AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯೋಗಿ ಆದಿತ್ಯನಾಥ್​ ಸಂಪುಟದಲ್ಲಿ ಮುಸ್ಲಿಂ ಸಮುದಾಯದ ಏಕೈಕ ಸಚಿವ ಇವರು; ಕಳೆದ ಬಾರಿ ಇದ್ದವರಿಗಿಲ್ಲ ಸ್ಥಾನ

ಅನ್ಸಾರಿಯವರಿಗೆ ಈಗ 32 ವರ್ಷ. ಲಖನೌ ವಿಶ್ವವಿದ್ಯಾಲಯದ ವಿದ್ಯಾರ್ಥಿಯಾಗಿದ್ದಾಗ ಅವರು ಎಬಿವಿಪಿಯಲ್ಲಿ ಸಕ್ರಿಯರಾಗಿದ್ದರು.  ಯೋಗಿ ಸರ್ಕಾರಕ್ಕೆ ಸೇರ್ಪಡೆಯಾದ 31 ಮಂದಿ ಹೊಸಬರಲ್ಲಿ ಇವರೂ ಒಬ್ಬರು.

ಯೋಗಿ ಆದಿತ್ಯನಾಥ್​ ಸಂಪುಟದಲ್ಲಿ ಮುಸ್ಲಿಂ ಸಮುದಾಯದ ಏಕೈಕ ಸಚಿವ ಇವರು; ಕಳೆದ ಬಾರಿ ಇದ್ದವರಿಗಿಲ್ಲ ಸ್ಥಾನ
ಡ್ಯಾನಿಶ್​ ಅನ್ಸಾರಿ
TV9 Web
| Updated By: Lakshmi Hegde|

Updated on:Mar 26, 2022 | 7:23 PM

Share

ಉತ್ತರ ಪ್ರದೇಶದಲ್ಲಿ ಸಿಎಂ ಯೋಗಿ ಆದಿತ್ಯನಾಥ್ (Yogi Adityanath)​ ಸಂಪುಟಕ್ಕೆ 52 ಸಚಿವರು ಸೇರ್ಪಡೆಯಾಗಿದ್ದಾರೆ. 2022ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯ ಸಾಧಿಸಿ ಯೋಗಿ ಆದಿತ್ಯನಾಥ್​ ಸತತ ಎರಡನೇ ಅವಧಿಗೆ ಮುಖ್ಯಮಂತ್ರಿ ಹುದ್ದೆಗೇರಿದ್ದಾರೆ. ಅವರೊಂದಿಗೆ 52 ಸಚಿವರು ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಆದರೆ ಈ 52 ಸಚಿವರ ಪೈಕಿ ಒಬ್ಬರು ಮಾತ್ರ ಮುಸ್ಲಿಂ ಸಮುದಾಯಕ್ಕೆ ಸೇರಿದ ಸಚಿವ. ಮುಸ್ಲಿಂ ಸಮುದಾಯಕ್ಕೆ ಸೇರಿದ ಈ ಸಚಿವರ ಹೆಸರು ಡ್ಯಾನಿಶ್​ ಆಜಾದ್ ಅನ್ಸಾರಿ. ಮೂಲತಃ ಬಲ್ಲಿಯಾ ಜಿಲ್ಲೆಯವರು. ಯೋಗಿ ಆದಿತ್ಯನಾಥ್​ ಅವರ ಸರ್ಕಾರದ ಮೊದಲ ಅವಧಿಯಲ್ಲಿ ಮೊಹ್ಸಿನ್​ ರಾಜಾ ಇದ್ದರು. ಈ ಅವಧಿಗೆ ಅವರನ್ನು ಕೈಬಿಟ್ಟು ಡ್ಯಾನಿಶ್​ ಆಜಾದ್​ರನ್ನು ಆಯ್ಕೆ ಮಾಡಲಾಗಿದೆ.

