Dana Cyclone: ಒಡಿಶಾ ಕರಾವಳಿಗೆ ಅಪ್ಪಳಿಸಿದ ಡಾನಾ ಚಂಡಮಾರುತ; ಭಾರಿ ಮಳೆ, ಹಲವೆಡೆ ಭೂಕುಸಿತ

ಡಾನಾ ಚಂಡಮಾರುತವು ಒಡಿಶಾ ಮತ್ತು ಪಶ್ಚಿಮ ಬಂಗಾಳದಲ್ಲಿ ಭಾರಿ ಹಾನಿಯನ್ನುಂಟುಮಾಡಿದೆ. ಗಂಟೆಗೆ 110-120 ಕಿಲೋಮೀಟರ್ ವೇಗದಲ್ಲಿ ಚಂಡಮಾರುತ ಒಡಿಶಾ ಕರಾವಳಿಯನ್ನು ಅಪ್ಪಳಿಸಿದೆ. ಭಾರಿ ಮಳೆ, ರೈಲುಗಳ ರದ್ದತಿ ಮತ್ತು ಜನರ ಸ್ಥಳಾಂತರದಿಂದಾಗಿ ಅನೇಕ ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.

Dana Cyclone: ಒಡಿಶಾ ಕರಾವಳಿಗೆ ಅಪ್ಪಳಿಸಿದ ಡಾನಾ ಚಂಡಮಾರುತ; ಭಾರಿ ಮಳೆ, ಹಲವೆಡೆ ಭೂಕುಸಿತ
ಒಡಿಶಾ ಕರಾವಳಿಗೆ ಅಪ್ಪಳಿಸಿದ ಡಾನಾ ಚಂಡಮಾರುತImage Credit source: PTI
Follow us
Ganapathi Sharma
|

Updated on: Oct 25, 2024 | 9:15 AM

ಭುವನೇಶ್ವರ, ಅಕ್ಟೋಬರ್ 25: ಒಡಿಶಾ ಹಾಗೂ ಪಶ್ಚಿಮ ಬಂಗಾಳದಲ್ಲಿ ಡಾನಾ ಚಂಡಮಾರುತ ಉಗ್ರ ಸ್ವರೂಪ ತಾಳಿದೆ. ಗುರುವಾರ ತಡರಾತ್ರಿ ಡಾನಾ ಚಂಡಮಾರುತ ಒಡಿಶಾ ಕರಾವಳಿಗೆ ಅಪ್ಪಳಿಸಿದ್ದು, ಆ ಸಮಯದಲ್ಲಿ ಗಾಳಿಯ ವೇಗ ಗಂಟೆಗೆ 110-120 ಕಿಲೋಮೀಟರ್ ಆಗಿತ್ತು. ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಚಂಡಮಾರುತದ ಪರಿಣಾಮ ಒಡಿಶಾ, ಪಶ್ಚಿಮ ಬಂಗಾಳ ಮಾತ್ರವಲ್ಲದೆ ಅನೇಕ ರಾಜ್ಯಗಳಲ್ಲಿ ಕಂಡುಬಂದಿದೆ.

ಒಡಿಶಾದಲ್ಲಿ ಭಾರಿ ಮಳೆ

ಒಡಿಶಾದ ಭುವನೇಶ್ವರ್, ಪುರಿ, ಪರದೀಪ್ ಮತ್ತು ಧಮ್ರಾ ಬಂದರು ಪ್ರದೇಶಗಳಲ್ಲಿ ನಿರಂತರವಾಗಿ ಭಾರಿ ಮಳೆಯಾಗುತ್ತಿದೆ. ಒಡಿಶಾದ ಸುಮಾರು 12 ಜಿಲ್ಲೆಗಳಲ್ಲಿ ಹೈ ಅಲರ್ಟ್ ಮುಂದುವರಿದಿದೆ. ಮುಂದಿನ ಎರಡು ದಿನಗಳ ಕಾಲ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಸೂಚಿಸಿದೆ. ಒಡಿಶಾ ಸರ್ಕಾರವು ಸುಮಾರು 800 ಪರಿಹಾರ ಕೇಂದ್ರಗಳನ್ನು ತೆರೆದಿದ್ದು, ಭಾರತೀಯ ಕರಾವಳಿ ಕಾವಲು ಪಡೆ, ಎನ್‌ಡಿಆರ್‌ಎಫ್ ಮತ್ತು ಒಡಿಆರ್‌ಎಫ್ ತಂಡಗಳು ರಕ್ಷಣೆ, ಪರಿಹಾರ ಕಾರ್ಯದಲ್ಲಿ ನಿರತವಾಗಿವೆ.

