ಇಸ್ಲಾಂ ಮತ್ತು ಕ್ರೈಸ್ತ ಧರ್ಮಗಳಿಗೆ ಮತಾಂತರವಾಗುವ ದಲಿತರಿಗೆ ಮೀಸಲಾತಿ ಸೌಲಭ್ಯಗಳಿಲ್ಲ: ರವಿಶಂಕರ್ ಪ್ರಸಾದ್

ಇಸ್ಲಾಂ ಮತ್ತು ಕ್ರೈಸ್ತ ಧರ್ಮಗಳಿಗೆ ಮತಾಂತರಗೊಳ್ಳುವವರನ್ನು ಚುನಾವಣೆಯಲ್ಲಿ ಸ್ಫರ್ಧಿಸದಂತೆ ನಿಷೇಧಿಸಲು ಜನ ಪ್ರಾತಿನಿಧ್ಯ ಕಾಯ್ದೆಗೆ ತಿದ್ದುಪಡಿ ತರುವ ಉದ್ದೇಶ ಸರ್ಕಾರಕ್ಕಿಲ್ಲ ಎಂದು ಕಾನೂನು ಸಚಿವ ರವಿಶಂಕರ್ ಪ್ರಸಾದ್ ಸ್ಪಷ್ಟಪಡಿಸಿದರು.

ಇಸ್ಲಾಂ ಮತ್ತು ಕ್ರೈಸ್ತ ಧರ್ಮಗಳಿಗೆ ಮತಾಂತರವಾಗುವ ದಲಿತರಿಗೆ ಮೀಸಲಾತಿ ಸೌಲಭ್ಯಗಳಿಲ್ಲ: ರವಿಶಂಕರ್ ಪ್ರಸಾದ್
ಕಾನೂನು ಸಚಿವ ರವಿಶಂಕರ್ ಪ್ರಸಾದ್
Follow us
ಅರುಣ್​ ಕುಮಾರ್​ ಬೆಳ್ಳಿ
|

Updated on:Feb 12, 2021 | 10:33 PM

ದೆಹಲಿ: ದಲಿತ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬ ತನ್ನ ಜಾತಿ ಬಿಟ್ಟು ಇಸ್ಲಾಂ ಇಲ್ಲವೆ ಕ್ರೈಸ್ತ ಧರ್ಮಕ್ಕೆ ಮತಾಂತರ ಹೊಂದಿದ್ದರೆ ಅ ವ್ಯಕ್ತಿಗೆ ಯಾವುದೇ ಮೀಸಲು ಕ್ಷೇತ್ರದಿಂದ ವಿಧಾನಸಬೆ ಇಲ್ಲವೇ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಅವಕಾಶವಿಲ್ಲ ಎಂದು ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಗುರುವಾರದಂದು ರಾಜ್ಯಸಭೆಯಲ್ಲಿ ಹೇಳಿದರು. ಪ್ರಶ್ನೋತ್ತರ ವೇಳೆಯಲ್ಲಿ ತಮ್ಮ ಪಕ್ಷದವರೇ ಆದ ಜಿ.ವಿ.ಎಲ್. ನರಸಿಂಹರಾವ್ ಈ ವಿಷಯಕ್ಕೆ ಸಂಬಂಧಿಸಿದಂತೆ ಕೇಳಿದ ಪ್ರಶ್ನೆಯೊಂದಕ್ಕೆ ಉತ್ತರ ನೀಡಿದ ಸಚಿವರು, ಹಿಂದೆ ದಲಿತ ಸಮುದಾಯದಲ್ಲಿದ್ದು ನಂತರ ಇಸ್ಲಾಂ ಇಲ್ಲವೇ ಕ್ರೈಸ್ತ ದರ್ಮಕ್ಕೆ ಮತಾಂತಗೊಂಡವರಿಗೆ ಮೀಸಲು ಕ್ಷೇತ್ರಗಳಿಂದ ಚುನಾವಣೆಗೆ ಸ್ಪರ್ಧಿಸುವ ಅವಕಾಶ ನೀಡಲಾಗದು ಅಂತ ಹೇಳಿದರು.

