7 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ IAFನ An-32 ವಿಮಾನದ ಅವಶೇಷಗಳು ಪತ್ತೆ

ಮಲ್ಟಿ-ಬೀಮ್ ಸೋನಾರ್ (ಸೌಂಡ್ ನ್ಯಾವಿಗೇಷನ್ ಮತ್ತು ರೇಂಜಿಂಗ್), ಸಿಂಥೆಟಿಕ್ ಅಪರ್ಚರ್ ಸೋನಾರ್ ಮತ್ತು ಹೈ-ರೆಸಲ್ಯೂಶನ್ ಛಾಯಾಗ್ರಹಣ ಸೇರಿದಂತೆ ಹಲವು ಪೇಲೋಡ್‌ಗಳನ್ನು ಬಳಸಿಕೊಂಡು 3,400 ಮೀಟರ್ ಆಳದಲ್ಲಿ ಹುಡುಕಾಟ ನಡೆಸಲಾಯಿತು ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.

7 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ IAFನ An-32 ವಿಮಾನದ ಅವಶೇಷಗಳು ಪತ್ತೆ
ವಿಮಾನ
Follow us
ರಶ್ಮಿ ಕಲ್ಲಕಟ್ಟ
|

Updated on: Jan 12, 2024 | 7:42 PM

ದೆಹಲಿ ಜನವರಿ 12: 29 ಜನರೊಂದಿಗೆ 2016 ರಲ್ಲಿ ಬಂಗಾಳ ಕೊಲ್ಲಿಯಲ್ಲಿ (Bay of Bengal) ನಾಪತ್ತೆಯಾಗಿದ್ದ ಭಾರತೀಯ ವಾಯುಪಡೆಯ ( Indian Air Force) ಎಎನ್ -32 ವಿಮಾನದ ( An-32 aircraft)ಅವಶೇಷಗಳು ಏಳು ವರ್ಷಗಳ ನಂತರ ಪತ್ತೆಯಾಗಿವೆ ಎಂದು ಕೇಂದ್ರ ರಕ್ಷಣಾ ಸಚಿವಾಲಯ ಶುಕ್ರವಾರ ತಿಳಿಸಿದೆ. ಅಧಿಕೃತ ಹೇಳಿಕೆಯ ಪ್ರಕಾರ, ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಓಶಿಯನ್ ಟೆಕ್ನಾಲಜಿ ನಿಯೋಜಿಸಿದ ಸ್ವಾಯತ್ತ ಅಂಡರ್ವಾಟರ್ ವೆಹಿಕಲ್ (AUV) ಅನ್ನು ಚೆನ್ನೈ ಕರಾವಳಿಯಿಂದ ಸುಮಾರು 310 ಕಿಲೋಮೀಟರ್ ಸಮುದ್ರದ ತಳದಲ್ಲಿ ಕಾಣೆಯಾದ ವಿಮಾನವನ್ನು ಪತ್ತೆಹಚ್ಚಲು ಬಳಸಲಾಯಿತು.

ಮಲ್ಟಿ-ಬೀಮ್ ಸೋನಾರ್ (ಸೌಂಡ್ ನ್ಯಾವಿಗೇಷನ್ ಮತ್ತು ರೇಂಜಿಂಗ್), ಸಿಂಥೆಟಿಕ್ ಅಪರ್ಚರ್ ಸೋನಾರ್ ಮತ್ತು ಹೈ-ರೆಸಲ್ಯೂಶನ್ ಛಾಯಾಗ್ರಹಣ ಸೇರಿದಂತೆ ಹಲವು ಪೇಲೋಡ್‌ಗಳನ್ನು ಬಳಸಿಕೊಂಡು 3,400 ಮೀಟರ್ ಆಳದಲ್ಲಿ ಹುಡುಕಾಟ ನಡೆಸಲಾಯಿತು ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.

