ಮಧ್ಯಪ್ರದೇಶ: ರಾಸಾಯನಿಕ ಬೆರೆತ ಮದ್ಯ ಸೇವಿಸಿ ಸಾವಿಗೀಡಾದವರ ಸಂಖ್ಯೆ 20ಕ್ಕೆ ಏರಿಕೆ

| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Jan 13, 2021 | 5:45 PM

ಪೊಲೀಸ್ ಇಲಾಖೆಯ ಮಾಹಿತಿ ಪ್ರಕಾರ ಕಳಪೆ ಮದ್ಯ ತಯಾರಿಸುತ್ತಿದ್ದ ಆರೋಪಿಗಳು ಕಡಿಮೆ ಬೆಲೆಯಲ್ಲಿ ಮಾರಾಟ ಮಾಡುವ ಸಲುವಾಗಿ ಅದಕ್ಕೆ ರಾಸಾಯನಿಕ ಬೆರೆಸಿ ಮಾರಾಟ ಮಾಡಿದ್ದಾರೆ.

ಮಧ್ಯಪ್ರದೇಶ: ರಾಸಾಯನಿಕ ಬೆರೆತ ಮದ್ಯ ಸೇವಿಸಿ ಸಾವಿಗೀಡಾದವರ ಸಂಖ್ಯೆ 20ಕ್ಕೆ ಏರಿಕೆ
ರಾಸಾಯನಿಕ ಬೆರೆತ ಮದ್ಯ ಸೇವಿಸಿ ಅಸ್ವಸ್ಥರಾದವರು.
Follow us on

ಮುಂಬೈ: ಮಧ್ಯಪ್ರದೇಶದ ಮೊರೆನಾ ಜಿಲ್ಲೆಯ ಮನುಪುರ್ ಮತ್ತು ಪಹವಲಿ ಗ್ರಾಮದಲ್ಲಿ ರಾಸಾಯನಿಕಗಳನ್ನು ಬಳಸಿ ತಯಾರಿಸಿದ ಮದ್ಯ ಸೇವಿಸಿ ಸಾವಿಗೀಡಾದವರ ಸಂಖ್ಯೆ 20ಕ್ಕೆ ಏರಿದೆ. ಇನ್ನೂ 17 ಜನರ ಸ್ಥಿತಿ ಗಂಭೀರವಾಗಿದ್ದು ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಉಪ-ವಿಭಾಗೀಯ ಪೊಲೀಸ್​ ಅಧಿಕಾರಿ ಸುಜಿತ್​ ಸಿಂಗ್​ ಭದೌರಿಯಾ ಅವರನ್ನು ಅಮಾನತು ಮಾಡಲಾಗಿದ್ದು, ಇದಕ್ಕೂ ಮುನ್ನ ಪೊಲೀಸ್​ ಠಾಣಾ ಮೇಲುಸ್ತುವಾರಿ ಅಧಿಕಾರಿ ಮತ್ತು ಜಿಲ್ಲಾ ಅಬಕಾರಿ ಅಧಿಕಾರಿಯನ್ನು ಅಮಾನತಿಗೆ ಒಳಪಡಿಸಲಾಗಿತ್ತು ಎಂದು ವರದಿಗಳು ತಿಳಿಸಿವೆ.

ಪೊಲೀಸ್ ಇಲಾಖೆಯ ಮಾಹಿತಿ ಪ್ರಕಾರ ಕಳಪೆ ಮದ್ಯ ತಯಾರಿಸುತ್ತಿದ್ದ ಆರೋಪಿಗಳು ಕಡಿಮೆ ಬೆಲೆಯಲ್ಲಿ ಮಾರಾಟ ಮಾಡುವ ಸಲುವಾಗಿ ಅದಕ್ಕೆ ರಾಸಾಯನಿಕ ಬೆರೆಸಿ ಮಾರಾಟ ಮಾಡಿದ್ದಾರೆ. ಘಟನೆಯ ಬಗ್ಗೆ ಗಂಭೀರ ತನಿಖೆ ನಡೆಸಲು ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್​ ಚೌಹಾಣ್ ಉನ್ನತ ಮಟ್ಟದ ಸಮಿತಿಯನ್ನು ರಚಿಸಿದ್ದಾರೆ.

ವಿಷ ಮದ್ಯ ಸೇವನೆ ಶಂಕೆ: ಮಧ್ಯಪ್ರದೇಶದಲ್ಲಿ 11 ಸಾವು, 8 ಮಂದಿ ಅಸ್ವಸ್ಥ