ಪ್ರಧಾನಿ ಮೋದಿ, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್​ಗೆ ಕೊಲೆ ಬೆದರಿಕೆ

|

Updated on: Apr 05, 2023 | 10:16 PM

ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​​ ಅವರನ್ನು ಕೊಲೆ ಮಾಡುವುದಾಗಿ ವ್ಯಕ್ತಿಯೊಬ್ಬ ಖಾಸಗಿ ಸುದ್ದಿ ವಾಹಿನಿಯೊಂದಕ್ಕೆ ಇ-ಮೇಲ್ ಮಾಡಿದ್ದಾನೆ.

ಪ್ರಧಾನಿ ಮೋದಿ, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್​ಗೆ ಕೊಲೆ ಬೆದರಿಕೆ
UP ಸಿಎಂ ಯೋಗಿ ಆದಿತ್ಯನಾಥ್​ (ಎಡಚಿತ್ರ) ಪ್ರಧಾನಿ ನರೇಂದ್ರ ಮೋದಿ (ಬಲಚಿತ್ರ)
Follow us on

ನವದೆಹಲಿ/ ನೋಯ್ಡಾ: ಪ್ರಧಾನಿ ನರೇಂದ್ರ ಮೋದಿ (PM Narendra Modi) ಮತ್ತು ಉತ್ತರ ಪ್ರದೇಶ (Uttar Pradesh) ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​​ (Yogi Adityanath) ಅವರನ್ನು ಕೊಲೆ ಮಾಡುವುದಾಗಿ ವ್ಯಕ್ತಿಯೊಬ್ಬ ಖಾಸಗಿ ಸುದ್ದಿ ವಾಹಿನಿಯೊಂದಕ್ಕೆ ಇ-ಮೇಲ್ (E-Mail) ಸಂದೇಶ ಕಳುಹಿಸಿದ್ದಾರೆ. ಈ ಸಂಬಂಧ ವಾಹಿನಿಯ ಸಿಇಓ ನೋಯ್ಡಾದ ಸೆಕ್ಟರ್​-20 ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸಿಇಓ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಎಫ್​ಐಆರ್​ ದಾಖಲಿಸಿದ್ದು, ಎರಡು ತಂಡಗಳಾಗಿ ಪ್ರಕರಣದ ತನಿಖೆಯನ್ನು ಆರಂಭಿಸಿದ್ದಾರೆ.

ಏಪ್ರಿಲ್​ 3 ರ ರಾತ್ರಿ 10:23 ಕ್ಕೆ ಕಾರ್ತಿಕ್​ ಸಿಂಗ್​ ಎಂಬ ವ್ಯಕ್ತಿ ಪ್ರಧಾನಿ ಮೋದಿಯವರನ್ನು ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರುನ್ನು ಕೊಲ್ಲುವುದಾಗಿ ಇ-ಮೇಲ್​​ ಮೂಲಕ ಬೆದರಿಕೆ ಪತ್ರ ಬರೆದಿದ್ದಾನೆ ಎಂದು ತಿಳಿದುಬಂದಿದೆ. ಆರೋಪಿಗಾಗಿ ಹುಡುಕಾಟ ನಡೆದಿದ್ದು, ಶೀಘ್ರದಲ್ಲೆ ಬಂದಿಸಲಾಗುವುದು ಎಂದು ಪೊಲೀಸ್​ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: BJP PM Candidate: ಯಾರಾಗಲಿದ್ದಾರೆ ನರೇಂದ್ರ ಮೋದಿ ಉತ್ತರಾಧಿಕಾರಿ?; ಪ್ರಧಾನಿ ಅಭ್ಯರ್ಥಿ ಸ್ಥಾನದ ಬಗ್ಗೆ ಯೋಗಿ ಆದಿತ್ಯನಾಥ್ ಸ್ಪಷ್ಟನೆ

ದೂರಿನ ಆಧಾರದ ಮೇಲೆ ಪೊಲೀಸರು ಎರಡು ತಂಡಗಳೊಂದಿಗೆ ತನಿಖೆ ಆರಂಭಿಸಿದ್ದಾರೆ. ಇನ್ನು ಬೆದರಿಕೆ ಇ-ಮೇಲ್​ಗಳು ಆಗಾಗ ಸುದ್ದಿ ವಾಹನಿಗಳಿಗೆ ಬರುತ್ತಿರುತ್ತವೆ. ಈ ಕುರಿತು ಮಾಧ್ಯಮಗಳು ನಮಗೆ ದೂರು ನೀಡುತ್ತಿದ್ದು, ನಾವು ಗಂಭೀರವಾಗಿ ತೆಗೆದುಕೊಳ್ಳುತ್ತಿರಲಿಲ್ಲ. ಆದರೆ ಈ ಬಾರಿ ಪ್ರಧಾನಿ ಮೋದಿ ಮತ್ತು ಸಿಎಂ ಯೋಗಿ ಆದಿತ್ಯನಾಥ್​ ಅವರಿಗೆ ಪ್ರಾಣ ಬೆದರಿಕೆ ಹಾಕಿದ್ದಾರೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಆರೋಪಿ ವಿರುದ್ಧ ಹಲವು ಸೆಕ್ಷನ್​ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಇ-ಮೇಲ್ ಕಳುಹಿಸಿದ ವ್ಯಕ್ತಿಯನ್ನು ಶೀಘ್ರದಲ್ಲೇ ಬಂಧಿಸುತ್ತೇವೆ ಎಂದು ಎಂದು ಎಸಿಪಿ ರಜನೀಶ್ ವರ್ಮಾ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:08 pm, Wed, 5 April 23