ಜ್ಞಾನವಾಪಿ ಮಸೀದಿ ಸಮೀಕ್ಷೆಗೆ ಅನುಮತಿ ನೀಡಿದ ನ್ಯಾಯಾಧೀಶ ಆರ್‌ಕೆ ದಿವಾಕರ್‌ಗೆ ಇಸ್ಲಾಮಿಕ್ ಮೂಲಭೂತವಾದಿಗಳಿಂದ ಕೊಲೆ ಬೆದರಿಕೆ

ಜ್ಞಾನವಾಪಿ ಮಸೀದಿ ಸಮೀಕ್ಷೆಗೆ ಅನುಮತಿ ನೀಡಿದ ನ್ಯಾಯಾಧೀಶ ಆರ್‌ಕೆ ದಿವಾಕರ್‌ ಅವರಿಗೆ ಕೊಲೆ ಬೆದರಿಕೆ ಬಂದಿದೆ. ಇದು ಇಸ್ಲಾಮಿಕ್ ಮೂಲಭೂತವಾದಿಗಳಿಂದ ಬಂದಿದೆ ಎಂದು ಹೇಳಲಾಗಿದೆ. ಈ ಕಾರಣಕ್ಕಾಗಿ ನ್ಯಾಯಾಧೀಶ ಆರ್‌ಕೆ ದಿವಾಕರ್‌ ಅವರಿಗೆ ವಿಶೇಷ ಭದ್ರತೆಯನ್ನು ನೀಡಬೇಕು ಎಂದು ಎನ್‌ಐಎ ನ್ಯಾಯಾಲಯದ ನ್ಯಾಯಾಧೀಶ ವಿವೇಕಾನಂದ ಶರಣ್ ತ್ರಿಪಾಠಿ ಅವರು ಈ ಬಗ್ಗೆ ಅಲಹಾಬಾದ್ ಹೈಕೋರ್ಟ್‌ನ ರಿಜಿಸ್ಟ್ರಾರ್ ಜನರಲ್‌ಗೆ ಪತ್ರ ಬರೆದಿದ್ದಾರೆ.

ಜ್ಞಾನವಾಪಿ ಮಸೀದಿ ಸಮೀಕ್ಷೆಗೆ ಅನುಮತಿ ನೀಡಿದ ನ್ಯಾಯಾಧೀಶ ಆರ್‌ಕೆ ದಿವಾಕರ್‌ಗೆ ಇಸ್ಲಾಮಿಕ್ ಮೂಲಭೂತವಾದಿಗಳಿಂದ ಕೊಲೆ ಬೆದರಿಕೆ
ಜ್ಞಾನವಾಪಿ ಮಸೀದಿ
Follow us
ಅಕ್ಷಯ್​ ಪಲ್ಲಮಜಲು​​
|

Updated on:Jun 22, 2024 | 3:09 PM

ವಿವಾದಿತ ಜ್ಞಾನವಾಪಿ ಮಸೀದಿ (Gyanvapi Masjid) ಬಗ್ಗೆ ವಿಡಿಯೋಗ್ರಾಫಿಕ್ ಸಮೀಕ್ಷೆಗೆ ಅನುಮತಿ ನೀಡಿದ ನ್ಯಾಯಾಧೀಶ ರವಿಕುಮಾರ್ ದಿವಾಕರ್ ಅವರಿಗೆ ಭದ್ರತೆಯನ್ನು ಹೆಚ್ಚಿಸಲು NIA (National Investigation Agency Government of India) ವಿಶೇಷ ನ್ಯಾಯಾಲಯವು ಅಲಹಾಬಾದ್ ಹೈಕೋರ್ಟ್‌ಗೆ ವಿನಂತಿ ಮಾಡಿಕೊಂಡಿದೆ. ಜ್ಞಾನವಾಪಿ ಮಸೀದಿ ಬಗ್ಗೆ ವಿಡಿಯೋಗ್ರಾಫಿಕ್ ಸಮೀಕ್ಷೆಗೆ ಅನುಮತಿ ನೀಡಿದ ದಿನದಿಂದ ಅವರು ಮತ್ತು ಅವರ ಕುಟುಂಬಕ್ಕೆ ಬೆದರಿಕೆಗಳು ಬರುತ್ತಿದೆ ಎಂದು ಹೇಳಲಾಗಿದೆ. ಎನ್‌ಐಎ ನ್ಯಾಯಾಲಯದ ನ್ಯಾಯಾಧೀಶ ವಿವೇಕಾನಂದ ಶರಣ್ ತ್ರಿಪಾಠಿ ಅವರು ಈ ಬಗ್ಗೆ ಅಲಹಾಬಾದ್ ಹೈಕೋರ್ಟ್‌ನ ರಿಜಿಸ್ಟ್ರಾರ್ ಜನರಲ್‌ಗೆ ಪತ್ರ ಬರೆದು ನ್ಯಾಯಾಧೀಶ ದಿವಾಕರ್‌ಗೆ ಹೆಚ್ಚಿನ ರಕ್ಷಣೆ ನೀಡುವಂತೆ ಕೋರಿದ್ದಾರೆ.

