ಬಿಹಾರದಲ್ಲಿ ದಲಿತ ಮಹಿಳೆಗೆ ಸಾರ್ವಜನಿಕವಾಗಿ ಪೊಲೀಸರಿಂದ ಥಳಿತ: ವಿಡಿಯೋ ವೈರಲ್

ಬಿಹಾರದ ಸೀತಾಮರ್ಹಿಯಲ್ಲಿ ದಲಿತ ಮಹಿಳೆಯೊಬ್ಬರನ್ನು ಸಾರ್ವಜನಿಕವಾಗಿ ಪೋಲೀಸರು ಥಳಿಸಿದ ವಿಡಿಯೋ ಈಗ ಭಾರಿ ವೈರಲ್​​ ಆಗಿದೆ. ಈ ಬಗ್ಗೆ ಅಲ್ಲಿನ ಜನರು ಕಳವಳ ವ್ಯಕ್ತಪಡಿಸಿದ್ದಾರೆ. ತಕ್ಷಣ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ಕಡೆಯ ಗುಂಪಿನ ನಡುವೆ ಮಾರಾಮಾರಿ ನಡೆದಿದೆ. ಸಂದರ್ಭದಲ್ಲಿ ಈ ಸುವ್ಯವಸ್ಥೆಯನ್ನು ಕಾಪಾಡಲು ಅಧಿಕಾರಿಗಳು ಈ ಕ್ರಮವನ್ನು ತೆಗೆದುಕೊಂಡಿದ್ದಾರೆ.

ಬಿಹಾರದಲ್ಲಿ ದಲಿತ ಮಹಿಳೆಗೆ ಸಾರ್ವಜನಿಕವಾಗಿ ಪೊಲೀಸರಿಂದ ಥಳಿತ: ವಿಡಿಯೋ ವೈರಲ್
Follow us
ಅಕ್ಷಯ್​ ಪಲ್ಲಮಜಲು​​
|

Updated on: Jan 01, 2024 | 12:51 PM

ಪಟ್ನಾ, ಜ.1: ಬಿಹಾರದಲ್ಲಿ ಮಹಿಳೆಯೊಬ್ಬರ ಮೇಲೆ ಮನಬಂದಂತೆ ಪೊಲೀಸ್​​​ ಅಧಿಕಾರಿಯೊಬ್ಬರು ಥಳಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ. ಬಿಹಾರದ ಸೀತಾಮರ್ಹಿಯಲ್ಲಿ ದಲಿತ ಮಹಿಳೆಯೊಬ್ಬರನ್ನು ಸಾರ್ವಜನಿಕವಾಗಿ ಪೋಲೀಸರು ಥಳಿಸಿದ ವಿಡಿಯೋ ಈಗ ಭಾರಿ ವೈರಲ್​​ ಆಗಿದೆ. ಈ ಬಗ್ಗೆ ಅಲ್ಲಿನ ಜನರು ಕಳವಳ ವ್ಯಕ್ತಪಡಿಸಿದ್ದಾರೆ. ತಕ್ಷಣ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ಕಡೆಯ ಗುಂಪಿನ ನಡುವೆ ಮಾರಾಮಾರಿ ನಡೆದಿದೆ. ಸಂದರ್ಭದಲ್ಲಿ ಈ ಸುವ್ಯವಸ್ಥೆಯನ್ನು ಕಾಪಾಡಲು ಅಧಿಕಾರಿಗಳು ಈ ಕ್ರಮವನ್ನು ತೆಗೆದುಕೊಂಡಿದ್ದಾರೆ ಎಂದು ಹೇಳಲಾಗಿದೆ.

ಸುರಸಂದ್ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ರಾಜ್‌ಕಿಶೋರ್ ಸಿಂಗ್ ಅವರು ಮಹಿಳೆಯೊಬ್ಬರಿಗೆ ನಡುರಸ್ತೆಯಲ್ಲಿ ಮನಬಂದಂತೆ ಲಾಠಿ ಬಿಸಿದ್ದಾರೆ. ಸುರಸಂದ್ ಮಾರುಕಟ್ಟೆಯಲ್ಲಿ ಜನಸಮೂಹ ಹೆಚ್ಚಾಗಿದ್ದು ಈ ಸಮಯದಲ್ಲಿ ಇಬ್ಬರು ಮಹಿಳೆಯರ ಜಗಳ ಮಾಡಿಕೊಂಡಿದ್ದಾರೆ. ಈ ಸಮಯದಲ್ಲಿ ಪೊಲೀಸರು, ಸಿಕ್ಕದವರ ಮೇಲೆ ಲಾಠಿ ಚಾರ್ಚ್​​​ ಮಾಡಿರುವ ವಿಡಿಯೋದಲ್ಲಿ ತೋರಿಸಲಾಗಿದೆ.

ಇದೀಗ ಈ ವಿಡಿಯೋದಿಂದ ಸಾರ್ವಜನಿಕರು ಪೊಲೀಸರ ಮೇಲೆ ಅಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆಯ ಕುರಿತು ತನಿಖೆಗೆ ಆದೇಶಿಸಲಾಗಿದೆ ಎಂದು ಸೀತಾಮರ್ಹಿ ಪೊಲೀಸರು ತಿಳಿಸಿದ್ದಾರೆ. ಇಬ್ಬರು ಮಹಿಳೆಯರು ರಸ್ತೆಯಲ್ಲಿ ಜಗಳವಾಡುತ್ತಿದ್ದ ಕಾರಣ ಪೊಲೀಸರು ಈ ಕ್ರಮ ತೆಗೆದುಕೊಂಡಿದ್ದಾರೆ ಎಂದು ಪೋಲಿಸರು ಹೇಳಿದ್ದಾರೆ. ಈ ಪ್ರದೇಶದಲ್ಲಿ ಬಾಲಕಿಯೊಬ್ಬಳು ಅಪಹರಣ ಆಗಿದ್ದಾಳೆ, ಈ ಕಾರಣಕ್ಕೆ ಜಗಳ ನಡೆದಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸದನದಲ್ಲಿ ಬಿಜೆಪಿ ಶಾಸಕರುಗಳ ವಿಡಿಯೋ ಗೇಮ್, ಪಾನ್ ಮಸಾಲ ವಿವಾದ: ವಿಡಿಯೋ ವೈರಲ್ ಮಾಡಿದ ಎಸ್ಪಿ ಪಕ್ಷ

ಬಾಲಕಿಯನ್ನು ರಕ್ಷಣೆ ಮಾಡಲಾಗಿದೆ. ನಂತರ ಎರಡು ಕಡೆಯವರನ್ನು ಪೊಲೀಸ್​​​ ಠಾಣೆಗೆ ಕರೆಸಿಕೊಳ್ಳಲಾಗಿದೆ. ಈ ಸಂದರ್ಭದಲ್ಲಿ ಇಬ್ಬರು ಮಹಿಳೆಯರು ಜಗಳ ಮಾಡಿದ್ದಾರೆ. ಇವರಿಬ್ಬರ ಜಗಳ ಟ್ರಾಪಿಕ್​​ ಕಾರಣವಾಗಿದೆ. ಅವರನ್ನು ಚದುರಿಸಲು ನಮ್ಮ ಪೊಲೀಸರು ಈ ಕ್ರಮ ತೆಗೆದುಕೊಂಡಿದ್ದಾರೆ ಎಂದು ಉಪವಿಭಾಗೀಯ ಪೊಲೀಸ್ ಅಧಿಕಾರಿ (ಎಸ್‌ಡಿಪಿಒ) ವಿನೋದ್ ಕುಮಾರ್ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