AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ಮುಂಬೈನ ರೈಲ್ವೆ ನಿಲ್ದಾಣದ ಬಳಿ ಸೂಟ್​ಕೇಸ್​​ನಲ್ಲಿ ತುಂಬಿಟ್ಟಿದ್ದ 15 ವರ್ಷದ ಬಾಲಕಿಯ ಶವ ಪತ್ತೆ

ವಂಶಿತಾ ಕನೈಯಾಲಾಲ್ ರಾಥೋಡ್ ಎಂಬ 15 ವರ್ಷದ ಬಾಲಕಿ ಗುರುವಾರ ಮಧ್ಯಾಹ್ನದಿಂದ ಅಂಧೇರಿಯಲ್ಲಿರುವ ತನ್ನ ಮನೆಯಿಂದ ನಾಪತ್ತೆಯಾಗಿದ್ದಳು. ಗುರುವಾರ ಬೆಳಗ್ಗೆ ಶಾಲೆಗೆ ತೆರಳಿದ್ದ ಆಕೆ ಸಂಜೆಯಾದರೂ ಮನೆಗೆ ಬಂದಿರಲಿಲ್ಲ.

Shocking News: ಮುಂಬೈನ ರೈಲ್ವೆ ನಿಲ್ದಾಣದ ಬಳಿ ಸೂಟ್​ಕೇಸ್​​ನಲ್ಲಿ ತುಂಬಿಟ್ಟಿದ್ದ 15 ವರ್ಷದ ಬಾಲಕಿಯ ಶವ ಪತ್ತೆ
Image Credit source: India.com
TV9 Web
| Edited By: |

Updated on: Aug 27, 2022 | 10:37 AM

Share

ಮುಂಬೈ: 15 ವರ್ಷದ ಬಾಲಕಿಯ ಶವವನ್ನು ಕಂಬಳಿಯಲ್ಲಿ ಸುತ್ತಿ ಟ್ರಾವೆಲ್ ಬ್ಯಾಗ್‌ನಲ್ಲಿ ತುಂಬಿಟ್ಟಿದ್ದ ಆಘಾತಕಾರಿ ಘಟನೆ (Shocking News) ಮಹಾರಾಷ್ಟ್ರದ ಪಲ್ಘಾರ್ ಜಿಲ್ಲೆಯ ನೈಗಾಂವ್ ರೈಲ್ವೆ ನಿಲ್ದಾಣದ ಬಳಿ ಬೆಳಕಿಗೆ ಬಂದಿದೆ. ವಲೀವ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ರಾಹುಲ್‌ಕುಮಾರ್ ಪಾಟೀಲ್ ಪ್ರಕಾರ, ನೈಗಾಂವ್ ರೈಲ್ವೆ ನಿಲ್ದಾಣದಲ್ಲಿ ಹೊಸದಾಗಿ ನಿರ್ಮಿಸಲಾದ ಪೂರ್ವ-ಪಶ್ಚಿಮ ಸೇತುವೆಯ ಬಳಿಯ ಪೊದೆಗಳಲ್ಲಿ ಮಧ್ಯಾಹ್ನ 3 ಗಂಟೆ ಸುಮಾರಿಗೆ ಬಾಲಕಿಯ ಶವವಿರುವ ಬ್ಯಾಗ್ ಪತ್ತೆಯಾಗಿದೆ.

ವಂಶಿತಾ ಕನೈಯಾಲಾಲ್ ರಾಥೋಡ್ ಎಂಬ 15 ವರ್ಷದ ಬಾಲಕಿ ಗುರುವಾರ ಮಧ್ಯಾಹ್ನದಿಂದ ಅಂಧೇರಿಯಲ್ಲಿರುವ ತನ್ನ ಮನೆಯಿಂದ ನಾಪತ್ತೆಯಾಗಿದ್ದಳು. ಗುರುವಾರ ಬೆಳಗ್ಗೆ ಶಾಲೆಗೆ ತೆರಳಿದ್ದ ಆಕೆ ಸಂಜೆಯಾದರೂ ಮನೆಗೆ ಬಂದಿರಲಿಲ್ಲ. ಹೀಗಾಗಿ, ಆಕೆಯ ಪೋಷಕರು ಸ್ಥಳಕ್ಕಾಗಮಿಸಿ ಹುಡುಕಾಡಿದರೂ ಪತ್ತೆಯಾಗದ ಹಿನ್ನೆಲೆಯಲ್ಲಿ ಆಕೆ ಕಾಣೆಯಾಗಿದ್ದಾಳೆ ಎಂದು ತಿಳಿಸಿದ್ದರು. ಅವರ ದೂರಿನ ಆಧಾರದ ಮೇಲೆ ಅಂಧೇರಿ ಪೊಲೀಸರು ನಾಪತ್ತೆಯಾದ ಬಾಲಕಿಯ ಅಪಹರಣ ಪ್ರಕರಣವನ್ನು ದಾಖಲಿಸಿಕೊಂಡಿದ್ದರು.

ಇದನ್ನೂ ಓದಿ: ಕೊಲೆ ಆರೋಪದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾದ ಕಾಂಗ್ರೆಸ್ ನಾಯಕನಿಗೆ ಹಾಲಿನ ಅಭಿಷೇಕ

ಅದಾದ ಬಳಿಕ ಆ ಬಾಲಕಿಯ ಮೃತದೇಹವು ಸೂಟ್​ಕೇಸ್​​ನಲ್ಲಿ ಪತ್ತೆಯಾಗಿದ್ದು, ಆ ಶವದ ಮೇಲೆ ಅನೇಕ ಇರಿತದ ಗಾಯಗಳಾಗಿತ್ತು. ಆ ಶವವನ್ನು ವಸೈನಲ್ಲಿರುವ ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಪೊಲೀಸರು ಇದೀಗ ಅಂಧೇರಿಯಿಂದ ನೈಗಾಂವ್ ನಿಲ್ದಾಣದವರೆಗಿನ ರೈಲ್ವೆ ನಿಲ್ದಾಣಗಳಲ್ಲಿ ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮೆರಾಗಳ ರೆಕಾರ್ಡಿಂಗ್‌ಗಳನ್ನು ಪರಿಶೀಲಿಸುವ ಮೂಲಕ ಆರೋಪಿಗಳನ್ನು ಪತ್ತೆಹಚ್ಚಲು ಪ್ರಯತ್ನಿಸುತ್ತಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