ಮೋದಿ ಸರ್​ನೇಮ್ ಬಗ್ಗೆ ಹೇಳಿದ್ದು ವ್ಯಂಗ್ಯವಾಗಿತ್ತು: ನ್ಯಾಯಾಲಯದಲ್ಲಿ ರಾಹುಲ್ ಗಾಂಧಿ ಹೇಳಿಕೆ

Rahul Gandhi: "ನಾನು ಯಾವುದೇ ಸಮುದಾಯವನ್ನು ಗುರಿಯಾಗಿಸಿ ಈ ರೀತಿ ಹೇಳಿಲ್ಲ. ಚುನಾವಣೆಯ ಸಮಯದಲ್ಲಿ ನಾನು ವ್ಯಂಗ್ಯವಾಡಿದ್ದೇನೆ. ಈ ಬಗ್ಗೆ ನನಗೆ ಹೆಚ್ಚು ನೆನಪಿಲ್ಲ" ಎಂದು ರಾಹುಲ್ ಗಾಂಧಿ ಹೇಳಿದರು.

ಮೋದಿ ಸರ್​ನೇಮ್ ಬಗ್ಗೆ ಹೇಳಿದ್ದು ವ್ಯಂಗ್ಯವಾಗಿತ್ತು: ನ್ಯಾಯಾಲಯದಲ್ಲಿ ರಾಹುಲ್ ಗಾಂಧಿ ಹೇಳಿಕೆ
ರಾಹುಲ್ ಗಾಂಧಿ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Jun 24, 2021 | 2:55 PM

ಸೂರತ್: ಮಾನಹಾನಿ ಪ್ರಕರಣದ ವಿಚಾರಣೆ ವೇಳೆ ಗುಜರಾತ್‌ನ ನ್ಯಾಯಾಲಯದಲ್ಲಿ ಹೇಳಿಕೆ ದಾಖಲಿಸಿದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು, 2019 ರಲ್ಲಿ ನಡೆದ ಚುನಾವಣಾ ಪ್ರಚಾರದ ಸಂದರ್ಭದಲ್ಲಿ “ಮೋದಿ ಸರ್​ನೇಮ್ ” ಕುರಿತ ಹೇಳಿಕೆ “ವ್ಯಂಗ್ಯ”ವಾಗಿತ್ತು ಎಂದಿದ್ದಾರೆ. ಗುಜರಾತ್ ಬಿಜೆಪಿ ಶಾಸಕರೊಬ್ಬರು ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಯಲ್ಲಿ ತಮ್ಮನ್ನು ಸಮರ್ಥಿಸಿಕೊಳ್ಳಲು ರಾಹುಲ್ ಗಾಂಧಿ ಸೂರತ್‌ನ ಮ್ಯಾಜಿಸ್ಟೀರಿಯಲ್ ನ್ಯಾಯಾಲಯಕ್ಕೆ ಗುರುವಾರ ಹಾಜರಾಗಿದ್ದಾರೆ.

“ನಾನು ಯಾವುದೇ ಸಮುದಾಯವನ್ನು ಗುರಿಯಾಗಿಸಿ ಈ ರೀತಿ ಹೇಳಿಲ್ಲ. ಚುನಾವಣೆಯ ಸಮಯದಲ್ಲಿ ನಾನು ವ್ಯಂಗ್ಯವಾಡಿದ್ದೇನೆ. ಈ ಬಗ್ಗೆ ನನಗೆ ಹೆಚ್ಚು ನೆನಪಿಲ್ಲ” ಎಂದು ರಾಹುಲ್ ಗಾಂಧಿ ಹೇಳಿದರು.

ಏನಿದು ಪ್ರಕರಣ? 2019 ರ ಏಪ್ರಿಲ್ 13 ರಂದು ಕರ್ನಾಟಕದ ಕೋಲಾರ್‌ನಲ್ಲಿ ನಡೆದ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ಅವರು, “ನೀರವ್ ಮೋದಿ, ಲಲಿತ್ ಮೋದಿ, ನರೇಂದ್ರ ಮೋದಿ … ಅವರೆಲ್ಲರೂ ಮೋದಿ ಸರ್​ನೇಮ್  ಹೊಂದಿದ್ದಾರೆ. ಎಲ್ಲ ಕಳ್ಳರಿಗೂ ಹೇಗೆ ಮೋದಿ ಸರ್​ನೇಮ್ ಬಂತು? ಎಂದಿದ್ದರು.ಈ ಹೇಳಿಕೆ ನೀಡಿದಾಗ ರಾಹುಲ್ ಗಾಂಧಿ ಕಾಂಗ್ರೆಸ್ ಅಧ್ಯಕ್ಷರಾಗಿದ್ದರು.

