AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶ: ಅವಸಾನೇಶ್ವರ ದೇವಾಲಯದ ಶೆಡ್ ಮೇಲೆ ವಿದ್ಯುತ್ ತಂತಿ ಬಿದ್ದು ಇಬ್ಬರು ಸಾವು, ಕಾಲ್ತುಳಿತ

ಉತ್ತರ ಪ್ರದೇಶದ ಅವಸಾನೇಶ್ವರ ಮಹಾದೇವ ದೇವಸ್ಥಾನದ ಶೆಡ್ ಮೇಲೆ ವಿದ್ಯುತ್ ತಂತಿ ಬಿದ್ದು, ಇಬ್ಬರು ಮೃತಪಟ್ಟಿದ್ದು, 27ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಸ್ಥಳದಲ್ಲಿ ಕಾಲ್ತುಳಿತ ಉಂಟಾಗಿದೆ. ಶ್ರಾವಣದ ಮೂರನೇ ಸೋಮವಾರವಾದ ಇಂದು ಮುಂಜಾನೆಯಿಂದಲೇ ಭಕ್ತರು ದೇವಸ್ಥಾನಕ್ಕೆ ಆಗಮಿಸಿದ್ದರು.ತಡಗಿನ ಶೆಡ್ ಮೇಲೆ ವಿದ್ಯುತ್ ತಂತಿ ಬಿದ್ದು, ವಿದ್ಯುತ್ ಸ್ಪರ್ಶಿಸಿ ಇಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಸುಮಾರು 27ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದ್ದು, ಅವರಲ್ಲಿ 10 ಜನರನ್ನು ತ್ರಿವೇದಿಗಂಜ್ ಸಮುದಾಯ ಆರೋಗ್ಯ ಕೇಂದ್ರಕ್ಕೆ (ಸಿಎಚ್‌ಸಿ) ಕರೆದೊಯ್ಯಲಾಗಿದೆ ಎಂದು ಹೇಳಲಾಗಿದೆ.

ಉತ್ತರ ಪ್ರದೇಶ: ಅವಸಾನೇಶ್ವರ ದೇವಾಲಯದ ಶೆಡ್ ಮೇಲೆ ವಿದ್ಯುತ್ ತಂತಿ ಬಿದ್ದು ಇಬ್ಬರು ಸಾವು, ಕಾಲ್ತುಳಿತ
ದೇವಸ್ಥಾನ Image Credit source: India TV
ನಯನಾ ರಾಜೀವ್
|

Updated on:Jul 28, 2025 | 7:46 AM

Share

ಬಾರಾಬಂಕಿ, ಜುಲೈ 28: ಉತ್ತರ ಪ್ರದೇಶದ ಅವಸಾನೇಶ್ವರ ಮಹಾದೇವ ದೇವಸ್ಥಾನದ ಶೆಡ್ ಮೇಲೆ ವಿದ್ಯುತ್ ತಂತಿ ಬಿದ್ದು, ಇಬ್ಬರು ಮೃತಪಟ್ಟಿದ್ದು, 27ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಸ್ಥಳದಲ್ಲಿ ಕಾಲ್ತುಳಿತ ಉಂಟಾಗಿದೆ. ಶ್ರಾವಣದ ಮೂರನೇ ಸೋಮವಾರವಾದ ಇಂದು ಮುಂಜಾನೆಯಿಂದಲೇ ಭಕ್ತರು ದೇವಸ್ಥಾನಕ್ಕೆ ಆಗಮಿಸಿದ್ದರು.

ತಡಗಿನ ಶೆಡ್ ಮೇಲೆ ವಿದ್ಯುತ್ ತಂತಿ ಬಿದ್ದು, ವಿದ್ಯುತ್ ಸ್ಪರ್ಶಿಸಿ ಇಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಸುಮಾರು 27ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದ್ದು, ಅವರಲ್ಲಿ 10 ಜನರನ್ನು ತ್ರಿವೇದಿಗಂಜ್ ಸಮುದಾಯ ಆರೋಗ್ಯ ಕೇಂದ್ರಕ್ಕೆ (ಸಿಎಚ್‌ಸಿ) ಕರೆದೊಯ್ಯಲಾಗಿದೆ ಎಂದು ಹೇಳಲಾಗಿದೆ. ಇತರ ಐದು ಜನರ ಸ್ಥಿತಿ ಗಂಭೀರವಾದ ಕಾರಣ ಅವರನ್ನು ಉನ್ನತ ವೈದ್ಯಕೀಯ ಸೌಲಭ್ಯಕ್ಕೆ ಉಲ್ಲೇಖಿಸಲಾಗಿದೆ.

ಶತಮಾನಗಳಷ್ಟು ಹಳೆಯದಾದ ಹೈದರ್‍ಗಢ್ ಪ್ರದೇಶದಲ್ಲಿ ಪ್ರಾರ್ಥನೆ ಸಲ್ಲಿಸಲು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದಾಗ ಈ ಆಘಾತಕಾರಿ ಘಟನೆ ಸಂಭವಿಸಿದೆ. ವರದಿಗಳ ಪ್ರಕಾರ, ಕೋತಿಗಳ ದಂಡು ಆಕಸ್ಮಿಕವಾಗಿ ಓವರ್ಹೆಡ್ ವಿದ್ಯುತ್ ತಂತಿಯನ್ನು ಉರುಳಿಸಿ, ಭಕ್ತರು ದರ್ಶನಕ್ಕಾಗಿ ಸೇರುತ್ತಿದ್ದ ತಗಡಿನ ಶೆಡ್ ಮೇಲೆ ಬಿದ್ದಿದೆ.‘

ಮತ್ತಷ್ಟು ಓದಿ: ಹರಿದ್ವಾರದ ಮಾನಸ ದೇವಿ ದೇವಸ್ಥಾನದಲ್ಲಿ ಕಾಲ್ತುಳಿತ, ಆರು ಮಂದಿ ಸಾವು

ಮತ್ತೊಂದು ಘಟನೆ ಹರಿದ್ವಾರದ ಮಾನಸ ದೇವಿ ದೇವಸ್ಥಾನದಲ್ಲಿ ಕಾಲ್ತುಳಿತ, ಆರು ಮಂದಿ ಸಾವು ಹರಿದ್ವಾರದ ಮಾನಸದೇವಿ ದೇವಸ್ಥಾನದಲ್ಲಿ ಭಾನುವಾರ ಬೆಳಗ್ಗೆ ಕಾಲ್ತುಳಿತ ಸಂಭವಿಸಿದ್ದು, 6 ಮಂದಿ ಸಾವನ್ನಪ್ಪಿದ್ದು, 25ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಹರಿದ್ವಾರದ ಮಾನಸ ದೇವಿ ದೇವಸ್ಥಾನದಲ್ಲಿ ಭಾರಿ ಜನಸಮೂಹ ಜಮಾಯಿಸಿದ ನಂತರ ಉಂಟಾದ ಕಾಲ್ತುಳಿತದಲ್ಲಿ ಜನರು ಸಾವನ್ನಪ್ಪಿದ್ದಾರೆ.

ಘಟನೆಯ ವಿವರವಾದ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಅನೇಕ ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಸ್ಥಳದಲ್ಲಿ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ.

ಭಾನುವಾರ ಹರಿದ್ವಾರದ ಮಾನಸ ದೇವಿ ದೇವಸ್ಥಾನದ ಪಾದಚಾರಿ ಮಾರ್ಗದ ಮೇಲೆ ಹಠಾತ್ತನೆ ಹೈ ವೋಲ್ಟೇಜ್ ವಿದ್ಯುತ್ ತಂತಿ ಬಿದ್ದ ಪರಿಣಾಮ ಜನರು ಚೆಲ್ಲಾಪಿಲ್ಲಿಯಾಗಿ ಓಡಲು ಶುರು ಮಾಡಿದರು. ಅಲ್ಲಿದ್ದ ಭಕ್ತರಲ್ಲಿ ಕಾಲ್ತುಳಿತ ಉಂಟಾಯಿತು.

ಪೊಲೀಸರು ಮತ್ತು ಆಡಳಿತ ತಂಡಗಳು ಸ್ಥಳಕ್ಕೆ ತಲುಪಿ ಪರಿಹಾರ ಮತ್ತು ರಕ್ಷಣಾ ಕಾರ್ಯವನ್ನು ಪ್ರಾರಂಭಿಸಲಾಯಿತು. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಪರಿಸ್ಥಿತಿ ನಿಯಂತ್ರಣದಲ್ಲಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:45 am, Mon, 28 July 25

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?