Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಗಾ ನದಿಯಲ್ಲಿ ಕೊಳೆತ ಸ್ಥಿತಿಯಲ್ಲಿರುವ ಮೃತದೇಹಗಳು ಪತ್ತೆ; ಕೊವಿಡ್ ಸೋಂಕಿನಿಂದ ಮೃತಪಟ್ಟ ಶಂಕೆ

ಬಿಹಾರದ ಈ ಭಾಗದಲ್ಲಿ ಮೃತದೇಹಗಳನ್ನು ನದಿಗೆ ಎಸೆಯುವ ಪದ್ಧತಿ ಇಲ್ಲ. ಹೀಗಾಗಿ ಈ ಮೃತದೇಹಗಳು ಉತ್ತರ ಪ್ರದೇಶದಿಂದಲೆ ಬಂದಿವೆ. ಆದರೆ ಉತ್ತರ ಪ್ರದೇಶದ ಯಾವ ಭಾಗದಿಂದ ತೇಲಿಬಂದಿವೆ ಎಂಬುದನ್ನು ತನಿಖೆ ಮಾಡಬೇಕಿದೆ ಎಂದು ಸ್ಥಳೀಯರೊಬ್ಬರು ತಿಳಿಸಿದ್ಧಾರೆ.

ಗಂಗಾ ನದಿಯಲ್ಲಿ ಕೊಳೆತ ಸ್ಥಿತಿಯಲ್ಲಿರುವ ಮೃತದೇಹಗಳು ಪತ್ತೆ; ಕೊವಿಡ್ ಸೋಂಕಿನಿಂದ ಮೃತಪಟ್ಟ ಶಂಕೆ
ಸಾಂಕೇತಿಕ ಚಿತ್ರ
Follow us
guruganesh bhat
|

Updated on: May 10, 2021 | 9:30 PM

ಪಾಟ್ನಾ: ಬಿಹಾರದ ಬಕ್ಸರ್ ನಗರದ ಬಳಿಯ ಗಂಗಾ ನದಿಯಲ್ಲಿ ಸುಮಾರು ನೂರಕ್ಕೂ ಹೆಚ್ಚು ಕೊಳೆತ ಮತ್ತು ಉಬ್ಬಿದ ಸ್ಥಿತಿಯಲ್ಲಿರುವ ಮೃತದೇಹಗಳು ಪತ್ತೆಯಾಗಿವೆ. ಕೊವಿಡ್​ನಿಂದ ಮೃತಪಟ್ಟವರ ದೇಹವನ್ನು ಅಂತ್ಯಸಂಸ್ಕಾರ ನಡೆಸದೇ ಗಂಗಾ ನದಿಯಲ್ಲಿ ತೇಲಿಬಿಡಲಾಗಿದೆ ಎಂದು ಮೇಲ್ನೋಟಕ್ಕೆ ಶಂಕೆ ವ್ಯಕ್ತವಾಗಿದೆ. ಗಂಗಾ ನದಿಯಲ್ಲಿ ನೆರೆ ರಾಜ್ಯ ಉತ್ತರ ಪ್ರದೇಶದಿಂದ ಕೊವಿಡ್​ನಿಂದ ಮೃತಪಟ್ಟವರ ಮೃತದೇಹಗಳನ್ನು ತೇಲಿಬಿಡಲಾಗಿದೆ ಎಂದು ಸ್ಥಳಿಯ ಆಡಳಿತ ಅಭಿಪ್ರಾಯಪಟ್ಟಿದೆ.

