ಶರದ್ ಪವಾರ್ಗೆ ಫೇಸ್‌ಬುಕ್‌ನಲ್ಲಿ ಜೀವ ಬೆದರಿಕೆ ಹಾಕಿದ್ದ ಟೆಕ್ಕಿಯ ಬಂಧನ
ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ಗೆ ಫೇಸ್‌ಬುಕ್‌ನಲ್ಲಿ ಜೀವ ಬೆದರಿಕೆ ಹಾಕಿದ್ದ ಟೆಕ್ಕಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಸಾಗರ್ ಬರ್ವೆ ಖಾಸಗಿ ಸಂಸ್ಥೆಯೊಂದರ ಡೇಟಾ ಫೀಡಿಂಗ್ ಮತ್ತು ಅನಾಲಿಟಿಕ್ಸ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದಾನೆ ಎಂದು ಮುಂಬೈ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ
ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್(Sharad Pawar)ಗೆ ಫೇಸ್‌ಬುಕ್‌ನಲ್ಲಿ ಜೀವ ಬೆದರಿಕೆ ಹಾಕಿದ್ದ ಟೆಕ್ಕಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಸಾಗರ್ ಬರ್ವೆ ಖಾಸಗಿ ಸಂಸ್ಥೆಯೊಂದರ ಡೇಟಾ ಫೀಡಿಂಗ್ ಮತ್ತು ಅನಾಲಿಟಿಕ್ಸ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದಾನೆ ಎಂದು ಮುಂಬೈ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪ್ರಕರಣದ ತನಿಖೆ ನಡೆಸುತ್ತಿದ್ದ ಮುಂಬೈ ಕ್ರೈಂ ಬ್ರಾಂಚ್ ಬಾರ್ವೆಯನ್ನು ಮುಂಬೈಗೆ ಕರೆತಂದಿತು,ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಮತ್ತು ಮಂಗಳವಾರದವರೆಗೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಶರದ್ ಪವಾರ್ ವಿರುದ್ಧ ಬರ್ವೆ ಅವರು ಫೇಸ್‌ಬುಕ್‌ನಲ್ಲಿ ಕೊಲೆ ಬೆದರಿಕೆ ಹಾಕಿದ್ದರು, ಪ್ರಕಾರ, ಬೆದರಿಕೆಗಳನ್ನು ಪೋಸ್ಟ್ ಮಾಡಲು ಅವರು ಎರಡು ನಕಲಿ ಖಾತೆಗಳನ್ನು ರಚಿಸಿದ್ದರು ಎನ್ನಲಾಗಿದೆ.
ಮತ್ತಷ್ಟು ಓದಿ: Sharad Pawar: ಶರದ್ ಪವಾರ್ಗೆ ಕೊಲೆ ಬೆದರಿಕೆ, ಪೊಲೀಸ್ ಆಯುಕ್ತರನ್ನು ಭೇಟಿಯಾದ ಸುಪ್ರಿಯಾ ಸುಲೆ
ಬೆದರಿಕೆಗಳಿಗೆ ಸಂಬಂಧಿಸಿದಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂದೆ ಅವರು ಮಾಜಿ ಸಿಎಂಗೆ ಭದ್ರತೆಯನ್ನು ಹೆಚ್ಚಿಸುವಂತೆ ಪೊಲೀಸರಿಗೆ ಸೂಚಿಸಿದ್ದರು.
ಎನ್‌ಸಿಪಿಯೊಂದಿಗೆ ಸೈದ್ಧಾಂತಿಕ ಭಿನ್ನಾಭಿಪ್ರಾಯಗಳಿದ್ದರೂ, ಪ್ರಮುಖ ವಿರೋಧ ಪಕ್ಷದ ನಾಯಕನಿಗೆ ಬೆದರಿಕೆ ಹಾಕುವುದನ್ನು ಸಹಿಸಲಾಗುವುದಿಲ್ಲ ಎಂದು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಕೂಡ ಹೇಳಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