300 ಕ್ಕೂ ಹೆಚ್ಚು ರೈಲುಗಳು ರದ್ದು

ದಾನಾ ಚಂಡಮಾರುತವು ಪಶ್ಚಿಮ ಬಂಗಾಳದಲ್ಲೂ ಭಾರಿ ಹಾನಿಯನ್ನು ಉಂಟುಮಾಡಿದೆ. ಸಿಎಂ ಮಮತಾ ಬ್ಯಾನರ್ಜಿ ರಾತ್ರಿಯಿಡೀ ಜಾಗರಣೆ ಮಾಡಿ ಪರಿಸ್ಥಿತಿ ಅವಲೋಕಿಸಿದರು. ಪಶ್ಚಿಮ ಬಂಗಾಳ, ಒಡಿಶಾ ಮತ್ತು ಛತ್ತೀಸ್‌ಗಢದ ಮೂಲಕ ಹಾದುಹೋಗುವ 300 ಕ್ಕೂ ಹೆಚ್ಚು ರೈಲುಗಳನ್ನು ರದ್ದುಗೊಳಿಸಲಾಗಿದೆ.

ಜಾರ್ಖಂಡ್‌ನಲ್ಲೂ ಭಾರಿ ಮಳೆ

ದಾನಾ ಚಂಡಮಾರುತದ ಪ್ರಭಾವ ಜಾರ್ಖಂಡ್‌ನಲ್ಲೂ ಕಾಣಿಸಿಕೊಂಡಿದೆ. ಮುಂದಿನ ಎರಡು ದಿನಗಳಲ್ಲಿ ರಾಂಚಿ, ಜಮ್‌ಶೆಡ್‌ಪುರ, ಚೈಬಾಸಾ ಮತ್ತು ಸೆರೈಕೆಲಾ-ಖುಂಟಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಒಡಿಶಾ ರಾಜಧಾನಿ ಭುವನೇಶ್ವರದಲ್ಲಿರುವ ವಿಶೇಷ ಪರಿಹಾರ ಆಯುಕ್ತರ ಕಚೇರಿಯ ಬಳಿ ಗಾಳಿ ಮಳೆಗೆ ಮರಗಳು ಧರೆಗುರುಳಿವೆ. ನೆರೆಯ ಪಶ್ಚಿಮ ಬಂಗಾಳ, ಪೂರ್ವ ಮಿಡ್ನಾಪುರ ಕೂಡ ಚಂಡಮಾರುತದ ಪ್ರಭಾವಕ್ಕೆ ಸಾಕ್ಷಿಯಾಗಿವೆ.

ವಿಮಾನ ನಿಲ್ದಾಣ ಸೇವೆಗಳು ಪುನರಾರಂಭ

ಮುನ್ನೆಚ್ಚರಿಕೆ ಕ್ರಮಗಳ ಭಾಗವಾಗಿ ಗುರುವಾರ ಸಂಜೆ ಸ್ಥಗಿತಗೊಂಡಿದ್ದ ಭುವನೇಶ್ವರದ ಬಿಜು ಪಟ್ನಾಯಕ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಕೋಲ್ಕತ್ತಾದ ನೇತಾಜಿ ಸುಭಾಷ್ ಚಂದ್ರ ಬೋಸ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸೇವೆಗಳು ಇಂದು ಬೆಳಿಗ್ಗೆ 8 ಗಂಟೆಗೆ ಪುನರಾರಂಭಗೊಂಡಿವೆ.

ಇದನ್ನೂ ಓದಿ: ಒಡಿಶಾ, ಬಂಗಾಳದಲ್ಲಿ ಇಂದು ರಾತ್ರಿಯಿಂದ ಡಾನಾ ಚಂಡಮಾರುತದ ಅಬ್ಬರ; 10 ಲಕ್ಷ ಜನರ ಸ್ಥಳಾಂತರ

ಬಂಗಾಳದಲ್ಲಿ 2,43,374 ಜನರು ಶಿಬಿರಗಳಲ್ಲಿ ಆಶ್ರಯ ಪಡೆದಿದ್ದಾರೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಒಡಿಶಾದಲ್ಲಿ, ಸುಮಾರು 5.8 ಲಕ್ಷ ಜನರನ್ನು ಸ್ಥಳಾಂತರಿಸಲಾಗಿತ್ತು. ಇವರೆಲ್ಲ ಸದ್ಯ ಪರಿಹಾರ ಕೇಂದ್ರಗಳಲ್ಲಿ ಆಶ್ರಯ ಪಡೆಯುತ್ತಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