Deepavali 2021: ಕಾಶ್ಮೀರದ ಗಡಿಯಲ್ಲಿ ಸೈನಿಕರೊಂದಿಗೆ ನಾಳೆ ಪ್ರಧಾನಿ ನರೇಂದ್ರ ಮೋದಿ ದೀಪಾವಳಿ ಆಚರಣೆ
2014ರಲ್ಲಿ ಪ್ರಧಾನ ಮಂತ್ರಿಯಾದಾಗಿನಿಂದ ನರೇಂದ್ರ ಮೋದಿ ಅವರು ದೀಪಾವಳಿಯಂದು ಗಡಿ ಔಟ್‌ಪೋಸ್ಟ್‌ಗಳಿಗೆ ಭೇಟಿ ನೀಡುತ್ತಿದ್ದಾರೆ. ಪ್ರತಿ ಬಾರಿ ಸೈನಿಕರಿಗೆ ಸಿಹಿತಿಂಡಿಗಳು ಮತ್ತು ಇತರ ಉಡುಗೊರೆಗಳನ್ನು ನೀಡುತ್ತಾರೆ.
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿರುವ ನೌಶೇರಾ ಸೆಕ್ಟರ್‌ನ ಮುಂಭಾಗದ ಪ್ರದೇಶವನ್ನು ಸುಂದರವಾಗಿ ಅಲಂಕರಿಸಿ ಸಜ್ಜುಗೊಳಿಸಲಾಗಿದೆ. ಇಲ್ಲಿ ನಾಳೆ (ಗುರುವಾರ) ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾರತೀಯ ಸೈನಿಕರೊಂದಿಗೆ ದೀಪಾವಳಿ ಹಬ್ಬವನ್ನು ಆಚರಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ (ನವೆಂಬರ್ 4) ಜಮ್ಮು ಮತ್ತು ಕಾಶ್ಮೀರದ ರಜೌರಿಯ ನೌಶೇರಾ ಸೆಕ್ಟರ್‌ನ ಮುಂಭಾಗದ ಪ್ರದೇಶದಲ್ಲಿ ಭಾರತೀಯ ಸೇನಾ ಯೋಧರೊಂದಿಗೆ ದೀಪಾವಳಿ ಆಚರಿಸಲಿದ್ದಾರೆ ಎಂದು ಸರ್ಕಾರ ತಿಳಿಸಿದೆ.
2014ರಲ್ಲಿ ಪ್ರಧಾನ ಮಂತ್ರಿಯಾದಾಗಿನಿಂದ ನರೇಂದ್ರ ಮೋದಿ ಅವರು ದೀಪಾವಳಿಯಂದು ಗಡಿ ಔಟ್‌ಪೋಸ್ಟ್‌ಗಳಿಗೆ ಭೇಟಿ ನೀಡುತ್ತಿದ್ದಾರೆ. ಪ್ರತಿ ಬಾರಿ ಸೈನಿಕರಿಗೆ ಸಿಹಿತಿಂಡಿಗಳು ಮತ್ತು ಇತರ ಉಡುಗೊರೆಗಳನ್ನು ನೀಡುತ್ತಾರೆ. ನರೇಂದ್ರ ಮೋದಿ 2019ರಲ್ಲೂ ರಜೌರಿಯಲ್ಲಿ ಸೈನಿಕರೊಂದಿಗೆ ದೀಪಾವಳಿಯನ್ನು ಆಚರಿಸಿದ್ದರು.
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಮತ್ತು ರಜೌರಿಯ ಅರಣ್ಯ ಪ್ರದೇಶದಲ್ಲಿ ಉಗ್ರರನ್ನು ಹೊಡೆದುರುಳಿಸಲು ಸೇನಾ ಸಿಬ್ಬಂದಿ ಭಾರೀ ಶೋಧ ನಡೆಸುತ್ತಿದ್ದಾರೆ. ಪೂಂಚ್‌ನಲ್ಲಿ ಭಯೋತ್ಪಾದಕರ ವಿರುದ್ಧದ ಹೋರಾಟದಲ್ಲಿ ಹಲವಾರು ಸೇನಾ ಸಿಬ್ಬಂದಿಗಳು ಸಾವನ್ನಪ್ಪಿದ್ದಾರೆ. ಶನಿವಾರ ರಜೌರಿಯ ಗಡಿ ನಿಯಂತ್ರಣ ರೇಖೆಯ (ಎಲ್‌ಒಸಿ) ಮುಂಚೂಣಿ ಪೋಸ್ಟ್‌ನ ಬಳಿ ಗಣಿ ಸ್ಫೋಟದಲ್ಲಿ ಭಾರತೀಯ ಸೇನೆಯ ಅಧಿಕಾರಿ ಮತ್ತು ಯೋಧ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಮತ್ತೊಬ್ಬ ಯೋಧ ಗಾಯಗೊಂಡಿದ್ದಾರೆ.
ಭಾರತೀಯ ಸೇನೆಯ ಮತ್ತೊಂದು ಪ್ರಮುಖ ವಲಯವೆಂದರೆ ಲಡಾಖ್ ಸೆಕ್ಟರ್ನಲ್ಲಿ ನೆರೆಯ ದೇಶದಿಂದ ಯಾವುದೇ ಅತಿಕ್ರಮಣವನ್ನು ಪರಿಶೀಲಿಸಲು 18 ತಿಂಗಳಿಗೂ ಹೆಚ್ಚು ಕಾಲ ಭಾರತ-ಚೀನಾ ಗಡಿಯಲ್ಲಿ ಪಡೆಗಳನ್ನು ನಿಯೋಜಿಸಲಾಗಿದೆ. 2014ರಲ್ಲಿ ಅಧಿಕಾರ ವಹಿಸಿಕೊಂಡಾಗಿನಿಂದ ಉತ್ತರಾಖಂಡ, ಹಿಮಾಚಲ ಪ್ರದೇಶ, ರಾಜಸ್ಥಾನ, ಪಂಜಾಬ್ ಮತ್ತು ಜಮ್ಮು ಮತ್ತು ಕಾಶ್ಮೀರದ ಕೇಂದ್ರಾಡಳಿತ ಪ್ರದೇಶಗಳ ಮುನ್ನುಗ್ಗುತ್ತಿರುವ ಪ್ರದೇಶಗಳಲ್ಲಿ ಸೈನಿಕರೊಂದಿಗೆ ಸಮಯ ಕಳೆಯುವ ಮೂಲಕ ಪ್ರಧಾನಿ ದೀಪಾವಳಿಯನ್ನು ಆಚರಿಸುತ್ತಿದ್ದಾರೆ.
ಇದನ್ನೂ ಓದಿ: Deepavali 2021: ದೀಪಾವಳಿಗೆ ಮಕ್ಕಳು ಪಟಾಕಿ ಸಿಡಿಸಲಿ; ವಾಯುಮಾಲಿನ್ಯ ನಿಯಂತ್ರಿಸಲು ಹೊಸ ಉಪಾಯ ಹೇಳಿದ ಸದ್ಗುರು!
Viral Video: ಬೆಂಗಳೂರು ಏರ್ಪೋರ್ಟ್ನಲ್ಲಿ ಕಂಡ ಸೈನಿಕರಿಗೆ ಸಲ್ಯೂಟ್ ಮಾಡಿದ 4 ವರ್ಷದ ಬಾಲಕ; ವಿಡಿಯೋ ವೈರಲ್