AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಮಾಚಲ ಪ್ರದೇಶ: ಕಾಲೇಜಿಗೆ ಹೊರಟಿದ್ದ ವಿದ್ಯಾರ್ಥಿನಿಯ ಶಿರಚ್ಛೇದ ಮಾಡಿದ ಕ್ರೂರಿಗಳು

ಹಿಮಾಚಲ ಪ್ರದೇಶ ಇಂದು(ಏಪ್ರಿಲ್ 13) ನಡೆದ ಒಂದು ಪೈಶಾಚಿಕ ಕೃತ್ಯದಿಂದ ನಡುಗಿಹೋಗಿದೆ. ಕಾಲೇಜಿಗೆ ತೆರಳಿ ಉಜ್ವಲ ಭವಿಷ್ಯದ ಕನಸು ಕಾಣುತ್ತಿದ್ದ 19 ವರ್ಷದ ಯುವತಿಯನ್ನು ನಡುರಸ್ತೆಯಲ್ಲೇ ಬರ್ಬರವಾಗಿ ಶಿರಚ್ಛೇದ ಮಾಡಿ ಹತ್ಯೆ(Murder) ಮಾಡಿರುವ ಘಟನೆ ಮಂಡಿ ಜಿಲ್ಲೆಯಲ್ಲಿ ನಡೆದಿದೆ. ಸೋಮವಾರ ಬೆಳಗ್ಗೆ ಸುಮಾರು 9.15ರ ಸಮಯ. ಮಂಡಿ ಜಿಲ್ಲೆಯ ಸರ್ಕಾಘಾಟ್ ಪ್ರದೇಶದಲ್ಲಿ ಜನಜಂಗುಳಿ ಆರಂಭವಾಗುತ್ತಿದ್ದಂತೆಯೇ ಈ ಘೋರ ದುರಂತ ಸಂಭವಿಸಿದೆ. ಎಂದಿನಂತೆ ಕಾಲೇಜಿಗೆಂದು ಮನೆಯಿಂದ ಹೊರಟಿದ್ದ ವಿದ್ಯಾರ್ಥಿನಿಯ ಮೇಲೆ ಅಪರಿಚಿತರು ರಸ್ತೆಯ ಮಧ್ಯದಲ್ಲೇ ಏಕಾಏಕಿ ದಾಳಿ ನಡೆಸಿದ್ದಾರೆ. ಕ್ರೌರ್ಯದ ಮಿತಿಯನ್ನೇ ಮೀರಿದ ಹಂತಕರು, ಆಕೆಯ ತಲೆಯನ್ನು ಕಡಿದು ಹಾಕಿ ಪರಾರಿಯಾಗಿದ್ದಾರೆ.

ಹಿಮಾಚಲ ಪ್ರದೇಶ: ಕಾಲೇಜಿಗೆ  ಹೊರಟಿದ್ದ ವಿದ್ಯಾರ್ಥಿನಿಯ ಶಿರಚ್ಛೇದ ಮಾಡಿದ ಕ್ರೂರಿಗಳು
ಕ್ರೈಂ Image Credit source: DNA Forensic Laboratory
ನಯನಾ ರಾಜೀವ್
|

Updated on: Apr 13, 2026 | 2:06 PM

Share

ಶಿಮ್ಲಾ, ಏಪ್ರಿಲ್ 13: ಹಿಮಾಚಲ ಪ್ರದೇಶ ಇಂದು(ಏಪ್ರಿಲ್ 13) ನಡೆದ ಒಂದು ಪೈಶಾಚಿಕ ಕೃತ್ಯ ಜನತೆಯನ್ನು ಆತಂಕಕ್ಕೆ ದೂಡಿದೆ. ಕಾಲೇಜಿಗೆ ತೆರಳಿ ಉಜ್ವಲ ಭವಿಷ್ಯದ ಕನಸು ಕಾಣುತ್ತಿದ್ದ 19 ವರ್ಷದ ಯುವತಿಯನ್ನು ನಡುರಸ್ತೆಯಲ್ಲೇ ಬರ್ಬರವಾಗಿ ಶಿರಚ್ಛೇದ ಮಾಡಿ ಹತ್ಯೆ(Murder) ಮಾಡಿರುವ ಘಟನೆ ಮಂಡಿ ಜಿಲ್ಲೆಯಲ್ಲಿ ನಡೆದಿದೆ. ಸೋಮವಾರ ಬೆಳಗ್ಗೆ ಸುಮಾರು 9.15ರ ಸಮಯ. ಮಂಡಿ ಜಿಲ್ಲೆಯ ಸರ್ಕಾಘಾಟ್ ಪ್ರದೇಶದಲ್ಲಿ ಜನಜಂಗುಳಿ ನಡುವೆಯೇ ಈ ಘೋರ ದುರಂತ ಸಂಭವಿಸಿದೆ. ಎಂದಿನಂತೆ ಕಾಲೇಜಿಗೆಂದು ಮನೆಯಿಂದ ಹೊರಟಿದ್ದ ವಿದ್ಯಾರ್ಥಿನಿಯ ಮೇಲೆ ಅಪರಿಚಿತರು ರಸ್ತೆಯ ಮಧ್ಯದಲ್ಲೇ ಏಕಾಏಕಿ ದಾಳಿ ನಡೆಸಿದ್ದಾರೆ. ಕ್ರೌರ್ಯದ ಮಿತಿಯನ್ನೇ ಮೀರಿದ ಹಂತಕರು, ಆಕೆಯ ತಲೆಯನ್ನು ಕಡಿದು ಹಾಕಿ ಪರಾರಿಯಾಗಿದ್ದಾರೆ.

