ಉದ್ಯಮಿ ಮುಕೇಶ್ ಅಂಬಾನಿಗೆ ಕೊಲೆ ಬೆದರಿಕೆ: 20 ಕೋಟಿ ರೂ.ಗೆ ಬೇಡಿಕೆ ಇಟ್ಟ ಆರೋಪಿ

ಪೊಲೀಸರಿಂದ ದೊರೆತ ಮಾಹಿತಿಯ ಪ್ರಕಾರ, ಅಕ್ಟೋಬರ್ 27 ರಂದು ಮುಕೇಶ್ ಅಂಬಾನಿ ಅವರ ಇಮೇಲ್ ಐಡಿಗೆ ಇಮೇಲ್ ಬಂದಿದೆ. ಈ ಇಮೇಲ್‌ನಲ್ಲಿ ಮುಕೇಶ್ ಹಣಕ್ಕೆ ಬೇಡಿಕೆ ಇಡಲಾಗಿದೆ. ಹಣ ನೀಡದಿದ್ದರೆ ಹತ್ಯೆ ಮಾಡಲಾಗುವುದು ಎಂದು ಇಂಗ್ಲಿಷ್‌ನಲ್ಲಿ ಬರೆಯಲಾಗಿದೆ. ಈ ಬಗ್ಗೆ ಮುಕೇಶ್ ಅಂಬಾನಿ ಅವರ ಭದ್ರತಾ ಉಸ್ತುವಾರಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಉದ್ಯಮಿ ಮುಕೇಶ್ ಅಂಬಾನಿಗೆ ಕೊಲೆ ಬೆದರಿಕೆ: 20 ಕೋಟಿ ರೂ.ಗೆ ಬೇಡಿಕೆ ಇಟ್ಟ ಆರೋಪಿ
ಮುಕೇಶ್ ಅಂಬಾನಿ

Updated on: Oct 28, 2023 | 10:50 AM

ಮುಂಬೈ, ಅಕ್ಟೋಬರ್ 28: ಭಾರತದ ಶ್ರೀಮಂತ ಉದ್ಯಮಿಗಳಲ್ಲಿ ಒಬ್ಬರಾದ ಮುಕೇಶ್ ಅಂಬಾನಿ (Mukesh Ambani) ಅವರಿಗೆ ಅಪರಿಚಿತ ವ್ಯಕ್ತಿ ಜೀವ ಬೆದರಿಕೆ (Death Threat) ಹಾಕಿದ್ದಾನೆ. ವ್ಯಕ್ತಿ ಇಮೇಲ್ ಮೂಲಕ 20 ಕೋಟಿ ರೂ.ಗೆ ಬೇಡಿಕೆ ಇಟ್ಟಿದ್ದು, ಕೊಡದಿದ್ದರೆ ಕೊಲೆ ಮಾಡುವುದಾಗಿ ಬರೆದುಕೊಂಡಿದ್ದಾನೆ. ತನ್ನ ಬಳಿ ಅತ್ಯುತ್ತಮ ಶಾರ್ಪ್ ಶೂಟರ್‌ಗಳಿದ್ದಾರೆ ಎಂದು ಆ ವ್ಯಕ್ತಿ ಇಮೇಲ್‌ನಲ್ಲಿ ತಿಳಿಸಿದ್ದಾನೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಾಗಿ ಶೋಧ ಆರಂಭಿಸಿದ್ದಾರೆ.

ಪೊಲೀಸರಿಂದ ದೊರೆತ ಮಾಹಿತಿಯ ಪ್ರಕಾರ, ಅಕ್ಟೋಬರ್ 27 ರಂದು ಮುಕೇಶ್ ಅಂಬಾನಿ ಅವರ ಇಮೇಲ್ ಐಡಿಗೆ ಇಮೇಲ್ ಬಂದಿದೆ. ಈ ಇಮೇಲ್‌ನಲ್ಲಿ ಮುಕೇಶ್ ಹಣಕ್ಕೆ ಬೇಡಿಕೆ ಇಡಲಾಗಿದೆ. ಹಣ ನೀಡದಿದ್ದರೆ ಹತ್ಯೆ ಮಾಡಲಾಗುವುದು ಎಂದು ಇಂಗ್ಲಿಷ್‌ನಲ್ಲಿ ಬರೆಯಲಾಗಿದೆ. ಈ ಬಗ್ಗೆ ಮುಕೇಶ್ ಅಂಬಾನಿ ಅವರ ಭದ್ರತಾ ಉಸ್ತುವಾರಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಮುಂಬೈಯ ಗಾಮದೇವಿ ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ ಐಪಿಸಿ ಸೆಕ್ಷನ್ 387 ಮತ್ತು 506 (2) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಈ ಸಂಬಂಧ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಈ ಹಿಂದೆಯೂ ಮೊದಲು ಮುಕೇಶ್ ಅಂಬಾನಿ ಮತ್ತು ಅವರ ಪತ್ನಿ ನೀತಾ ಅಂಬಾನಿ ಅವರಿಗೆ ಕೊಲೆ ಬೆದರಿಕೆಗಳು ಬಂದಿದ್ದವು. ಇದಕ್ಕೂ ಮೊದಲು, ಅಕ್ಟೋಬರ್ 6, 2022 ರಂದು, ಅವರಿಗೆ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಬಿಹಾರದಿಂದ ಬಂಧಿಸಲಾಗಿತ್ತು. ಆರೋಪಿಯನ್ನು 30 ವರ್ಷದ ರಾಕೇಶ್ ಕುಮಾರ್ ಮಿಶ್ರಾ ಎಂದು ಗುರುತಿಸಲಾಗಿತ್ತು.

ಇದನ್ನೂ ಓದಿ: ಅತ್ಯಾಚಾರ, ಲೂಟಿ, ಡಕಾಯಿತಿಯಲ್ಲಿ ಮುಸ್ಲಿಮರೇ ನಂ.1 ಎಂದ ಅಸ್ಸಾಂ ರಾಜಕಾರಣಿ ಬದ್ರುದ್ದೀನ್ ಅಜ್ಮಲ್: ಕೊಟ್ಟ ಕಾರಣ ಹೀಗಿದೆ

ಅಕ್ಟೋಬರ್ 5, 2022 ರಂದು, ಆರೋಪಿಯು ರಿಲಯನ್ಸ್ ಫೌಂಡೇಶನ್‌ನ ಆಸ್ಪತ್ರೆಗೆ ಕರೆ ಮಾಡಿ ಅಂಬಾನಿ ಕುಟುಂಬವನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ. ಅಷ್ಟೇ ಅಲ್ಲ ಇಡೀ ಆಸ್ಪತ್ರೆಯನ್ನು ಬಾಂಬ್ ಇಟ್ಟು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದ. ಈ ವೇಳೆ ಪೊಲೀಸರು ಆರೋಪಿಯನ್ನು ಗುರುತಿಸಿ ಬಂಧಿಸಿದ್ದರು. ಆರೋಪಿ ಯುವಕ ನಿರುದ್ಯೋಗಿ ಎಂದು ಪೊಲೀಸರು ಮಾಹಿತಿ ನೀಡಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
Loading...
Unable to load recommendations.
Follow Us