ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣ; ಸರ್ಕಾರ ಕ್ರಮ ಕೈಗೊಳ್ಳದಿದ್ದರೆ ನಾವು ಮಾಡುತ್ತೇವೆ: ಸುಪ್ರೀಂಕೋರ್ಟ್

ಇಬ್ಬರು ಮಹಿಳೆಯರನ್ನು ಜನರ ಗುಂಪೊಂದು ಬೆತ್ತಲೆಯಾಗಿ ಮೆರವಣಿಗೆ ಮಾಡಿ ಕಿರುಕುಳ ನೀಡಿತು. ಆ ನಂತರ ಗದ್ದೆಗೆ ಎಳೆದೊಯ್ದು, ಅಲ್ಲಿ ಅವರನ್ನು ಸಾಮೂಹಿಕ ಅತ್ಯಾಚಾರವೆಸಗಲಾಯಿತು. ಈ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದ್ದಂತೆ ಆಕ್ರೋಶ ವ್ಯಕ್ತವಾಗಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯ ಹೆಚ್ಚಿದೆ.

ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣ; ಸರ್ಕಾರ ಕ್ರಮ ಕೈಗೊಳ್ಳದಿದ್ದರೆ ನಾವು ಮಾಡುತ್ತೇವೆ: ಸುಪ್ರೀಂಕೋರ್ಟ್
ಸುಪ್ರೀಂಕೋರ್ಟ್
Follow us
|

Updated on:Jul 20, 2023 | 2:26 PM

ದೆಹಲಿ ಜುಲೈ 20 : ಮಣಿಪುರದಲ್ಲಿ (Manipur) ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ನಡೆಸಿರುವ ವಿಡಿಯೊ ದುಗುಡಗೊಳಿಸುವಂತದ್ದು ಎಂದು ಖಂಡಿಸಿರುವ ಸುಪ್ರೀಂಕೋರ್ಟ್ (Supreme Court), ಈ ದೃಶ್ಯಗಳು “ಸಾಂವಿಧಾನಿಕ ವೈಫಲ್ಯ” ವನ್ನು ತೋರಿಸಿದೆ ಎಂದಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ (DY Chandrachud) ಸರ್ಕಾರ ಕ್ರಮ ಕೈಗೊಳ್ಳುವಂತೆ ಮತ್ತು ಈ ಪ್ರದೇಶದಲ್ಲಿ ಮಹಿಳೆಯರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ತೆಗೆದುಕೊಳ್ಳುತ್ತಿರುವ ಕ್ರಮಗಳ ಬಗ್ಗೆ ನ್ಯಾಯಾಲಯಕ್ಕೆ ತಿಳಿಸುವಂತೆ ಹೇಳಿದ್ದಾರೆ. ಸರ್ಕಾರ ಕ್ರಮಕೈಗೊಳ್ಳದಿದ್ದರೆ, ಜುಲೈ 28 ರಂದು ನ್ಯಾಯಾಲಯವು ಪ್ರಕರಣವನ್ನು ಕೈಗೆತ್ತಿಕೊಳ್ಳಲಿದೆ ಎಂದು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಮಣಿಪುರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ನಿನ್ನೆ ಶೇರ್ ಮಾಡಿದ ವೀಡಿಯೊಗಳನ್ನು ನೋಡಿ ಬಗ್ಗೆ ನಾವು ತೀವ್ರವಾಗಿ ವಿಚಲಿತರಾಗಿದ್ದೇವೆ. ನಾವು ನಮ್ಮ ತೀವ್ರ ಕಳವಳವನ್ನು ವ್ಯಕ್ತಪಡಿಸುತ್ತಿದ್ದೇವೆ. ಇದು ಸರ್ಕಾರ ಕ್ರಮಕೈಗೊಳ್ಳುವ ಸಮಯವಾಗಿದೆ. ಇದು ಸ್ವೀಕಾರಾರ್ಹವಲ್ಲ ಎಂದು ಡಿವೈ ಚಂದ್ರಚೂಡ್ ಹೇಳಿದ್ದಾರೆ. “ಸರ್ಕಾರವು ಕ್ರಮಕೈಗೊಳ್ಳದಿದ್ದರೆ, ನಾವು ಮಾಡುತ್ತೇವೆ. ಅಂತಹ ಹಿಂಸಾಚಾರವೆಸಗಿದ ದುಷ್ಕರ್ಮಿಗಳನ್ನು ಬಂಧಿಸಲು ಸರ್ಕಾರ ತೆಗೆದುಕೊಂಡ ಕ್ರಮಗಳ ಬಗ್ಗೆ ನ್ಯಾಯಾಲಯಕ್ಕೆ ತಿಳಿಸಬೇಕು ಎಂದು ನಾವು ಅಭಿಪ್ರಾಯಪಟ್ಟಿದ್ದೇವೆ. ಮಾಧ್ಯಮಗಳು ಮತ್ತು ದೃಶ್ಯಗಳಲ್ಲಿ ಬಿಂಬಿಸಿರುವುದು ಸಾಂವಿಧಾನಿಕ ಉಲ್ಲಂಘನೆಯನ್ನು ತೋರಿಸುತ್ತದೆ ಎಂದು ಮುಖ್ಯ ನ್ಯಾಯಮೂರ್ತಿ ಹೇಳಿದರು.

