Deepavali 2022: ಪ್ರಧಾನಿ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿದಂತೆ ಹಲವು ಗಣ್ಯರಿಂದ ದೀಪಾವಳಿಯ ಶುಭಾಶಯ
Diwali 2022: ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿದಂತೆ ಹಲವು ಗಣ್ಯರು ದೇಶದ ಜನರಿಗೆ ದೀಪಾವಳಿಯ ಶುಭಾಶಯ ಕೋರಿದ್ದಾರೆ.
ಇಡೀ ದೇಶದಲ್ಲಿ ದೀಪಾವಳಿ ಹಬ್ಬದ ಸಡಗರ ಮನೆ ಮಾಡಿದೆ. ಈ ದೀಪಾವಳಿಯು (Diwali 2022) ಭಾರತದಲ್ಲಿ ಅತ್ಯಂತ ವ್ಯಾಪಕವಾಗಿ ಆಚರಿಸಲಾಗುವ ಹಬ್ಬಗಳಲ್ಲಿ ಒಂದಾಗಿದೆ. ಇದು ದೇಶದಲ್ಲಿ ಹಬ್ಬದ ಋತುವಿನ ಆರಂಭವನ್ನು ಸೂಚಿಸುತ್ತದೆ. ಬೆಳಕಿನ ಹಬ್ಬ ದೀಪಾವಳಿಯ (Deepavali) ಸಂಭ್ರಮದ ಸಂದರ್ಭದಲ್ಲಿ ಹಲವು ರಾಜಕಾರಣಿಗಳು ಮತ್ತು ಮುಖಂಡರು ದೀಪಾವಳಿಯ ಶುಭಾಶಯಗಳನ್ನು ಕೋರಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿದಂತೆ ಹಲವು ಗಣ್ಯರು ದೇಶದ ಜನರಿಗೆ ದೀಪಾವಳಿಯ ಶುಭಾಶಯ ಕೋರಿದ್ದಾರೆ. ಕೇಂದ್ರ ಸಚಿವರಾದ ಅಮಿತ್ ಶಾ ಮತ್ತು ರಾಜನಾಥ್ ಸಿಂಗ್, ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ಈ ಸಂದರ್ಭದಲ್ಲಿ ಭಾರತೀಯರಿಗೆ ಶುಭಾಶಯ ಕೋರಿದ್ದಾರೆ.
Wishing everyone a Happy Diwali. Diwali is associated with brightness and radiance. May this auspicious festival further the spirit of joy and well-being in our lives. I hope you have a wonderful Diwali with family and friends.
— Narendra Modi (@narendramodi) October 24, 2022
ಟ್ವಿಟ್ಟರ್ ಮೂಲಕ ಶುಭಾಶಯ ಕೋರಿರುವ ಪ್ರಧಾನಿ ನರೇಂದ್ರ ಮೋದಿ, ಎಲ್ಲರಿಗೂ ದೀಪಾವಳಿಯ ಶುಭಾಶಯಗಳು. ದೀಪಾವಳಿ ಹಬ್ಬವು ನಿಮ್ಮ ಜೀವನದಲ್ಲಿ ಸಂತೋಷ ಮತ್ತು ಯೋಗಕ್ಷೇಮದ ಉತ್ಸಾಹವನ್ನು ಹೆಚ್ಚಿಸಲಿ. ನೀವು ಕುಟುಂಬ ಮತ್ತು ಸ್ನೇಹಿತರೊಂದಿಗೆ ಅದ್ಭುತವಾದ ದೀಪಾವಳಿಯನ್ನು ಆಚರಿಸಿರಿ ಎಂದು ಹೇಳಿದ್ದಾರೆ.
