Deepavali 2022: ಕಾರ್ಗಿಲ್​ನಲ್ಲಿ ಸೈನಿಕರೊಂದಿಗೆ ಪ್ರಧಾನಿ ಮೋದಿ ದೀಪಾವಳಿ ಸಂಭ್ರಮ

| Updated By: ಸುಷ್ಮಾ ಚಕ್ರೆ

Updated on: Oct 24, 2022 | 10:58 AM

2014ರಲ್ಲಿ ಪ್ರಧಾನಿಯಾದಾಗಿನಿಂದ ಉತ್ತರಾಖಂಡ, ಹಿಮಾಚಲ ಪ್ರದೇಶ, ರಾಜಸ್ಥಾನ, ಪಂಜಾಬ್, ಜಮ್ಮು ಮತ್ತು ಕಾಶ್ಮೀರ ರಾಜ್ಯಗಳಲ್ಲಿ ಸೈನಿಕರೊಂದಿಗೆ ಸಮಯ ಕಳೆಯುವ ಮೂಲಕ ನರೇಂದ್ರ ಮೋದಿ ದೀಪಾವಳಿಯನ್ನು ಆಚರಿಸುತ್ತಿದ್ದಾರೆ.

Deepavali 2022: ಕಾರ್ಗಿಲ್​ನಲ್ಲಿ ಸೈನಿಕರೊಂದಿಗೆ ಪ್ರಧಾನಿ ಮೋದಿ ದೀಪಾವಳಿ ಸಂಭ್ರಮ
ಕಾರ್ಗಿಲ್​ನಲ್ಲಿ ಪ್ರಧಾನಿ ನರೇಂದ್ರ ಮೋದಿ
Follow us on

ಕಾರ್ಗಿಲ್: ನಿನ್ನೆಯಷ್ಟೇ ಅಯೋಧ್ಯೆಯ ದೀಪೋತ್ಸವದಲ್ಲಿ ಪಾಲ್ಗೊಂಡಿದ್ದ ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು ಕಾರ್ಗಿಲ್​ನಲ್ಲಿ ಭಾರತೀಯ ಸೈನಿಕರ ಜೊತೆ ದೀಪಾವಳಿ (Deepavali) ಆಚರಿಸಿದ್ದಾರೆ. ಪ್ರತಿ ವರ್ಷದ ಸಂಪ್ರದಾಯದಂತೆ ಈ ಬಾರಿಯೂ ಸೈನಿಕರೊಂದಿಗೆ ದೀಪಾವಳಿ ಆಚರಿಸಲು ಪ್ರಧಾನಿ ನರೇಂದ್ರ ಮೋದಿ ಕಾರ್ಗಿಲ್‌ಗೆ (Kargil) ಆಗಮಿಸಿದ್ದಾರೆ. 2021ರಲ್ಲಿ ಅವರು ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿನ ಗಡಿ ಹೊರಠಾಣೆಗಳಲ್ಲಿ ಸೈನಿಕರೊಂದಿಗೆ ದೀಪಾವಳಿಯನ್ನು ಆಚರಿಸಿದ್ದರು. ಅದಕ್ಕೂ ಹಿಂದಿನ ವರ್ಷ ಜೈಸಲ್ಮೇರ್‌ನಲ್ಲಿ ಭಾರತೀಯ ಸೇನೆಯ ಸೈನಿಕರೊಂದಿಗೆ ಪ್ರಧಾನಿ ದೀಪಾವಳಿಯನ್ನು ಆಚರಿಸಿದ್ದರು.

2014ರಲ್ಲಿ ಅಧಿಕಾರ ವಹಿಸಿಕೊಂಡಾಗಿನಿಂದ ಉತ್ತರಾಖಂಡ, ಹಿಮಾಚಲ ಪ್ರದೇಶ, ರಾಜಸ್ಥಾನ, ಪಂಜಾಬ್ ಮತ್ತು ಜಮ್ಮು ಮತ್ತು ಕಾಶ್ಮೀರದ ಕೇಂದ್ರಾಡಳಿತ ಪ್ರದೇಶಗಳಂತಹ ರಾಜ್ಯಗಳಲ್ಲಿ ಸೈನಿಕರೊಂದಿಗೆ ಸಮಯ ಕಳೆಯುವ ಮೂಲಕ ಪ್ರಧಾನಿ ದೀಪಾವಳಿಯನ್ನು ಆಚರಿಸುತ್ತಿದ್ದಾರೆ.

