ಹುಸಿ ಬಾಂಬ್ ಬೆದರಿಕೆ ಪ್ರಕರಣ; ಚೇಷ್ಟೆ, ಕಾನೂನುಬಾಹಿರ ಕೃತ್ಯಗಳ ಬಗ್ಗೆ ನಾಗರಿಕ ವಿಮಾನಯಾನ ಸಚಿವ ಕಳವಳ

ಭಾರತೀಯ ವಿಮಾನಯಾನ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ದೇಶೀಯ ಮತ್ತು ಅಂತರಾಷ್ಟ್ರೀಯ ಕಾರ್ಯಾಚರಣೆಗಳ ಮೇಲೆ ಪರಿಣಾಮ ಬೀರುವ ಇತ್ತೀಚಿನ ಅಡಚಣೆಯ ಕೃತ್ಯಗಳ ಬಗ್ಗೆ ನಾನು ತೀವ್ರ ಕಳವಳ ಹೊಂದಿದ್ದೇನೆ. ಇಂತಹ ಚೇಷ್ಟೆಯ ಮತ್ತು ಕಾನೂನುಬಾಹಿರ ಕ್ರಮಗಳು ತೀವ್ರ ಕಳವಳಕಾರಿ ವಿಷಯವಾಗಿದೆ. ನಮ್ಮ ವಾಯುಯಾನ ಕ್ಷೇತ್ರದ ಸುರಕ್ಷತೆ, ಭದ್ರತೆ ಮತ್ತು ಕಾರ್ಯಾಚರಣೆಯ ಸಮಗ್ರತೆಗೆ ರಾಜಿ ಮಾಡಿಕೊಳ್ಳುವ ಯಾವುದೇ ಪ್ರಯತ್ನಗಳನ್ನು ನಾನು ಬಲವಾಗಿ ಖಂಡಿಸುತ್ತೇನೆ ಎಂದು ಸಚಿವರು ಹೇಳಿದ್ದಾರೆ.

ಹುಸಿ ಬಾಂಬ್ ಬೆದರಿಕೆ ಪ್ರಕರಣ; ಚೇಷ್ಟೆ, ಕಾನೂನುಬಾಹಿರ ಕೃತ್ಯಗಳ ಬಗ್ಗೆ ನಾಗರಿಕ ವಿಮಾನಯಾನ ಸಚಿವ ಕಳವಳ
ರಾಮ್ ಮೋಹನ್ ನಾಯ್ಡು
Follow us
ರಶ್ಮಿ ಕಲ್ಲಕಟ್ಟ
|

Updated on:Oct 16, 2024 | 9:01 PM

ದೆಹಲಿ ಅಕ್ಟೋಬರ್ 16: ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಅವರು ಕಳೆದ ಕೆಲವು ದಿನಗಳಿಂದ ಹಲವಾರು ವಿಮಾನಯಾನ ಸಂಸ್ಥೆಗಳಿಗೆ ಹುಸಿ ಬಾಂಬ್ ಬೆದರಿಕೆ ಬರುತ್ತಿರುವ ಪ್ರಕರಣಗಳ ಕುರಿತು ಪ್ರತಿಕ್ರಿಯಿಸಿದ್ದು , “ಅಡಚಣೆಯುಂಟುಮಾಡುವ ಕೃತ್ಯಗಳ” ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಅದೇ ವೇಳೆ ಕಾನೂನು ಜಾರಿ ಸಂಸ್ಥೆಗಳು ಅಪರಾಧಿಗಳನ್ನು ಬಂಧಿಸುತ್ತವೆ ಎಂದು ಹೇಳಿದರು. ಇಂತಹ ಮೂರು ಕರೆಗಳನ್ನು ಮಾಡಿದ್ದಕ್ಕಾಗಿ ಮುಂಬೈ ಪೊಲೀಸರು ಅಪ್ರಾಪ್ತನನ್ನು ಬಂಧಿಸಿದ್ದಾರೆ ಎಂದು ಸಚಿವರು ಹೇಳಿದ್ದಾರೆ.

ಭಾರತೀಯ ವಿಮಾನಯಾನ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ದೇಶೀಯ ಮತ್ತು ಅಂತರಾಷ್ಟ್ರೀಯ ಕಾರ್ಯಾಚರಣೆಗಳ ಮೇಲೆ ಪರಿಣಾಮ ಬೀರುವ ಇತ್ತೀಚಿನ ಅಡಚಣೆಯ ಕೃತ್ಯಗಳ ಬಗ್ಗೆ ನಾನು ತೀವ್ರ ಕಳವಳ ಹೊಂದಿದ್ದೇನೆ. ಇಂತಹ ಚೇಷ್ಟೆಯ ಮತ್ತು ಕಾನೂನುಬಾಹಿರ ಕ್ರಮಗಳು ತೀವ್ರ ಕಳವಳಕಾರಿ ವಿಷಯವಾಗಿದೆ. ನಮ್ಮ ವಾಯುಯಾನ ಕ್ಷೇತ್ರದ ಸುರಕ್ಷತೆ, ಭದ್ರತೆ ಮತ್ತು ಕಾರ್ಯಾಚರಣೆಯ ಸಮಗ್ರತೆಗೆ ರಾಜಿ ಮಾಡಿಕೊಳ್ಳುವ ಯಾವುದೇ ಪ್ರಯತ್ನಗಳನ್ನು ನಾನು ಬಲವಾಗಿ ಖಂಡಿಸುತ್ತೇನೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ನಾನು ಅಕ್ಟೋಬರ್ 14 ರಂದು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (DGCA), ಬ್ಯೂರೋ ಆಫ್ ಸಿವಿಲ್ ಏವಿಯೇಷನ್ ಸೆಕ್ಯುರಿಟಿ (BCAS), ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF), ಗೃಹ ವ್ಯವಹಾರಗಳ ಸಚಿವಾಲಯ ಮತ್ತು ನಾಗರಿಕ ವಿಮಾನಯಾನ ಸಚಿವಾಲಯ ಅಧಿಕಾರಿಗಳನ್ನು ಒಳಗೊಂಡ ಉನ್ನತ ಮಟ್ಟದ ಸಮಿತಿಯ ಅಧ್ಯಕ್ಷನಾಗಿದ್ದೆ ಎಂದು ಅವರು ಹೇಳಿದ್ದಾರೆ. ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದೇನೆ ಎಂದು ಸಚಿವರು ತಿಳಿಸಿದರು.

