AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಡಿ ಸಂಘರ್ಷ: ಅಸ್ಸಾಂ ಅಧಿಕಾರಿಗಳ ವಿರುದ್ಧ ಎಫ್ಐಆರ್ ಹಿಂಪಡೆಯಲು ಮಿಜೋರಾಂ ನಿರ್ಧಾರ

Mizoram CM Zoramthanga: "ಸೌಹಾರ್ದಯುತ ಪರಿಹಾರಕ್ಕಾಗಿ ಅನುಕೂಲಕರ ವಾತಾವರಣವನ್ನು ನಿರ್ಮಿಸುವ ಸಲುವಾಗಿ" ಎಫ್ಐಆರ್ ಅನ್ನು ಹಿಂತೆಗೆದುಕೊಳ್ಳುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಜೊರಮ್ತಂಗಾ ಸೋಮವಾರ ಹೇಳಿದ್ದಾರೆ.

ಗಡಿ ಸಂಘರ್ಷ: ಅಸ್ಸಾಂ ಅಧಿಕಾರಿಗಳ ವಿರುದ್ಧ ಎಫ್ಐಆರ್ ಹಿಂಪಡೆಯಲು ಮಿಜೋರಾಂ ನಿರ್ಧಾರ
ಮಿಜೊರಾಂ ಹೌಸ್ ಮುಂದೆ ಬಿಗಿಭದ್ರತೆ
TV9 Web
| Edited By: |

Updated on: Aug 02, 2021 | 11:18 PM

Share

ಗುವಾಹಟಿ: ಅಸ್ಸಾಂ-ಮಿಜೋರಾಂ ಗಡಿಯಲ್ಲಿ ಉದ್ವಿಗ್ನತೆ ಕಡಿಮೆಯಾಗುತ್ತಿದ್ದು ಮಿಜೋರಾಂ ಮುಖ್ಯಮಂತ್ರಿ ಜೊರಮ್ತಂಗಾ ಅವರು ಜುಲೈ 26 ಘರ್ಷಣೆಗೆ ಸಂಬಂಧಿಸಿದಂತೆ ಅಸ್ಸಾಂ ಅಧಿಕಾರಿಗಳ ವಿರುದ್ಧ ದಾಖಲಾಗಿರುವ ಎಫ್ಐಆರ್ ಅನ್ನು ಹಿಂಪಡೆಯುವಂತೆ ಪೊಲೀಸರಿಗೆ ನಿರ್ದೇಶಿಸಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಜೊತೆ ಮಾತುಕತೆಯ ನಂತರ ಗಡಿಯಲ್ಲಿ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಇಬ್ಬರೂ ಮುಖ್ಯಮಂತ್ರಿಗಳು ಪ್ರಯತ್ನಿಸಿದ ಒಂದು ದಿನದ ನಂತರ ಈ ನಿರ್ಧಾರ ಕೈಗೊಳ್ಳಲಾಗಿದೆ. ಭಾನುವಾರ ಮಿಜೋರಾಂ ಸರ್ಕಾರವು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಹೆಸರನ್ನು ಜುಲೈ 26 ರಂದು ಎಫ್‌ಐಆರ್‌ನಿಂದ ಕೈಬಿಡುವುದಾಗಿ ಹೇಳಿತ್ತು. ಅದರ ನಂತರ ಮಿಜೋರಾಂನ ರಾಜ್ಯಸಭಾ ಸಂಸದ ಕೆ ವನ್​​ಲಾಲ್ವೇನಾ ವಿರುದ್ಧದ ಪ್ರಕರಣವನ್ನು ಹಿಂಪಡೆಯುವಂತೆ ಪೊಲೀಸರಿಗೆ ನಿರ್ದೇಶನ ನೀಡಿದ್ದಾಗಿ ಶರ್ಮಾ ಘೋಷಿಸಿದರು. ಮಾಧ್ಯಮ ಸಂದರ್ಶನಕ್ಕೆ ಸಂಬಂಧಿಸಿದಂತೆ ವನ್​​ಲಾಲ್ವೇನಾ ವಿರುದ್ಧ ಪ್ರಕರಣ ದಾಖಲಾಗಿತ್ತು.

“ಸೌಹಾರ್ದಯುತ ಪರಿಹಾರಕ್ಕಾಗಿ ಅನುಕೂಲಕರ ವಾತಾವರಣವನ್ನು ನಿರ್ಮಿಸುವ ಸಲುವಾಗಿ” ಎಫ್ಐಆರ್ ಅನ್ನು ಹಿಂತೆಗೆದುಕೊಳ್ಳುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಜೊರಮ್ತಂಗಾ ಸೋಮವಾರ ಹೇಳಿದ್ದಾರೆ.