सभी देशवासियों को दीवाली की हार्दिक शुभकामनाएं! प्रकाश और उमंग के इस पवित्र त्योहार पर, हम ज्ञान और ऊर्जा के दीपक को प्रज्ज्वलित करते हुए जरूरतमंद लोगों के जीवन में भी खुशियां लाने का प्रयास करें। मैं इस महापर्व पर सभी देशवासियों के जीवन में सुख-समृद्धि के लिए प्रार्थना करती हूं।
— President of India (@rashtrapatibhvn) October 24, 2022
ಇದನ್ನೂ ಓದಿ: Deepavali 2022: ಕಾರ್ಗಿಲ್ನಲ್ಲಿ ಸೈನಿಕರೊಂದಿಗೆ ಪ್ರಧಾನಿ ಮೋದಿ ದೀಪಾವಳಿ ಸಂಭ್ರಮ
ರಾಷ್ಟ್ರಪತಿ ದ್ರೌಪದಿ ಮುರ್ಮು, ದೇಶದ ಎಲ್ಲಾ ಜನರಿಗೆ ದೀಪಾವಳಿಯ ಶುಭಾಶಯಗಳು! ಬೆಳಕು ಮತ್ತು ಸಂತೋಷದ ಈ ಪವಿತ್ರ ಹಬ್ಬದಂದು ಜ್ಞಾನ ಮತ್ತು ಶಕ್ತಿಯ ದೀಪವನ್ನು ಬೆಳಗಿಸುವ ಮೂಲಕ ಅಗತ್ಯವಿರುವವರ ಜೀವನದಲ್ಲಿ ಸಂತೋಷವನ್ನು ತರಲು ಪ್ರಯತ್ನಿಸೋಣ. ಈ ಮಹಾನ್ ಹಬ್ಬದಂದು ಎಲ್ಲಾ ಜನರ ಜೀವನದಲ್ಲಿ ಸಂತೋಷ ಮತ್ತು ಸಮೃದ್ಧಿಗಾಗಿ ನಾನು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.
समस्त देशवासियों को दीपावली की हार्दिक शुभकामनाएं। प्रकाश का यह पर्व सभी के जीवन में खुशियां, आरोग्य व समृद्धि लाए। pic.twitter.com/iTFUoddlm9
— Amit Shah (@AmitShah) October 24, 2022
ನಾಡಿನ ಸಮಸ್ತ ಜನತೆಗೆ ಬೆಳಕಿನ ಹಬ್ಬ ದೀಪಾವಳಿಯ ಹಾರ್ದಿಕ ಶುಭಾಶಯಗಳು. ಸರ್ವರ ಬಾಳಲ್ಲಿ ಸಂಕಷ್ಟಗಳು ದೂರವಾಗಿ, ಸುಖ, ಶಾಂತಿಃ ಹಾಗೂ ಸಮೃದ್ಧಿಯನ್ನು ತರಲಿ ಎಂದು ಹಾರೈಸುತ್ತೇನೆ ಎಂದು ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.
दीपावली के पावन पर्व की आप सभी को हार्दिक शुभकामनाएँ! यह पावन पर्व आपके जीवन में सुख, समृद्धि और आरोग्य लेकर आए यही मेरी ईश्वर से कामना है। शुभ दीपावली!
Warm Diwali greetings to everyone. May this festival bring joy, health and wealth in your life. #HappyDiwali
— Rajnath Singh (@rajnathsingh) October 24, 2022
ನಾಡಿನ ಸಮಸ್ತ ಜನತೆಗೆ ಬೆಳಕಿನ ಹಬ್ಬ ದೀಪಾವಳಿಯ ಹಾರ್ದಿಕ ಶುಭಾಶಯಗಳು .
ಸರ್ವರ ಬಾಳಲ್ಲಿ ಸಂಕಷ್ಟಗಳು ದೂರವಾಗಿ, ಸುಖ, ಶಾಂತಿಃ ಹಾಗೂ ಸಮೃದ್ಧಿಯನ್ನು ತರಲಿ ಎಂದು ಹಾರೈಸುತ್ತೇನೆ.#Deepavali2022 pic.twitter.com/2vSzsslLjM
— Basavaraj S Bommai (@BSBommai) October 24, 2022
ಬೆಳಕಿನ ಹಬ್ಬ ದೀಪಾವಳಿ ಭಾರತದಲ್ಲಿ ಅತ್ಯಂತ ಜನಪ್ರಿಯ ಹಬ್ಬವಾಗಿದೆ. ದೀಪಾವಳಿಯನ್ನು ಇಂದು (ಅಕ್ಟೋಬರ್ 24) ದೇಶಾದ್ಯಂತ ಆಚರಿಸಲಾಗುತ್ತಿದೆ. ದೀಪಾವಳಿಯ ಸಮಯದಲ್ಲಿ ಹಿಂದೂಗಳು ಆರೋಗ್ಯ, ಸಮೃದ್ಧಿ, ಸಂಪತ್ತು ಮತ್ತು ಸಂತೋಷಕ್ಕಾಗಿ ಲಕ್ಷ್ಮಿ ದೇವತೆ ಮತ್ತು ಗಣೇಶನನ್ನು ಪೂಜಿಸುತ್ತಾರೆ. ಈ ದಿನ ಕಾಳಿ ದೇವಿ ಮತ್ತು ಕುಬೇರನನ್ನೂ ಪೂಜಿಸಲಾಗುತ್ತದೆ.