ಉತ್ತರ ಪ್ರದೇಶದಲ್ಲಿನ ಗ್ರಾಮದ ಮುಖ್ಯಸ್ಥನಿಂದ ದಲಿತ ವ್ಯಕ್ತಿ ಮೇಲೆ ಚಪ್ಪಲಿಯಿಂದ ಹಲ್ಲೆ; ಕೃತ್ಯ ಕ್ಯಾಮೆರಾದಲ್ಲಿ ಸೆರೆ

ಭೀಮ್ ಆರ್ಮಿ ಕಾರ್ಯಕರ್ತರು ಮತ್ತು ದಲಿತ ಸಮುದಾಯದ ಸದಸ್ಯರು ಈ ಕೃತ್ಯ ಖಂಡಿಸಿ ಚಪ್ಪರ್ ಪೊಲೀಸ್ ಠಾಣೆ ಹೊರಗೆ ಪ್ರತಿಭಟನೆ ನಡೆಸಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಒತ್ತಾಯಿಸಿದ್ದಾರೆ.

ಉತ್ತರ ಪ್ರದೇಶದಲ್ಲಿನ ಗ್ರಾಮದ ಮುಖ್ಯಸ್ಥನಿಂದ ದಲಿತ ವ್ಯಕ್ತಿ ಮೇಲೆ ಚಪ್ಪಲಿಯಿಂದ ಹಲ್ಲೆ; ಕೃತ್ಯ ಕ್ಯಾಮೆರಾದಲ್ಲಿ ಸೆರೆ
ದಲಿತ ವ್ಯಕ್ತಿ ಮೇಲೆ ಹಲ್ಲೆ
Edited By:

Updated on: Aug 21, 2022 | 4:50 PM

ಮುಜಾಫರ್ ನಗರ: ಉತ್ತರ ಪ್ರದೇಶದ (Uttar Pradesh) ಮುಜಾಫರ್ ನಗರದಲ್ಲಿ (Muzaffarnagar) ಗ್ರಾಮದ ಮುಖ್ಯಸ್ಥ ದಲಿತ ವ್ಯಕ್ತಿಯೊಬ್ಬರ ಮೇಲೆ ಚಪ್ಪಲಿಯಿಂದ ಹಲ್ಲೆ ನಡೆಸಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದೆ. ಪೊಲೀಸರ ಪ್ರಕಾರ ದಲಿತ ವ್ಯಕ್ತಿ (Dalit Man) ದಿನೇಶ್ ಕುಮಾರ್(27) ಎಂಬಾತನ ಮೇಲೆ ಹಲ್ಲೆ ನಡೆದಿದೆ. ತಾಜ್​​ಪುರ್ ಗ್ರಾಮದ ಮುಖ್ಯಸ್ಥ ಶಕ್ತಿ ಮೋಹನ್ ಗುಜಾರ್ ಮತ್ತು ರೇತಾ ನಾಗ್ಲಾ ಗ್ರಾಮದ ಮಾಜಿ ಮುಖ್ಯಸ್ಥ ಗಜೇ ಸಿಂಗ್ ಸೇರಿ ದಿನೇಶ್ ಕುಮಾರ್ ಮೇಲೆ ಹಲ್ಲೆ ನಡೆಸಿದ್ದು, ಕೊಲ್ಲುವುದಾಗಿ ಬೆದರಿಕೆಯೊಡ್ಡಿದ್ದಾರೆ. ಹಲ್ಲೆ ನಡೆಸಿರುವ ಇಬ್ಬರು ವ್ಯಕ್ತಿಗಳ ವಿರುದ್ಧ ಐಪಿಸಿ ಮತ್ತು ಎಸ್​​ಸಿ/ ಎಸ್​​ಟಿ ವಿರುದ್ಧ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ನಗರದ ಸುಪರಿಟೆಂಡೆಂಟ್ ಆಫ್ ಪೊಲೀಸ್ ಅರ್ಪಿತ್ ವಿಜಯ್​​ವರ್ಗೀಯ ಹೇಳಿದ್ದಾರೆ. ಗ್ರಾಮದ ಮುಖ್ಯಸ್ಥ ಶಕ್ತಿ ಮೋಹನ್​​ನ್ನು ಪೊಲೀಸರು ಬಂಧಿಸಿದ್ದು, ಮತ್ತೊಬ್ಬ ಆರೋಪಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

ಭೀಮ್ ಆರ್ಮಿ ಕಾರ್ಯಕರ್ತರು ಮತ್ತು ದಲಿತ ಸಮುದಾಯದ ಸದಸ್ಯರು ಈ ಕೃತ್ಯ ಖಂಡಿಸಿ ಚಪ್ಪರ್ ಪೊಲೀಸ್ ಠಾಣೆ ಹೊರಗೆ ಪ್ರತಿಭಟನೆ ನಡೆಸಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಒತ್ತಾಯಿಸಿದ್ದಾರೆ.
ಪ್ರಸ್ತುತ ಪ್ರದೇಶದಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದಾರೆ.

Published On - 3:42 pm, Sun, 21 August 22