ಸುಮಾರು 40ರಿಂದ 45 ಮೃತದೇಹಗಳು ನದಿಯಲ್ಲಿ ತೇಲುತ್ತಿರುವುದು ಸ್ಪಷ್ಟವಾಗಿ ಕಾಣಿಸುತ್ತಿವೆ ಎಂದು ಚೌಸಾ ಜಿಲ್ಲಾಡಳಿತದ ಅಧಿಕಾರಿ ಅಶೋಕ್ ಕುಮಾರ್ ತಿಳಿಸಿದ್ದಾರೆ. ಇನ್ನು ಕೆಲವರ ಪ್ರಕಾರ ನೂರಕ್ಕೆ ಹೆಚ್ಚು ಮೃತದೇಹಗಳು ಗಂಗಾ ನದಿಯಲ್ಲಿ ತೇಲುತ್ತಿವೆ. ಯಾರೋ ದುಷ್ಕರ್ಮಿಗಳು ಈ ಮೃತದೇಹಗಳನ್ನು ನದಿಗೆ ಎಸೆದಿರುವ ಶಂಕೆಯಿದೆ ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ. ಮೃತದೇಹವೊಂದಕ್ಕೆ ತಲಾ ₹ 500 ನೀಡಿ ಅಂತ್ಯಸಂಸ್ಕಾರ ನಡೆಸಲಾಗುತ್ತಿದ್ದು ಸುಮಾರು ಐದರಿಂದ ಏಳು ದಿನಗಳಿಂದಲೂ ಮೃತದೇಹಗಳು ನೀರಿನಲ್ಲಿರುವ ಶಂಕೆ ವ್ಯಕ್ತವಾಗಿದೆ.

ಬಿಹಾರದ ಈ ಭಾಗದಲ್ಲಿ ಮೃತದೇಹಗಳನ್ನು ನದಿಗೆ ಎಸೆಯುವ ಪದ್ಧತಿ ಇಲ್ಲ. ಹೀಗಾಗಿ ಈ ಮೃತದೇಹಗಳು ಉತ್ತರ ಪ್ರದೇಶದಿಂದಲೆ ಬಂದಿವೆ. ಆದರೆ ಉತ್ತರ ಪ್ರದೇಶದ ಯಾವ ಭಾಗದಿಂದ ತೇಲಿಬಂದಿವೆ ಎಂಬುದನ್ನು ತನಿಖೆ ಮಾಡಬೇಕಿದೆ ಎಂದು ಎನ್​ಡಿಟಿವಿಗೆ ಸ್ಥಳೀಯ ಆಡಳಿತದ ಅಧಿಕಾರಿಯೋರ್ವರು ತಿಳಿಸಿದ್ದಾರೆ. ವಾರಣಾಸಿ, ಅಲಹಾಬಾದ್ ಅಥವಾ ಬಹ್ರೇಚ್​ ಭಾಗಗಳಿಂದ ಈ ಮೃತದೇಹಗಳನ್ನು ಗಂಗಾ ನದಿಯಲ್ಲಿ ತೇಲಿಬಿಡಲಾಗಿದೆ ಎಂದು ಹಲವರು ಅಭಿಪ್ರಾಯಪಡುತ್ತಾರೆ.

ಇದನ್ನೂ ಓದಿ: 16 ಜನರ ಮೇಲೆ ಅಪರಾಧ ಹೊರಿಸಿದ್ದು ನಾನಲ್ಲ; ಅವರನ್ನು ಬಿಬಿಎಂಪಿ ಮೊದಲೇ ಕೆಲಸದಿಂದ ತೆಗೆದಿತ್ತು- ಸಂಸದ ತೇಜಸ್ವಿ ಸೂರ್ಯ 

ಸಮಾಜದಲ್ಲಿನ ದುರ್ಬಲ ವಿಭಾಗದವರ ಮನೆ ಬಾಗಿಲಿಗೆ ತೆರಳಿ ಕೊವಿಡ್ ಲಸಿಕೆ ನೀಡಲು ನಿರ್ದೇಶಿಸಿ: ಸುಪ್ರೀಂಕೋರ್ಟ್​ಗೆ ವೈಬಿಎಐ ಮನವಿ (Dead bodies are found in Ganga river near Bihar)