ಇದನ್ನೂ ಓದಿ: Ayodhya Deepotsav: ಇಂದು ಅಯೋಧ್ಯೆ ದೀಪೋತ್ಸವದಲ್ಲಿ ಪ್ರಧಾನಿ ಮೋದಿ ಭಾಗಿ; ರಾಮಜನ್ಮ ಭೂಮಿಯಲ್ಲಿ ಬೆಳಗಲಿವೆ 15 ಲಕ್ಷ ದೀಪಗಳು

ಈ ವೇಳೆ ಮೋದಿ ಸೈನಿಕರಿಗೆ ಸ್ವೀಟ್ ಮತ್ತು ಇತರ ಉಡುಗೊರೆಗಳನ್ನು ನೀಡುತ್ತಾರೆ. ಇದೇ ವೇಳೆ ಪ್ರಧಾನಿ ಮೋದಿ ದೀಪಾವಳಿಯ ಸಂದರ್ಭದಲ್ಲಿ ಎಲ್ಲರಿಗೂ ಶುಭಾಶಯಗಳನ್ನು ಕಳುಹಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ದೀಪಾವಳಿ ಹಬ್ಬವು ನಿಮ್ಮ ಜೀವನದಲ್ಲಿ ಸಂತೋಷ ಮತ್ತು ಯೋಗಕ್ಷೇಮದ ಉತ್ಸಾಹವನ್ನು ಹೆಚ್ಚಿಸಲಿ ಎಂದು ಹೇಳಿದ್ದಾರೆ.

ಪ್ರಧಾನಿಯಾಗಿ ಮೋದಿಯವರು ಅಧಿಕಾರ ವಹಿಸಿಕೊಂಡ ಮೊದಲ ವರ್ಷ ಅಂದರೆ 2014ರಲ್ಲಿ ಸಿಯಾಚಿನ್‌ನಲ್ಲಿ ದೀಪಾವಳಿ ಹಬ್ಬವನ್ನು ಆಚರಿಸಿದರು. 2015ರಲ್ಲಿ ಅವರು ಪಂಜಾಬ್‌ಗೆ ಭೇಟಿ ನೀಡಿ 1965ರ ಪಾಕಿಸ್ತಾನದೊಂದಿಗಿನ ಯುದ್ಧದಲ್ಲಿ ಭಾರತೀಯ ಸೇನೆಯ 50 ವರ್ಷಗಳ ಸಾಧನೆಯನ್ನು ಆಚರಿಸಿದ್ದರು. 2016ರಲ್ಲಿ, ಅವರು ಭದ್ರತಾ ಸಿಬ್ಬಂದಿಯೊಂದಿಗೆ ಹಬ್ಬವನ್ನು ಕಳೆಯಲು ಚೀನಾ ಗಡಿಯ ಬಳಿಗೆ ಹೋಗಿದ್ದರು. 2017 ರಲ್ಲಿ ಉತ್ತರ ಕಾಶ್ಮೀರದ ಗುರೆಜ್ ಸೆಕ್ಟರ್‌ನಲ್ಲಿ ದೀಪಾವಳಿ ಆಚರಿಸಿದ್ದರು.

2018ರಲ್ಲಿ ಅವರು ಉತ್ತರಾಖಂಡದ ಹರ್ಸಿಲ್​ನಲ್ಲಿ ದೀಪಾವಳಿ ಆಚರಿಸಿದ್ದರು. 2019ರಲ್ಲಿ ಜಮ್ಮು ಮತ್ತು ಕಾಶ್ಮೀರದ ರಾಜೌರಿಯಲ್ಲಿ ಸೈನಿಕರ ಜೊತೆ ಕಳೆದಿದ್ದರು. ಕಳೆದ ವರ್ಷ ಅವರು ಜಮ್ಮು ಕಾಶ್ಮೀರದಲ್ಲಿರುವ ನೌಶೆರಾದಲ್ಲಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