ಈಗಾಗಲೇ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ದಿವಾಕರ್‌ಗೆ ಬೆದರಿಕೆ ಹಾಕಿದ್ದಕ್ಕಾಗಿ ಅದ್ನಾನ್ ಖಾನ್ ಎಂಬ ಆರೋಪಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಈ ಘಟನೆ ನಡೆದ ಕೆಲವು ವಾರಗಳ ನಂತರ ಈ ಬೆಳವಣಿಗೆ ನಡೆದಿದೆ. ಇನ್ನು ನ್ಯಾಯಾಧೀಶ ತ್ರಿಪಾಠಿ ಅವರು ಅಲಹಾಬಾದ್ ಹೈಕೋರ್ಟ್‌ನ ರಿಜಿಸ್ಟ್ರಾರ್ ಜನರಲ್‌ಗೆ ಬರೆದ ಪತ್ರದಲ್ಲಿ ಇಸ್ಲಾಮಿಕ್ ಮೂಲಭೂತವಾದಿಗಳು ನ್ಯಾಯಾಧೀಶ ದಿವಾಕರ್ ಅವರನ್ನು ಕೊಲ್ಲಲು ಸಂಚು ರೂಪಿಸುತ್ತಿದ್ದಾರೆ ಎಂದು ತನಿಖೆಯಿಂದ ತಿಳಿದುಬಂದಿದೆ. ಇದು ಸೂಕ್ಷ್ಮ ವಿಷಯವಾಗಿದೆ. ಅದ್ನಾನ್‌ನ ಚಟುವಟಿಕೆಗಳಿಗೆ ಕಡಿವಾಣ ಹಾಕದಿದ್ದರೆ ಅದು ಅಹಿತಕರ ಘಟನೆಗೆ ಕಾರಣವಾಗಬಹುದು ಎಂದು ಹೇಳಿದ್ದಾರೆ. ನ್ಯಾಯಾಧೀಶ ದಿವಾಕರ್ ಈಗ ಬರೇಲಿಯಲ್ಲಿ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶರಾಗಿದ್ದಾರೆ. ಇದಕ್ಕೂ ಮುನ್ನ ಅವರು ಯುಪಿ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದು ತಮ್ಮ ಪ್ರಸ್ತುತ ಭದ್ರತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

ನ್ಯಾಯಾಧೀಶ ದಿವಾಕರ್ ಅವರು ಮುಖ್ಯ ಕಾರ್ಯದರ್ಶಿಗೆ ಬರೆದ ಪತ್ರದಲ್ಲಿ, ಅಲಹಾಬಾದ್ ಹೈಕೋರ್ಟ್ ಆದೇಶದ ನಂತರ, ನನ್ನ ಕುಟುಂಬ ಮತ್ತು ನನಗೆ ಭದ್ರತೆಯನ್ನು ಒದಗಿಸಲಾಯಿತು, ಆದರೆ ಪ್ರಸ್ತುತ ಅದು ಅಸಮರ್ಪಕವಾಗಿದೆ ಎಂದು ತೋರುತ್ತದೆ. ಅಲ್ಪಸಂಖ್ಯಾತ ಸಮುದಾಯದ ವ್ಯಕ್ತಿಗಳಿಂದ ನನ್ನನ್ನು ಕೊಲ್ಲಲು ಸಂಚು ರೂಪಿಸಿದ್ದಾರೆ. ಹಾಗಾಗಿ ನನಗೆ ಮತ್ತು ನನ್ನ ಕುಟುಂಬಕ್ಕೆ ಸೂಕ್ತ ಭದ್ರತೆ ಒದಗಿಸಲು ಈ ಪತ್ರದ ಮೂಲಕ ನಿಮ್ಮಲ್ಲಿ ಕೇಳಿಕೊಳ್ಳುತ್ತಿದ್ದೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಕಾನೂನು ಜಾರಿ ಮಾಡಿದ ಕೇಂದ್ರ

25 ಏಪ್ರಿಲ್ 2024 ರಂದು, ನ್ಯಾಯಾಧೀಶ ದಿವಾಕರ್ ಅವರಿಗೆ ಕೊಲೆ ಬೆದರಿಕೆ ಕರೆಗಳು ಕೂಡ ಬಂದಿದೆ. ಇನ್ನು ಈ ಬೆದರಿಕೆ ಬಗ್ಗೆ ತನಿಖೆ ನಡೆಸಬೇಕು ಎಂದು ಬರೇಲಿ ಪೊಲೀಸರು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:00 pm, Sat, 22 June 24

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