ಮಾರಿಗುಡಿ ದೇವಾಲಯಕ್ಕೆ ಬಂದ ಸುನಿಲ್ ಶೆಟ್ಟಿಗೆ ಸಿಕ್ಕ ಉಡುಗೊರೆ ಏನು?
ಮಾರಿಗುಡಿ ದೇವಾಲಯಕ್ಕೆ ಬಂದ ಸುನಿಲ್ ಶೆಟ್ಟಿಗೆ ಸಿಕ್ಕ ಉಡುಗೊರೆ ಏನು?
ಓಂ ಪ್ರಕಾಶ್ ಕೊಲೆ: ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಳಿಕೆ
ಓಂ ಪ್ರಕಾಶ್ ಕೊಲೆ: ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಳಿಕೆ
ವಿರಾಟ್ ಕೊಹ್ಲಿಯ ಅಪರೂಪದ ಸಂಭ್ರಮಾಚರಣೆ
ವಿರಾಟ್ ಕೊಹ್ಲಿಯ ಅಪರೂಪದ ಸಂಭ್ರಮಾಚರಣೆ
ಕೃನಾಲ್ ಪಾಂಡ್ಯ ಅದ್ಭುತ ರನ್ನಿಂಗ್ ಕ್ಯಾಚ್; ವಿಡಿಯೋ
ಕೃನಾಲ್ ಪಾಂಡ್ಯ ಅದ್ಭುತ ರನ್ನಿಂಗ್ ಕ್ಯಾಚ್; ವಿಡಿಯೋ
ಅಪಘಾತದಲ್ಲಿ ಗಾಯಗೊಂಡವರಿಗೆ ನೆರವಾದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಅಪಘಾತದಲ್ಲಿ ಗಾಯಗೊಂಡವರಿಗೆ ನೆರವಾದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಜನಿವಾರ ತೆಗೆಸಿದ ವಿವಾದ: ಸಚಿವರು, ಶಾಸಕರಿಗೆ ಮಂತ್ರಾಲಯ ಶ್ರೀ ಎಚ್ಚರಿಕೆ
ಜನಿವಾರ ತೆಗೆಸಿದ ವಿವಾದ: ಸಚಿವರು, ಶಾಸಕರಿಗೆ ಮಂತ್ರಾಲಯ ಶ್ರೀ ಎಚ್ಚರಿಕೆ
ಮಾರಿಗುಡಿ ದೇವಾಲಯದಲ್ಲಿ ಆದ ವಿಶಿಷ್ಟ ಅನುಭವದ ಬಗ್ಗೆ ಸುನಿಲ್ ಶೆಟ್ಟಿ ಮಾತು
ಮಾರಿಗುಡಿ ದೇವಾಲಯದಲ್ಲಿ ಆದ ವಿಶಿಷ್ಟ ಅನುಭವದ ಬಗ್ಗೆ ಸುನಿಲ್ ಶೆಟ್ಟಿ ಮಾತು
ಜನಿವಾರ ವಿವಾದ: ಬೀದರ್ ವಿದ್ಯಾರ್ಥಿಗೆ ಫ್ರೀ ಇಂಜಿನಿಯರಿಂಗ್ ಸೀಟ್ ಭಾಗ್ಯ
ಜನಿವಾರ ವಿವಾದ: ಬೀದರ್ ವಿದ್ಯಾರ್ಥಿಗೆ ಫ್ರೀ ಇಂಜಿನಿಯರಿಂಗ್ ಸೀಟ್ ಭಾಗ್ಯ
ಧರ್ಮಸ್ಥಳ ಮಂಜುನಾಥ, ವೀರೇಂದ್ರ ಹೆಗ್ಗಡೆಯವರ ಆಶಿರ್ವಾದ ಪಡೆದ ಡಿಕೆಶಿ
ಧರ್ಮಸ್ಥಳ ಮಂಜುನಾಥ, ವೀರೇಂದ್ರ ಹೆಗ್ಗಡೆಯವರ ಆಶಿರ್ವಾದ ಪಡೆದ ಡಿಕೆಶಿ
ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ ಬಗ್ಗೆ ಗೃಹ ಸಚಿವ ಹೇಳಿದ್ದಿಷ್ಟು
ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ ಬಗ್ಗೆ ಗೃಹ ಸಚಿವ ಹೇಳಿದ್ದಿಷ್ಟು