ಹುಡುಕಾಟದ ಚಿತ್ರಗಳನ್ನು ಕೂಲಂಕಷವಾಗಿ ಪರಿಶೀಲಿಸಿದಾಗ ಅದು An-32 ವಿಮಾನದ್ದು ಎಂದುಕಂಡುಬಂದಿದೆ. ಸಂಭವನೀಯ ಅಪಘಾತದ ಸ್ಥಳದಲ್ಲಿ ಇದು ಸಿಕ್ಕಿದ್ದು, ಅದೇ ಪ್ರದೇಶದಲ್ಲಿ ಯಾವುದೇ ಕಾಣೆಯಾದ ವಿಮಾನದ ವರದಿಯ ಯಾವುದೇ ದಾಖಲಿತ ಇತಿಹಾಸವಿಲ್ಲದೇ, ಅವಶೇಷಗಳು ಬಹುಶಃ ಅಪಘಾತಕ್ಕೀಡಾದ IAF An-32 (K-2743) ಗೆ ಸೇರಿದೆ ಎಂದು ಸೂಚಿಸುತ್ತದೆ ಎಂದು ಅಧಿಕೃತ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಜುಲೈ 22, 2016 ರಂದು IAF ನ An-32 ಅವಳಿ-ಎಂಜಿನ್ ವಿಮಾನವು ಬಂಗಾಳ ಕೊಲ್ಲಿಯಲ್ಲಿ ನಿಗೂಢವಾಗಿ ಕಣ್ಮರೆಯಾಯಿತು. ವಿಮಾನವು ಚೆನ್ನೈನ ತಾಂಬರಂ ಏರ್ ಫೋರ್ಸ್ ಸ್ಟೇಷನ್‌ನಿಂದ ಬೆಳಿಗ್ಗೆ 8:30 ರ ಸುಮಾರಿಗೆ ಹೊರಟಿದ್ದು ಮಧ್ಯಾಹ್ನ ಹೊತ್ತಿಗೆ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಪೋರ್ಟ್ ಬ್ಲೇರ್‌ಗೆ ಆಗಮಿಸಬೇಕಿತ್ತು.. ಆದಾಗ್ಯೂ, ವಿಮಾನವು ಚೆನ್ನೈನಿಂದ ಪೂರ್ವಕ್ಕೆ 280 ಕಿಲೋಮೀಟರ್ ದೂರದಲ್ಲಿದ್ದಾಗ ಅಧಿಕಾರಿಗಳು ಬೆಳಿಗ್ಗೆ 9:12 ರ ಸುಮಾರಿಗೆ ವಿಮಾನದೊಂದಿಗೆ ರಾಡಾರ್ ಸಂಪರ್ಕವನ್ನು ಕಳೆದುಕೊಂಡರು.

ಇದನ್ನೂ ಓದಿ:ಕಾಲ್ನಡಿಗೆಯಲ್ಲಿ ಅಯೋಧ್ಯೆಗೆ ಹೊರಟ ಭಕ್ತ: ಇತ್ತ ಮತ್ತೊಮ್ಮೆ ಮೋದಿಗಾಗಿ ಅಂಜನಾದ್ರಿಗೆ ಪಾದಯಾತ್ರೆ

ಆರು ಸಿಬ್ಬಂದಿ, 11 ಐಎಎಫ್ ಸಿಬ್ಬಂದಿ, ಇಬ್ಬರು ಭಾರತೀಯ ಸೇನೆಯ ಸೈನಿಕರು,ತಲಾ ಒಬ್ಬರು ಭಾರತೀಯ ನೌಕಾಪಡೆ ಮತ್ತು ಭಾರತೀಯ ಕೋಸ್ಟ್ ಗಾರ್ಡ್ ಮತ್ತು ನೌಕಾ ಶಸ್ತ್ರಾಸ್ತ್ರ ಡಿಪೋದಲ್ಲಿ ಕೆಲಸ ಮಾಡುವ ಎಂಟು ರಕ್ಷಣಾ ನಾಗರಿಕರು ಸೇರಿದಂತೆ ವಿಮಾನದಲ್ಲಿ 29 ಜನರಿದ್ದರು. ವಿಮಾನದ ಹುಡುಕಾಟ ಮತ್ತು ರಕ್ಷಣಾ ಕಾರ್ಯಾಚರಣೆಯು ಭಾರತೀಯ ಸೇನೆಯ ಸೈನಿಕರು ಜಲಾಂತರ್ಗಾಮಿ, ಮೇಲ್ಮೈ ಹಡಗುಗಳು ಮತ್ತು ವಿಮಾನವನ್ನು ಪತ್ತೆಹಚ್ಚಲು ಹಲವಾರು ವಿಮಾನಗಳನ್ನು ಬಳಸಿಕೊಂಡಿದ್ದು ಭಾರತದ ಅತಿದೊಡ್ಡ ಶೋಧ ಕಾರ್ಯಾಚರಣೆಗಳಲ್ಲಿ ಒಂದಾಗಿದೆ. ಆಗಸ್ಟ್ 1, 2016 ರಂದು, ವಿಮಾನವು ನೀರೊಳಗಿನ ಲೊಕೇಟರ್ ಬೀಕನ್ ಅನ್ನು ಹೊಂದಿಲ್ಲ ಎಂದು ದೃಢಪಡಿಸಿದಾಗ, ಸೆಪ್ಟೆಂಬರ್ 15, 2016 ರಂದು ರಕ್ಷಣಾ ಕಾರ್ಯಾಚರಣೆಯನ್ನು ನಿಲ್ಲಿಸಲಾಯಿತು. ವಿಮಾನದಲ್ಲಿದ್ದವರು ಯಾರೂ ಬದುಕುಳಿದಿಲ್ಲ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?