ಮತಾಂತರಗೊಂಡ ದಲಿತ ಸಮುದಾಯದ ಜನರು ಮೀಸಲು ಕ್ಷೇತ್ರಗಳಿಂದ ಸ್ಫರ್ಧಿಸುವ ಅರ್ಹತೆ ಬಗ್ಗೆ ಮಾತಾಡಿದ ಸಚಿವರು, ‘ಸಂವಿಧಾನದ ಅನಚ್ಛೇದ 3ರ (ಪರಿಶಿಷ್ಟ ಜಾತಿಗಳು) ಪ್ರಕಾರ ಹಿಂದೂ, ಸಿಖ್ ಮತ್ತು ಬೌದ್ಧ ಧರ್ಮಗಳನ್ನು ಬಿಟ್ಟು ಬೇರೆ ಯಾವುದೇ ಧರ್ಮವನ್ನು ಪಾಲಿಸುವ ವ್ಯಕ್ತಿಯನ್ನು ದಲಿತ ಸಮುದಾಯಕ್ಕೆ ಸೇರಿದವನೆಂದು ಪರಿಗಣಿಸಲಾಗದು’ ಎಂದರು.

ಇಸ್ಲಾಂ ಮತ್ತು ಕ್ರೈಸ್ತ ಧರ್ಮಕ್ಕೆ ಸೇರುವ ದಲಿತರು ಮತ್ತು ಹಿಂದೂ, ಸಿಖ್ ಹಾಗೂ ಭೌದ್ಧ ಧರ್ಮಗಳಲ್ಲೇ ಉಳಿದುಕೊಳ್ಳುವ ದಲಿತರ ನಡುವಿನ ವ್ಯತ್ಯಾಸವನ್ನು ಕಾನೂನು ಸಚಿವರು ವಿವರಿಸಿದರು. 1950ರಲ್ಲಿ ಜವಾಹರಲಾಲ್ ನೆಹರೂ ನೇತೃತ್ವದ ಸರ್ಕಾರವುಹಿಂದೂ ಧರ್ಮ ಪಾಲನೆ ಮಾಡುವವರಿಗೆ ಮಾತ್ರ ‘ಪರಿಶಿಷ್ಟ ಜಾತಿ’ ಅನ್ವಯಿಸುತ್ತದೆ ಎಂದು ಪಾಸು ಮಾಡಿದ ಆದೇಶ 1956ರಲ್ಲಿ ಸಿಖ್​ ಧರ್ಮ ಮತ್ತು 1990 ರಲ್ಲಿ ಬೌದ್ಧ ಧರ್ಮಕ್ಕೆ ವಿಸ್ತರಿಸಲ್ಪಟ್ಟಿತು ಎಂದು ಸಚಿವರು ಹೇಳಿದರು.

Ravishankar Prasad

ಜಿ.ವಿ.ಎಲ್.ನರಸಿಂಹ ರಾವ್

ಇಸ್ಲಾಂ ಮತ್ತು ಕ್ರೈಸ್ತ ಧರ್ಮಗಳಿಗೆ ಮತಾಂತರಗೊಳ್ಳುವವರನ್ನು ಚುನಾವಣೆಯಲ್ಲಿ ಸ್ಫರ್ಧಿಸದಂತೆ ನಿಷೇಧಿಸಲು ಜನ ಪ್ರಾತಿನಿಧ್ಯ ಕಾಯ್ದೆಗೆ ತಿದ್ದುಪಡಿ ತರುವ ಉದ್ದೇಶ ಸರ್ಕಾರಕ್ಕಿಲ್ಲ ಎಂದು ಸ್ಪಷ್ಟಪಡಿಸಿದರು.