ಮಾನಹಾನಿಗೆ ಸಂಬಂಧಿಸಿದ ಐಪಿಸಿ ಸೆಕ್ಷನ್ 499 ಮತ್ತು 500 ರ ಅಡಿಯಲ್ಲಿ ಬಿಜೆಪಿ ಶಾಸಕ ಪೂರ್ಣೇಶ್ ಮೋದಿ ಅವರು 2019 ರ ಏಪ್ರಿಲ್‌ನಲ್ಲಿ ರಾಹುಲ್ ಗಾಂಧಿ ವಿರುದ್ಧ ದೂರು ದಾಖಲಿಸಿದ್ದರು. ” ಎಲ್ಲ ಕಳ್ಳರಿಗೂ ಹೇಗೆ ಮೋದಿ ಸರ್ನೇಮ್ ಬಂತು?” ಎಂದು ಹೇಳುವ ಮೂಲಕ ರಾಹುಲ್ ಗಾಂಧಿ ಇಡೀ ಮೋದಿ ಸಮುದಾಯವನ್ನು ದೂಷಿಸಿದ್ದಾರೆ ಎಂದು ಸೂರತ್-ಪಶ್ಚಿಮ ಕ್ಷೇತ್ರದ ಶಾಸಕರು ತಮ್ಮ ದೂರಿನಲ್ಲಿ ಆರೋಪಿಸಿದ್ದರು. ನ್ಯಾಯಾಲಯವು ಮೊಕದ್ದಮೆಯನ್ನು ಒಪ್ಪಿಕೊಂಡಾಗ, ವಯನಾಡ್ ಮೂಲದ ಲೋಕಸಭಾ ಸದಸ್ಯರ ವಿರುದ್ಧ ಕ್ರಿಮಿನಲ್ ಮಾನಹಾನಿ ಪ್ರಕರಣವಿದೆ ಎಂದು ಅಭಿಪ್ರಾಯಪಟ್ಟಿದೆ.

ಇದಕ್ಕೂ ಮುನ್ನ ರಾಹುಲ್ ಗಾಂಧಿ ಅವರು 2019 ರ ಅಕ್ಟೋಬರ್‌ನಲ್ಲಿ ನ್ಯಾಯಾಲಯಕ್ಕೆ ಹಾಜರಾಗಿ ತಪ್ಪಿತಸ್ಥರಲ್ಲ ಒಪ್ಪಿಕೊಂಡಿದ್ದರು.

ಒಂದು ವಾರದ ಹಿಂದೆ, ಸೂರತ್‌ನ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಎ.ಎನ್. ಡೇವ್ ಅವರು ಪ್ರಕರಣದಲ್ಲಿ ತಮ್ಮ ಅಂತಿಮ ಹೇಳಿಕೆಯನ್ನು ದಾಖಲಿಸಲು ಜೂನ್ 24 ರಂದು ಗಾಂಧಿಯನ್ನು ನ್ಯಾಯಾಲಯಕ್ಕೆ ಹಾಜರಾಗುವಂತೆ ನಿರ್ದೇಶಿಸಿದ್ದರು.

ಇದರ ಬೆನ್ನಲ್ಲೇ, ರಾಹುಲ್ ಗಾಂಧಿ ಗುರುವಾರ ನ್ಯಾಯಾಲಯಕ್ಕೆ ಹಾಜರಾಗಿದ್ದು ಯಾವುದೇ ಸಮುದಾಯವನ್ನು ಗುರಿಯಾಗಿಸಿಕೊಂಡು ಆ ಮಾತು ಹೇಳಿಲ್ಲ ಎಂದು ಸ್ಪಷ್ಟಪಡಿಸಿದರು.

ಪ್ರಸ್ತುತ ಪ್ರಕರಣದ ವಿಚಾರಣೆಯನ್ನು ಜುಲೈ 12ಕ್ಕೆ ಮುಂದೂಡಲಾಗಿದೆ .

ಇದನ್ನೂ ಓದಿ: ಮಾನಹಾನಿ ಪ್ರಕರಣ: ಹೇಳಿಕೆ ದಾಖಲಿಸಲು ಗುಜರಾತಿನ ನ್ಯಾಯಾಲಯಕ್ಕೆ  ಹಾಜರಾದ ರಾಹುಲ್ ಗಾಂಧಿ

ಇದನ್ನೂ ಓದಿ: Rahul Gandhi tiger cub adoption: ಹಂಪಿಯಲ್ಲಿ ಹುಲಿ ಮರಿ ದತ್ತು ಪಡೆದ ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ

(Defamation case about Modi surname remark It was sarcasm Congress leader Rahul Gandhi tells court)

‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು