AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pahalgam Terrorist Attack: ಪಹಲ್ಗಾಮ್ ಉಗ್ರ ದಾಳಿ, ಎಕೆ-47 ಹಿಡಿದ ಶಂಕಿತ ಉಗ್ರನ ಫೋಟೋಬಹಿರಂಗ

ಪಹಲ್ಗಾಮ್​ನಲ್ಲಿ ನಡೆದ ಉಗ್ರ ದಾಳಿ ಬಳಿಕ ಇದೀಗ ಶಂಕಿತ ಉಗ್ರನ ಫೋಟೊ ಬಹಿರಂಗಗೊಂಡಿದೆ. ಭದ್ರತಾ ಸಂಸ್ಥೆಗಳು ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿರುವ ಭಯೋತ್ಪಾದಕರಲ್ಲಿ ಇವನೂ ಒಬ್ಬ ಎಂದು ನಂಬಿದ್ದಾರೆ. ಉಗ್ರರು ಕೆಲವರು ಸ್ಥಳೀಯರಂತೆ ಕುರ್ತಾ ಧರಿಸಿ ಬಂದರೆ, ಪ್ರತ್ಯಕ್ಷ ದರ್ಶಿಗಳು ಹೇಳಿರುವಂತೆ ಕೆಲವರು ಸ್ಥಳೀಯ ಪೊಲೀಸರ ಸಮವಸ್ತ್ರ ಧರಿಸಿ ಬಂದಿದ್ದ ಕಾರಣ, ಪ್ರವಾಸಿಗರಿಗೆ ಅವರು ಭಯೋತ್ಪಾದಕರೆಂದು ತಿಳಿಯಲಿಲ್ಲ.

Pahalgam Terrorist Attack: ಪಹಲ್ಗಾಮ್ ಉಗ್ರ ದಾಳಿ, ಎಕೆ-47 ಹಿಡಿದ ಶಂಕಿತ ಉಗ್ರನ ಫೋಟೋಬಹಿರಂಗ
ಶಂಕಿತ ಉಗ್ರ
ನಯನಾ ರಾಜೀವ್
|

Updated on:Apr 23, 2025 | 10:06 AM

Share

ಶ್ರೀನಗರ, ಏಪ್ರಿಲ್ 23: ಜಮ್ಮು ಕಾಶ್ಮೀರದ ಅನಂತ್​ನಾಗ್​ ಜಿಲ್ಲೆಯ ಪಹಲ್ಗಾಮ್​ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿ(Terrorist Attack)ಯ ಕೆಲವೇ ಗಂಟೆಗಳಲ್ಲಿ, ಶಂಕಿತ ಭಯೋತ್ಪಾದಕನ ಮೊದಲ ಫೋಟೋ ಬಹಿರಂಗಗೊಂಡಿದೆ. ವೀಡಿಯೊವೊಂದರಲ್ಲಿ ತೆಗೆದ ಸ್ಕ್ರೀನ್‌ಶಾಟ್‌ನಲ್ಲಿ, ಭಯೋತ್ಪಾದಕನೆಂದು ಶಂಕಿಸಲಾದ ವ್ಯಕ್ತಿಯೊಬ್ಬ ಕುರ್ತಾದಲ್ಲಿ ಎಕೆ ಸರಣಿಯ ಅಸಾಲ್ಟ್ ರೈಫಲ್‌ನೊಂದಿಗೆ ಕಾಣಿಸಿಕೊಂಡಿದ್ದಾನೆ. ಭದ್ರತಾ ಸಂಸ್ಥೆಗಳು ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿರುವ ಭಯೋತ್ಪಾದಕರಲ್ಲಿ ಇವನೂ ಒಬ್ಬ ಎಂದು ಹೇಳಿದ್ದಾರೆ.

ಉಗ್ರರು ಕೆಲವರು ಸ್ಥಳೀಯರಂತೆ ಕುರ್ತಾ ಧರಿಸಿ ಬಂದರೆ, ಪ್ರತ್ಯಕ್ಷ ದರ್ಶಿಗಳು ಹೇಳಿರುವಂತೆ ಕೆಲವರು ಸ್ಥಳೀಯ ಪೊಲೀಸರ ಸಮವಸ್ತ್ರ ಧರಿಸಿ ಬಂದಿದ್ದ ಕಾರಣ, ಪ್ರವಾಸಿಗರಿಗೆ ಅವರು ಭಯೋತ್ಪಾದಕರೆಂದು ತಿಳಿಯಲಿಲ್ಲ.

ಮಂಗಳವಾರ ಮಧ್ಯಾಹ್ನ ಕಾಶ್ಮೀರದ ಪಹಲ್ಗಾಮ್ ಪಟ್ಟಣದ ಬಳಿಯ ಜನಪ್ರಿಯ ಪ್ರವಾಸಿ ತಾಣದ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿ 26 ಜನರನ್ನು ಹತ್ಯೆ ಮಾಡಿದ್ದಾರೆ. ಅವರಲ್ಲಿ ಹೆಚ್ಚಿನವರು ಇತರ ರಾಜ್ಯಗಳಿಂದ ಬಂದವರು. 2019 ರಲ್ಲಿ ಪುಲ್ವಾಮಾ ದಾಳಿಯ ನಂತರ ಕಣಿವೆಯಲ್ಲಿ ನಡೆದ ಅತ್ಯಂತ ಭೀಕರ ದಾಳಿ ಇದಾಗಿದ್ದು, ಆ ದಾಳಿಯಲ್ಲಿ 40 ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ್ದರು.

ಇದನ್ನೂ ಓದಿ
Image
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
Image
ಜಮ್ಮು ಕಾಶ್ಮೀರದಲ್ಲಿ ಉಗ್ರರ ದಾಳಿ: ಮತ್ತೊಬ್ಬ ಕನ್ನಡಿಗ ಬಲಿ
Image
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
Image
ಪಹಲ್ಗಾಮ್‌ ಉಗ್ರರ ದಾಳಿ, ಕನ್ನಡಿಗರ ನೆರವಿಗೆ ಅಧಿಕಾರಿಗಳನ್ನ ಕಳುಹಿಸಿದ ಸಿಎಂ

ಮತ್ತಷ್ಟು ಓದಿ: ಪ್ಯಾಂಟ್​ ಬಿಚ್ಚಿಸಿ, ಐಡಿ ಪರಿಶೀಲಿಸಿ ಹಿಂದೂಗಳನ್ನು ಮಾತ್ರ ಗುರಿಯಾಗಿಸಿ ಉಗ್ರರ ದಾಳಿ

26 ಬಲಿಯಾದವರಲ್ಲಿ ಯುಎಇ ಮತ್ತು ನೇಪಾಳದ ಇಬ್ಬರು ವಿದೇಶಿಯರು ಮತ್ತು ಇಬ್ಬರು ಸ್ಥಳೀಯರು ಸೇರಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಸುಮಾರು 8-10 ಭಯೋತ್ಪಾದಕರು ಭಾಗಿಯಾಗಿರುವ ಸಾಧ್ಯತೆಯಿದೆ. ಅವರಲ್ಲಿ 5-7 ಭಯೋತ್ಪಾದಕರು ಪಾಕಿಸ್ತಾನದವರಾಗಿರಬಹುದು.

ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸೌದಿ ಅರೇಬಿಯಾ ಭೇಟಿಯನ್ನು ಮೊಟಕುಗೊಳಿಸಿ ಇಂದು ಬೆಳಗ್ಗೆ ನವದೆಹಲಿಗೆ ಆಗಮಿಸಿದರು. ಅವರು ಬಂದ ತಕ್ಷಣ, ಪ್ರಧಾನಿ ಮೋದಿ ಅವರು ದೆಹಲಿ ವಿಮಾನ ನಿಲ್ದಾಣದಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ವಿದೇಶಾಂಗ ಸಚಿವ ಎಸ್ ಜೈಶಂಕರ್ ಮತ್ತು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಅವರೊಂದಿಗೆ ಪರಿಸ್ಥಿತಿಯ ಕುರಿತು ಚರ್ಚಿಸಲು ಸಂಕ್ಷಿಪ್ತ ಸಭೆ ನಡೆಸಿದರು.

ಪುರುಷರ ಪ್ಯಾಂಟ್ ಬಚ್ಚಿಸಿ ಅವರು ಹಿಂದೂಗಳೋ ಇಲ್ಲವೋ ಎಂದು ಖಚಿತಪಡಿಸಿಕೊಂಡು ಕೇವಲ ಹಿಂದೂಗಳನ್ನು ಮಾತ್ರ ಟಾರ್ಗೆಟ್ ಮಾಡಲಾಗಿತ್ತು. ಶಸ್ತ್ರಾಸ್ತ್ರಗಳನ್ನು ಹಿಡಿದು ಪಠಾಣ್ ಸೂಟ್ ಧರಿಸಿರುವ ವ್ಯಕ್ತಿಯೊಬ್ಬ ವಿಡಿಯೋದಲ್ಲಿ ಸೆರೆಯಾಗಿದ್ದಾನೆ. ಈ ಫೋಟೋವನ್ನು ನಿನ್ನೆ ತಡರಾತ್ರಿ ಜಮ್ಮು ಮತ್ತು ಕಾಶ್ಮೀರ ಪೊಲೀಸ್, ಸಿಆರ್‌ಪಿಎಫ್ ಮತ್ತು ಸೇನೆಯೊಂದಿಗೆ ಹಂಚಿಕೊಳ್ಳಲಾಗಿದೆ.  ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಫೋಟೊ ಇದ್ದಾಗಿದ್ದು,  ಈ ಫೋಟೊವನ್ನು ಟಿವಿ9 ಖಚಿತಪಡಿಸುವುದಿಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:59 am, Wed, 23 April 25

ಯುವಕರು ಸಾಯುತ್ತಿದ್ದರೂ ರಾಜಣ್ಣ ಹಾಸನಕ್ಕೆ ಹೋಗಿಲ್ಲ: ವಿಜಯೇಂದ್ರ
ಯುವಕರು ಸಾಯುತ್ತಿದ್ದರೂ ರಾಜಣ್ಣ ಹಾಸನಕ್ಕೆ ಹೋಗಿಲ್ಲ: ವಿಜಯೇಂದ್ರ
ಜಲಾಶಯದ ಸುತ್ತಮುತ್ತ ಪೊಲೀಸರನ್ನು ನಿಯೋಜಿಸದಿರೋದು ತಪ್ಪು
ಜಲಾಶಯದ ಸುತ್ತಮುತ್ತ ಪೊಲೀಸರನ್ನು ನಿಯೋಜಿಸದಿರೋದು ತಪ್ಪು
ಸಚಿವ ಎಂಬಿ ಪಾಟೀಲ್​ಗೆ ನಟ, ಸಾಮಾಜಿಕ ಹೋರಾಟಗಾರ ಪ್ರಕಾಶ್ ರೈ ಟಾಂಗ್
ಸಚಿವ ಎಂಬಿ ಪಾಟೀಲ್​ಗೆ ನಟ, ಸಾಮಾಜಿಕ ಹೋರಾಟಗಾರ ಪ್ರಕಾಶ್ ರೈ ಟಾಂಗ್
ಮಾಂಗಲ್ಯ ಭಾಗ್ಯದ ಅರ್ಥವೇನು, ಸ್ತ್ರೀಯರಿಗೆ ಇದು ಶ್ರೀರಕ್ಷೆ ಹೇಗೆ?
ಮಾಂಗಲ್ಯ ಭಾಗ್ಯದ ಅರ್ಥವೇನು, ಸ್ತ್ರೀಯರಿಗೆ ಇದು ಶ್ರೀರಕ್ಷೆ ಹೇಗೆ?
ಈ ರಾಶಿಯವರು ಇಂದು ಸ್ವಂತ ಉದ್ಯೋಗದಲ್ಲಿ ಅಧಿಕ ಲಾಭ ಪಡೆಯುವರು
ಈ ರಾಶಿಯವರು ಇಂದು ಸ್ವಂತ ಉದ್ಯೋಗದಲ್ಲಿ ಅಧಿಕ ಲಾಭ ಪಡೆಯುವರು
ಚಿತ್ರರಂಗದಲ್ಲಿ ಒಗ್ಗಟ್ಟಿನ ಕೊರತೆ ಇದೆ: ನಟಿ ರಮ್ಯಾ
ಚಿತ್ರರಂಗದಲ್ಲಿ ಒಗ್ಗಟ್ಟಿನ ಕೊರತೆ ಇದೆ: ನಟಿ ರಮ್ಯಾ
‘ಎಕ್ಕ’ ಸಿನಿಮಾಕ್ಕೂ ಅಪ್ಪುವಿನ ‘ಜಾಕಿ’ ಸಿನಿಮಾಕ್ಕೂ ಲಿಂಕ್ ಏನು?
‘ಎಕ್ಕ’ ಸಿನಿಮಾಕ್ಕೂ ಅಪ್ಪುವಿನ ‘ಜಾಕಿ’ ಸಿನಿಮಾಕ್ಕೂ ಲಿಂಕ್ ಏನು?
ಪುತ್ತೂರಿನಲ್ಲಿ ನೈತಿಕ ಪೊಲೀಸ್‌ಗಿರಿ: ಎಸ್​ಪಿ ಹೇಳಿದ್ದಿಷ್ಟು
ಪುತ್ತೂರಿನಲ್ಲಿ ನೈತಿಕ ಪೊಲೀಸ್‌ಗಿರಿ: ಎಸ್​ಪಿ ಹೇಳಿದ್ದಿಷ್ಟು
ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