ಅನ್ಸಾರಿಯವರಿಗೆ ಈಗ 32 ವರ್ಷ. ಲಖನೌ ವಿಶ್ವವಿದ್ಯಾಲಯದ ವಿದ್ಯಾರ್ಥಿಯಾಗಿದ್ದಾಗ ಅವರು ಎಬಿವಿಪಿಯಲ್ಲಿ ಸಕ್ರಿಯರಾಗಿದ್ದರು.  ಯೋಗಿ ಸರ್ಕಾರದ ಒಟ್ಟು 52 ಸಚಿವರಲ್ಲಿ 31 ಮಂದಿ ಹೊಸಬರು. ಉಳಿದ 21 ಮಂದಿ ಈ ಹಿಂದಿನ ಅವಧಿಯಲ್ಲಿ ಇದ್ದವರೇ ಆಗಿದ್ದಾರೆ.  ಹೀಗೆ ತಮಗೆ ಸಚಿವ ಸ್ಥಾನ ಕೊಟ್ಟ ಬಗ್ಗೆ ಪ್ರತಿಕ್ರಿಯೆ ನೀಡಿದ ಅನ್ಸಾರಿ, ನನಗೆ ಇದು ಅನಿರೀಕ್ಷಿತವಲ್ಲ. ಬಿಜೆಪಿ ಯಾವಾಗಲೂ ಪ್ರತಿಯೊಬ್ಬ ಕಾರ್ಯಕರ್ತನ ಶ್ರಮವನ್ನೂ ಗುರುತಿಸುತ್ತದೆ. ಯಾವ ಕಾರ್ಯಕರ್ತರು ಪಕ್ಷಕ್ಕಾಗಿ ತಮ್ಮನ್ನು ತಾವು ಅರ್ಪಿಸಿಕೊಂಡಿದ್ದಾರೋ, ಅವರಿಗೆ ಪಕ್ಷ ಸ್ಥಾನ-ಮಾನ ನೀಡುತ್ತದೆ ಎಂದು ಹೇಳಿದ್ದಾರೆ.

ಅನ್ಸಾರಿಯವರು ಉತ್ತರ ಪ್ರದೇಶ ಬಿಜೆಪಿ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿಯಾಗಿದ್ದರು. ಕಳೆದ ಅವಧಿಯಲ್ಲಿ ಯೋಗಿ ಆದಿತ್ಯನಾಥ್ ಸರ್ಕಾರವಿದ್ದಾಗ 2018ರಲ್ಲಿ ಉರ್ದು ಭಾಷಾ ಸಮಿತಿಗೆ ಸದಸ್ಯರಾಗಿ ನೇಮಕಗೊಂಡರು. ಅಂದರೆ ಅದು ಸಚಿವ ಸ್ಥಾನಮಾನ ಇರುವ ಹುದ್ದೆಯಾಗಿದೆ. 2022ರ ವಿಧಾನಸಭೆ ಚುನಾವಣೆಗೂ ಕೆಲವೇ ದಿನಗಳ ಮೊದಲು ಅವರಿಗೆ ಉತ್ತರ ಪ್ರದೇಶ ಬಿಜೆಪಿ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿ ಹುದ್ದೆ ನೀಡಲಾಯಿತು.  ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್​ ಮತ್ತು ಸಚಿವ ಪ್ರಮಾಣ ವಚನ ಸ್ವೀಕಾರ ಸಮಾರಂಭ ಲಖನೌದ ಏಕನಾ ಸ್ಟೇಡಿಯಂನಲ್ಲಿ ನಡೆಯಿತು. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್​ ಶಾ, ರಕ್ಷಣಾ ಸಚಿವ ರಾಜನಾಥ್​ ಸಿಂಗ್​, ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್​, ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಸ್ಮೃತಿ ಇರಾನಿ ಇತರರು ಪಾಲ್ಗೊಂಡಿದ್ದರು.

ಇದನ್ನೂ ಓದಿ: Salam pooja: ಟಿಪ್ಪುವಿನಿಂದ ನೆರವು ಪಡೆದ ಎಲ್ಲಾ ಕ್ಷೇತ್ರಗಳಲ್ಲೂ ಸಲಾಂ ಪೂಜೆ ಇದೆ -ಇತಿಹಾಸ ತಜ್ಞರು ಹಳೋದೇನು?

Published On - 7:22 pm, Sat, 26 March 22

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!