ಇಬ್ಬರು ಮಹಿಳೆಯರನ್ನು ಜನರ ಗುಂಪೊಂದು ಬೆತ್ತಲೆಯಾಗಿ ಮೆರವಣಿಗೆ ಮಾಡಿ ಕಿರುಕುಳ ನೀಡಿತು. ಆ ನಂತರ ಗದ್ದೆಗೆ ಎಳೆದೊಯ್ದು, ಅಲ್ಲಿ ಅವರನ್ನು ಸಾಮೂಹಿಕ ಅತ್ಯಾಚಾರವೆಸಗಲಾಯಿತು. ಈ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದ್ದಂತೆ ಆಕ್ರೋಶ ವ್ಯಕ್ತವಾಗಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯ ಹೆಚ್ಚಿದೆ.

ಸ್ಥಳೀಯ ಬುಡಕಟ್ಟು ನಾಯಕರ ವೇದಿಕೆ (ITLF) ಹೇಳಿಕೆಯ ಪ್ರಕಾರ, ರಾಜ್ಯದ ರಾಜಧಾನಿ ಇಂಫಾಲ್‌ನಿಂದ ಸುಮಾರು 35 ಕಿಮೀ ದೂರದಲ್ಲಿರುವ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೇ 4 ರಂದು ಈ ಘಟನೆ ನಡೆದಿದೆ.

ಇದನ್ನೂ ಓದಿ: Manipur Violence: ತಪ್ಪಿತಸ್ಥರನ್ನು ಬಿಡುವ ಪ್ರಶ್ನೆಯೇ ಇಲ್ಲ -ಪ್ರಧಾನಿ ನರೇಂದ್ರ ಮೋದಿ

ದಿಗಿಲುಗೊಳಿಸುವ ಈ ವಿಡಿಯೊ ಅಂತರ್ಜಾಲದಲ್ಲಿ ಕಾಣಿಸಿಕೊಂಡ ಒಂದು ದಿನದ ನಂತರ ಮಣಿಪುರ ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ. ಹೆರಾದಾಸ್ (32) ಎಂಬಾತನನ್ನು ತೌಬಲ್ ಜಿಲ್ಲೆಯಿಂದ ಬಂಧಿಸಲಾಗಿದೆ. ವಿಡಿಯೊದಲ್ಲಿ ಹಸಿರು ಟೀ ಶರ್ಟ್ ಧರಿಸಿದ್ದ ವ್ಯಕ್ತಿಯೇ ಈತ.

ಮೇ 3 ರಂದು ಮಣಿಪುರದಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಸ್ಥಾನಮಾನಕ್ಕಾಗಿ ಮೈತಿ ಸಮುದಾಯದ ಬೇಡಿಕೆಯನ್ನು ಪ್ರತಿಭಟಿಸಲು ‘ಬುಡಕಟ್ಟು ಒಗ್ಗಟ್ಟಿನ ಮೆರವಣಿಗೆ’ಯ ಸಂದರ್ಭದಲ್ಲಿ ಹಿಂಸಾಚಾರ ಭುಗಿಲೆದ್ದಿತು. ಮುಖ್ಯಮಂತ್ರಿ ರಾಜೀನಾಮೆ ನೀಡಬೇಕು ಎಂದು ಕುಕಿ ಬುಡಕಟ್ಟು ಜನಾಂಗದವರು ಒತ್ತಾಯಿಸಿದ್ದಾರೆ. ಜನಾಂಗೀಯ ಹಿಂಸಾಚಾರದಲ್ಲಿ 120 ಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದಾರೆ. ಅದೇ ವೇಳ ಸಾವಿರಾರು ಜನರು ಆಂತರಿಕವಾಗಿ ಸ್ಥಳಾಂತರಗೊಂಡಿದ್ದು, ಈಗ ಪರಿಹಾರ ಶಿಬಿರಗಳಲ್ಲಿ ವಾಸಿಸುತ್ತಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:23 pm, Thu, 20 July 23