ತಮಿಳುನಾಡು: ತಾನು ಕಲಿತ ಶಾಲೆಯ ವಾರ್ಷಿಕೋತ್ಸವದಲ್ಲಿ ಪಾಲ್ಗೊಳ್ಳಲು ಬಂದಿದ್ದ ದಲಿತ ಯುವಕನಿಗೆ ಥಳಿತ

ತಾನು ಓದಿದ ಶಾಲೆಯ ವಾರ್ಷಿಕೋತ್ಸಕ್ಕೆ ಪಾಲ್ಗೊಳ್ಳಲು ತೆರಳಿದ್ದ ದಲಿತ ಯುವಕನನ್ನು ಥಳಿಸಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಆತ 8ನೇ ತರಗತಿವರೆಗೆ ಓದಿದ್ದ ಶಾಲೆಯಲ್ಲಿಯೇ ಆತನನ್ನು ನಿಂದಿಸಿ ಹಲ್ಲೆ ನಡೆಸಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಶ್ಯಾಮ್​ಕುಮಾರ್​ನನ್ನು ತಿರುಪ್ಪುರ್ ಮೆಡಿಕಲ್ ಕಾಲೇಜು, ಆಸ್ಪತ್ರೆಗೆ ದಾಖಲಿಸಲಾಗಿದೆ. ನಲ್ಲೂರು ಪೊಲೀಸರು ಕಾರ್ತಿಕ್ ಹಾಗೂ ಆತನ ಸಂಬಂಧಿ ಬಾಲಸುಬ್ರಮಣಿಯಂ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ತಮಿಳುನಾಡು: ತಾನು ಕಲಿತ ಶಾಲೆಯ ವಾರ್ಷಿಕೋತ್ಸವದಲ್ಲಿ ಪಾಲ್ಗೊಳ್ಳಲು ಬಂದಿದ್ದ ದಲಿತ ಯುವಕನಿಗೆ ಥಳಿತ
Image Credit source: The New Indian Express

Updated on: Mar 27, 2024 | 7:49 AM

ತಾನು ಓದಿದ ಶಾಲೆಯ ವಾರ್ಷಿಕೋತ್ಸಕ್ಕೆ ಪಾಲ್ಗೊಳ್ಳಲು ತೆರಳಿದ್ದ ದಲಿತ ಯುವಕನನ್ನು ಥಳಿಸಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಆತ 8ನೇ ತರಗತಿವರೆಗೆ ಓದಿದ್ದ ಶಾಲೆಯಲ್ಲಿಯೇ ಆತನನ್ನು ನಿಂದಿಸಿ ಹಲ್ಲೆ ನಡೆಸಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಶ್ಯಾಮ್​ಕುಮಾರ್​ನನ್ನು ತಿರುಪ್ಪುರ್ ಮೆಡಿಕಲ್ ಕಾಲೇಜು, ಆಸ್ಪತ್ರೆಗೆ ದಾಖಲಿಸಲಾಗಿದೆ.
ನಲ್ಲೂರು ಪೊಲೀಸರು ಕಾರ್ತಿಕ್ ಹಾಗೂ ಆತನ ಸಂಬಂಧಿ ಬಾಲಸುಬ್ರಮಣಿಯಂ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಕಳೆದ ಶುಕ್ರವಾರ ನಡೆದ ಘಟನೆ ಇದು. ಅಂದು ಶಾಲೆಯ ವಾರ್ಷಿಕೋತ್ಸವ ಎಂಬ ಖುಷಿಯಿಂದ ಕೆಲಸಕ್ಕೆ ಅರ್ಧ ದಿನ ರಜೆ ಹಾಕಿ ಶಾಲೆಗೆ ತೆರಳಿದ್ದರು. ಅಲ್ಲಿ ಯಾಕೆ ಬಂದೆ ಎಂದು ಕೇಳಿ ಕಾರ್ತಿಕ್ ಎಂಬಾತ ಜಾತಿ ನಿಂದನೆ ಮಾಡಿ ಕಾಲಿನಿಂದ ಒದ್ದಿದ್ದ, ಬಳಿಕ ಸಂಬಂಧಿಯೊಂದಿಗೆ ಸೇರಿ ಹಿಗ್ಗಾಮುಗ್ಗ ಥಳಿಸಿದ್ದರು.

ದ್ವಿತೀಯ ಪಿಯುಸಿಯಲ್ಲಿ ಫೇಲ್ ಆದ ಕಾರಣ ಶ್ಯಾಮ್​ಕುಮಾರ್ ಕಳೆದ ಎರಡು ವರ್ಷಗಳಿಂದ ರಿಯಲ್ ಎಸ್ಟೇಟ್ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ತಂದೆ ಕೃಷಿ ಕಾರ್ಮಿಕರಾಗಿದ್ದು, ತಾಯಿ ಗಾರ್ಮೆಂಟ್ಸ್​ನಲ್ಲಿ ಕೆಲಸ ಮಾಡುತ್ತಿದ್ದಾರೆ.

ಅವರು ಪ್ರಭಾವಶಾಲಿಗಳು ಹಾಗಾಗಿ ದೂರು ಕೊಟ್ಟು ಇಷ್ಟು ದಿನವಾದರೂ ಆರಾಮವಾಗಿ ತಿರುಗಾಡಿಕೊಂಡಿದ್ದಾರೆ ಎಂದು ಶ್ಯಾಮ್​ಪ್ರಸಾದ್ ಹೇಳಿದ್ದಾರೆ.

ಮತ್ತಷ್ಟು ಓದಿ: ಕಳ್ಳತನ ಮಾಡಿದ ಆರೋಪ ದಲಿತ ಬಾಲಕನನ್ನು ಕಂಬಕ್ಕೆ ಕಟ್ಟಿಹಾಕಿ ಥಳಿತ

ನಾವು ಅಪರಾಧಿಗಳನ್ನು ಗುರುತಿಸಿದ್ದೇವೆ ಮತ್ತು ಅವರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದೇವೆ. ನಾವು ಚುನಾವಣಾ ಕರ್ತವ್ಯದಲ್ಲಿ ನಿರತರಾಗಿರುವುದರಿಂದ ಅವರನ್ನು ಇನ್ನೂ ಬಂಧಿಸಿಲ್ಲ. ಶೀಘ್ರದಲ್ಲೇ ಅವರನ್ನು ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
Loading...
Unable to load recommendations.
Follow Us