ರಸ್ತೆಯ ತುಂಬೆಲ್ಲಾ ರಕ್ತದ ಮಡುವಿನಲ್ಲಿ ಬಿದ್ದಿದ್ದ ವಿದ್ಯಾರ್ಥಿನಿಯ ದೇಹವನ್ನು ಕಂಡು ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಸ್ಥಿತಿಯನ್ನು ಕಂಡು ದಬಾಬಾಜಿ ಹೋಗಿದ್ದಾರೆ.

ಘಟನಾ ಸ್ಥಳಕ್ಕೆ ಮಂಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ವಿನೋದ್ ಕುಮಾರ್ ಸೇರಿದಂತೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಾಥಮಿಕ ವರದಿಗಳ ಪ್ರಕಾರ, ಬೈಕ್‌ನಲ್ಲಿ ಬಂದಿದ್ದ ಇಬ್ಬರು ವ್ಯಕ್ತಿಗಳು ಈ ಕೃತ್ಯ ಎಸಗಿದ್ದಾರೆ ಎಂದು ಶಂಕಿಸಲಾಗಿದೆ.

ಮತ್ತಷ್ಟು ಓದಿ: ಪ್ಯಾಸೆಂಜರ್ ವಿಚಾರಕ್ಕೆ ಗಲಾಟೆ: ಕೆಲವೇ ದಿನಗಳಲ್ಲಿ ಹಸೆಮಣೆ ಏರಬೇಕಿದ್ದ ಆಟೋ ಚಾಲಕನ ಭೀಕರ ಹತ್ಯೆ

ಘಟನೆಯ ಹಿಂದಿನ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಹಂತಕರನ್ನು ಪತ್ತೆಹಚ್ಚಲು ಈಗಾಗಲೇ ಹಲವು ತಂಡಗಳನ್ನು ರಚಿಸಲಾಗಿದ್ದು, ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಲಾಗುತ್ತಿದೆ. ಎಂದು ಎಸ್‌ಪಿ ವಿನೋದ್ ಕುಮಾರ್ ತಿಳಿಸಿದ್ದಾರೆ.

ನಡುರಸ್ತೆಯಲ್ಲಿ, ಅದೂ ಹಗಲು ಹೊತ್ತಿನಲ್ಲಿ ವಿದ್ಯಾರ್ಥಿನಿಯೊಬ್ಬಳನ್ನು ಇಷ್ಟು ಭೀಕರವಾಗಿ ಹತ್ಯೆ ಮಾಡಿರುವುದು ಸ್ಥಳೀಯರಲ್ಲಿ ತೀವ್ರ ಆತಂಕ ಮತ್ತು ಆಕ್ರೋಶವನ್ನು ಮೂಡಿಸಿದೆ. ಇದು ವೈಯಕ್ತಿಕ ದ್ವೇಷದ ಹಿನ್ನೆಲೆಯೇ ಅಥವಾ ಪ್ರೀತಿಯ ವಿಷಯಕ್ಕೆ ಸಂಬಂಧಿಸಿದ್ದೇ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಪ್ರಸ್ತುತ, ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ. ಈ ಘಟನೆಯಿಂದಾಗಿ ಇಡೀ ಸರ್ಕಾಘಾಟ್ ಪ್ರದೇಶದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಜನರು ಭೀತಿಯಲ್ಲಿ ದಿನ ದೂಡುವಂತಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us