ಸೋಮವಾರ ಸಂಜೆ ಟ್ವೀಟ್ ಮಾಡಿದ ಅವರು ಮಿಜೋರಾಂ- ಅಸ್ಸಾಂ ಗಡಿ ವಿವಾದಕ್ಕೆ ಸೌಹಾರ್ದಯುತ ಪರಿಹಾರಕ್ಕಾಗಿ ಅನುಕೂಲಕರ ವಾತಾವರಣವನ್ನು ನಿರ್ಮಿಸಲು ಮತ್ತು ನಾಗರಿಕರ ಸಂಕಷ್ಟವನ್ನು ಕಡಿಮೆ ಮಾಡಲು, ನಾನು 26.07.2021ರಂದು ಮಿಜೋರಾಂನ ಕೊಲಾಸಿಬ್ ಜಿಲ್ಲೆಯ ವೈರೆಂಗ್ಟೆಯಲ್ಲಿ ದಾಖಲಾಗಿರುವ ಎಲ್ಲಾ ಆರೋಪಿಗಳ ವಿರುದ್ಧದ ಎಫ್ಐಆರ್ ಹಿಂಪಡೆಯುವಂತೆ ಮಿಜೋರಾಂ ಪೊಲೀಸರಿಗೆ ನಿರ್ದೇಶನ ನೀಡಿದ್ದೇನೆ ಎಂದಿದ್ದಾರೆ.

ಈ ಬೆಳವಣಿಗೆಗೆ ಪ್ರತಿಕ್ರಿಯಿಸಿದ ಅಸ್ಸಾಂ ಸಿಎಂ ಹಿಮಂತ ಬಿಸ್ವ ಶರ್ಮಾ ಅವರು ಮಿಜೊರಾಂ ಅಧಿಕಾರಿಗಳ ವಿರುದ್ಧದ ಪ್ರಕರಣಗಳನ್ನು ಕೈಬಿಡುವ ಮೂಲಕ ಜೊರಮ್ತಂಗಾ ಅವರ “ಧನಾತ್ಮಕ ಗೌರವಕ್ಕೆ ಮನ್ನಣೆ ನೀಡುವುದಾಗಿ ಹೇಳಿದ್ದಾರೆ.

ಕಳೆದ ಸೋಮವಾರ ಗಡಿ ಘರ್ಷಣೆಯಲ್ಲಿ ಆರು ಅಸ್ಸಾಂ ಪೊಲೀಸ್ ಸಿಬ್ಬಂದಿ ಸಾವನ್ನಪ್ಪಿದ್ದರಿಂದ, ಬಿಕ್ಕಟ್ಟು ಉಂಟಾಗಿತ್ತು. ಎರಡೂ ರಾಜ್ಯಗಳು ಸಿಎಪಿಎಫ್ ಜೊತೆಗೆ ಗಡಿಯಲ್ಲಿ ತಮ್ಮ ಪಡೆಗಳನ್ನು ನಿಯೋಜಿಸಿವೆ. ಯಾವುದೇ ರಾಜ್ಯವು ಹಿಂದೆ ಸರಿಯಲು ಸಿದ್ಧವಿರಲಿಲ್ಲ.

ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಎರಡೂ ರಾಜ್ಯಗಳು ಆಯಾ ಪೊಲೀಸ್ ಠಾಣೆಗಳಲ್ಲಿ (ಅಸ್ಸಾಂನ ಧೋಲೈ ಮತ್ತು ಮಿಜೋರಾಂನ ವೈರೆಂಗ್ಟೆ) ಪರಸ್ಪರ ಆರೋಪಗಳನ್ನು ಸಲ್ಲಿಸಿವೆ. ಸೋಮವಾರದ ಹೊತ್ತಿಗೆ, ಮಿಜೋರಾಂ ಎಲ್ಲಾ ಆರೋಪಗಳನ್ನು ಕೈಬಿಟ್ಟರೆ, ಮಿಜೋರಾಂನ ವೈರೆಂಗ್ಟೆ ಜಿಲ್ಲೆಯ ಆರು ಪೊಲೀಸ್ ಅಧಿಕಾರಿಗಳ ವಿರುದ್ಧ ಅಸ್ಸಾಂ ಸರ್ಕಾರದ ಪ್ರಕರಣ ಇನ್ನೂ ಉಳಿದಿದೆ.

ಇದನ್ನೂ ಓದಿ:  ಗಡಿ ಸಂಘರ್ಷವನ್ನು ಅಸ್ಸಾಂ ಸಿಎಂ ಪ್ರತಿಷ್ಠೆಯ ವಿಷಯವನ್ನಾಗಿ ಪರಿಗಣಿಸಿದ್ದಾರೆ: ಪ್ರಧಾನಿಗೆ ಪತ್ರ ಬರೆದ ಕಾಂಗ್ರೆಸ್​ ಸಂಸದ

ಇದನ್ನೂ ಓದಿ: ಅಸ್ಸಾಂ-ಮಿಜೋರಾಂ ಗಡಿ ವಿವಾದ; ಅಸ್ಸಾಂ ಮುಖ್ಯಮಂತ್ರಿ ಹಿಮಂತ್​ ಬಿಸ್ವಾ ಶರ್ಮಾ ವಿರುದ್ಧ ಎಫ್​ಐಆರ್​ ದಾಖಲು

ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್