“3 ವಿಮಾನಗಳನ್ನು ಗುರಿಯಾಗಿಸಿಕೊಂಡು ಬಾಂಬ್ ಬೆದರಿಕೆಗಳನ್ನು ನೀಡಿದ ಅಪ್ರಾಪ್ತನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಅಡ್ಡಿಪಡಿಸಿದ ಇತರ ಎಲ್ಲರನ್ನು ಗುರುತಿಸಿ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು” ಎಂದು  ಭರವಸೆ ನೀಡಿದ ಸಚಿವರು ಪ್ರಯಾಣಿಕರ ಸುರಕ್ಷತೆಯೇ ನಮ್ಮ ಆದ್ಯತೆ ಎಂದು  ಹೇಳಿದ್ದಾರೆ.

“ಪ್ರಯಾಣಿಕರು ಮತ್ತು ಉದ್ಯಮ ಪಾಲುದಾರರು ಸೇರಿದಂತೆ ಎಲ್ಲಾ ಮಧ್ಯಸ್ಥಗಾರರಿಗೆ ಆ ಕೃತ್ಯದಿಂದ ರಕ್ಷಿಸಲು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ನಾನು ಭರವಸೆ ನೀಡುತ್ತೇನೆ. ಭದ್ರತಾ ಕ್ರಮಗಳನ್ನು ಹೆಚ್ಚಿಸಲು ಮತ್ತು ಜಾಗತಿಕ ಭದ್ರತಾ ಏಜೆನ್ಸಿಗಳೊಂದಿಗೆ ತಡೆರಹಿತ ಸಮನ್ವಯವನ್ನು ಕಾಪಾಡಿಕೊಳ್ಳಲು ನಾವು ಬದ್ಧರಾಗಿದ್ದೇವೆ” ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.

ಮೂರು ದಿನಗಳಲ್ಲಿ 19 ವಿಮಾನಗಳಿಗೆ ಬಾಂಬ್ ಬೆದರಿಕೆ ಬಂದಿವೆ. 24 ಗಂಟೆಗಳಿಗಿಂತ ಕಡಿಮೆ ಅವಧಿಯಲ್ಲಿ 9 ವಿಮಾನಗಳಿಗೆ ಬಾಂಬ್ ಬೆದರಿಕೆ ಬಂದಿತ್ತು. ಅಂದಹಾಗೆ ಇವೆಲ್ಲವೂ ಹುಸಿ ಬಾಂಬ್ ಕರೆಗಳಾಗಿದ್ದವು.

ಇದನ್ನೂ ಓದಿ: ಸಾಮಾಜಿಕ ಮಾಧ್ಯಮದಲ್ಲಿ ಸ್ಪೈಸ್‌ಜೆಟ್‌ನ ಎರಡು ವಿಮಾನಗಳಿಗೆ ಬಾಂಬ್ ಬೆದರಿಕೆ

ಬುಧವಾರ ನಾಲ್ಕು ಇಂಡಿಗೋ ವಿಮಾನಗಳು, ಎರಡು ಸ್ಪೈಸ್‌ಜೆಟ್ ವಿಮಾನಗಳು ಮತ್ತು ಆಕಾಶ ಏರ್‌ನ ಒಂದು ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿತ್ತು. ವಿವಿಧ ವಿಮಾನಯಾನ ಸಂಸ್ಥೆಗಳಿಗೆ ಹಲವು ಹುಸಿ ಬೆದರಿಕೆ ಸಂದೇಶಗಳ ವಿಷಯವು ಬುಧವಾರ ಸಂಸದೀಯ ಸಮಿತಿಯ ಮುಂದೆ ಬಂದಿತು.

ಜೆಡಿಯು ಸಂಸದ ಸಂಜಯ್ ಝಾ ನೇತೃತ್ವದ ಸಾರಿಗೆ, ಪ್ರವಾಸೋದ್ಯಮ ಮತ್ತು ಸಂಸ್ಕೃತಿಯ ಸ್ಥಾಯಿ ಸಮಿತಿಯ ಸಭೆಯಲ್ಲಿ ನಾಗರಿಕ ವಿಮಾನಯಾನ ಕಾರ್ಯದರ್ಶಿ ವುಮ್ಲುನ್ಮಾಂಗ್ ವುಲ್ನಮ್ ಅವರು ತನಿಖಾಧಿಕಾರಿಗಳು ಕೆಲವು ಮಾಹಿತಿಯನ್ನು ಸಂಗ್ರಹಿಸಿ ಕ್ರಮ ತೆಗೆದುಕೊಳ್ಳುತ್ತಿದ್ದಾರೆ ಎಂದು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:55 pm, Wed, 16 October 24

ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