್ರಕಾರ ದಲಿತ ವ್ಯಕ್ತಿ (Dalit Man) ದಿನೇಶ್ ಕುಮಾರ್(27) ಎಂಬಾತನ ಮೇಲೆ ಹಲ್ಲೆ ನಡೆದಿದೆ. ತಾಜ್ಪುರ್ ಗ್ರಾಮದ ಮುಖ್ಯಸ್ಥ ಶಕ್ತಿ ಮೋಹನ್ ಗುಜಾರ್ ಮತ್ತು ರೇತಾ ನಾಗ್ಲಾ ಗ್ರಾಮದ ಮಾಜಿ ಮುಖ್ಯಸ್ಥ ಗಜೇ ಸಿಂಗ್ ಸೇರಿ ದಿನೇಶ್ ಕುಮಾರ್ ಮೇಲೆ ಹಲ್ಲೆ ನಡೆಸಿದ್ದು, ಕೊಲ್ಲುವುದಾಗಿ ಬೆದರಿಕೆಯೊಡ್ಡಿದ್ದಾರೆ. ಹಲ್ಲೆ ನಡೆಸಿರುವ ಇಬ್ಬರು ವ್ಯಕ್ತಿಗಳ ವಿರುದ್ಧ ಐಪಿಸಿ ಮತ್ತು ಎಸ್ಸಿ/ ಎಸ್ಟಿ ವಿರುದ್ಧ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ನಗರದ ಸುಪರಿಟೆಂಡೆಂಟ್ ಆಫ್ ಪೊಲೀಸ್ ಅರ್ಪಿತ್ ವಿಜಯ್ವರ್ಗೀಯ ಹೇಳಿದ್ದಾರೆ. ಗ್ರಾಮದ ಮುಖ್ಯಸ್ಥ ಶಕ್ತಿ ಮೋಹನ್ನ್ನು ಪೊಲೀಸರು ಬಂಧಿಸಿದ್ದು, ಮತ್ತೊಬ್ಬ ಆರೋಪಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.
In UP’s Muzaffarnagar, a village head and his people thrashed a SC youth with slippers in public and threatened him with death while abusing caste slurs.
They also recorded the incident and made it viral to humiliate the SC people. pic.twitter.com/MeiPTfo9KF
— Mission Ambedkar (@MissionAmbedkar) August 20, 2022
ಭೀಮ್ ಆರ್ಮಿ ಕಾರ್ಯಕರ್ತರು ಮತ್ತು ದಲಿತ ಸಮುದಾಯದ ಸದಸ್ಯರು ಈ ಕೃತ್ಯ ಖಂಡಿಸಿ ಚಪ್ಪರ್ ಪೊಲೀಸ್ ಠಾಣೆ ಹೊರಗೆ ಪ್ರತಿಭಟನೆ ನಡೆಸಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಒತ್ತಾಯಿಸಿದ್ದಾರೆ. ಪ್ರಸ್ತುತ ಪ್ರದೇಶದಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದಾರೆ.
Published On - 3:42 pm, Sun, 21 August 22