ಕಡೆಗಣಿಸಲ್ಪಟ್ಟಿರುವ ಮುಸ್ಲಿಂ ಮತ್ತು ಕ್ರೈಸ್ತರು ಮೀಸಲಾತಿಯ ಉಪಯೋಗಗಳನ್ನು ಪಡೆಯಬಹುದೇ ಎಂದು ಕಾಂಗ್ರೆಸ್ ಪಕ್ಷದ ದಿಗ್ವಿಜಯ ಸಿಂಗ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಪ್ರಸಾದ್, ಹಿಂದೂ, ಸಿಖ್ ಮತ್ತು ಬೌದ್ಧ ಧರ್ಮದೊಳಗಿನ ದಲಿತರು ಮಾತ್ರ ಮೀಸಲಾತಿ ಪ್ರಯೋಜನಗಳನ್ನು ಪಡೆಯಲು ಅರ್ಹರು ಎಂದು ಸ್ಪಷ್ಟ ಮಾತುಗಳಲ್ಲಿ ಹೇಳಿದರು. ಬೇರೆ ದರ್ಮಗಳಲ್ಲಿ ತಾರತಮ್ಯವಿಲ್ಲ ಎಂಬ ಪ್ರಚೋದನೆಯ ಆಧಾರದಲ್ಲಿ ಮತಾಂತರಗೊಂಡಿರುವ ದಲಿತರು ಮೀಸಲಾತಿಯ ಪ್ರಯೋಜನಗಳನ್ನು ಪಡೆಯಲು ಅರ್ಹರಲ್ಲ ಎಂದು ಸಚಿವರು ಹೇಳಿದರು.

ಇದನ್ನೂ ಓದಿ: Mallikarjun Kharge ವ್ಯಕ್ತಿ-ವ್ಯಕ್ತಿತ್ವ | ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ನಡೆದು ಬಂದ ಹಾದಿ

ಈ ಹಿಂದೆ ಸರ್ವೋಚ್ಛ ನ್ಯಾಯಾಲಯ ಸಹ ಮೀಸಲಾತಿಯ ಸೌಲಭ್ಯಗಳು ಕೇವಲ ಭಾರತೀಯ ಧರ್ಮಗಳಿಗೆ ಸೇರಿದ ದಲಿತರಿಗೆ ಮಾತ್ರ ಸಿಗಬೇಕು ಎಂದು ತೀರ್ಪು ನೀಡಿತ್ತು.

‘ಒಬ್ಬ ವ್ಯಕ್ತಿ ಹಿಂದೂ ಧರ್ಮವನ್ನು ತ್ಯಜಿಸಿ, ಕ್ರೈಸ್ತ ಧರ್ಮವನ್ನು ಆಲಂಗಿಸಿಕೊಂಡರೆ ಹಿಂದೂ ಧರ್ಮಕ್ಕೆ ಸಂಬಂಧಿಸಿದ ಅವನ ಸಾಮಾಜಿಕ ಮತ್ತು ಆರ್ಥಿಕ ಹೊಣೆಗಾರಿಕೆಗಳು ಮುಗಿದು ಹೋಗುವುದರಿಂದ ಅವನಿಗೆ ಪರಿಶಿಷ್ಟ ಜಾತಿಗೆ ಸೇರಿದವನೆಂದು ಪರರಿಗಣಿಸುವುದು ಸಾಧ್ಯವಿಲ್ಲ ಮತ್ತು ಮೀಸಲಾತಿಗೆ ಸಂಬಂಧಿಸಿದ ಸಹ ಸೌಲಭ್ಯಗಳನ್ನು ಅವನಿಗೆ ನೀಡುವ ಪ್ರಮೇಯ ಉದ್ಭವಿಸುವುದಿಲ್ಲ,’ ಎಂದು 2015 ರ ಪ್ರಕರಣವೊಂದಕ್ಕೆ ನೀಡಿದ ತೀರ್ಪಿನಲ್ಲಿ ಸುಪ್ರೀಮ್ ಕೊರ್ಟ್​ ಹೇಳಿತ್ತು.

Published On - 10:32 pm, Fri, 12 February 21

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