ಸೂರತ್: ಮಾನಹಾನಿ ಪ್ರಕರಣದ ವಿಚಾರಣೆ ವೇಳೆ ಗುಜರಾತ್‌ನ ನ್ಯಾಯಾಲಯದಲ್ಲಿ ಹೇಳಿಕೆ ದಾಖಲಿಸಿದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು, 2019 ರಲ್ಲಿ ನಡೆದ ಚುನಾವಣಾ ಪ್ರಚಾರದ ಸಂದರ್ಭದಲ್ಲಿ “ಮೋದಿ ಸರ್ನೇಮ್ ” ಕುರಿತ ಹೇಳಿಕೆ “ವ್ಯಂಗ್ಯ”ವಾಗಿತ್ತು ಎಂದಿದ್ದಾರೆ. ಗುಜರಾತ್ ಬಿಜೆಪಿ ಶಾಸಕರೊಬ್ಬರು ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಯಲ್ಲಿ ತಮ್ಮನ್ನು ಸಮರ್ಥಿಸಿಕೊಳ್ಳಲು ರಾಹುಲ್ ಗಾಂಧಿ ಸೂರತ್‌ನ ಮ್ಯಾಜಿಸ್ಟೀರಿಯಲ್ ನ್ಯಾಯಾಲಯಕ್ಕೆ ಗುರುವಾರ ಹಾಜರಾಗಿದ್ದಾರೆ.
“ನಾನು ಯಾವುದೇ ಸಮುದಾಯವನ್ನು ಗುರಿಯಾಗಿಸಿ ಈ ರೀತಿ ಹೇಳಿಲ್ಲ. ಚುನಾವಣೆಯ ಸಮಯದಲ್ಲಿ ನಾನು ವ್ಯಂಗ್ಯವಾಡಿದ್ದೇನೆ. ಈ ಬಗ್ಗೆ ನನಗೆ ಹೆಚ್ಚು ನೆನಪಿಲ್ಲ” ಎಂದು ರಾಹುಲ್ ಗಾಂಧಿ ಹೇಳಿದರು.
ಏನಿದು ಪ್ರಕರಣ?
2019 ರ ಏಪ್ರಿಲ್ 13 ರಂದು ಕರ್ನಾಟಕದ ಕೋಲಾರ್‌ನಲ್ಲಿ ನಡೆದ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ಅವರು, “ನೀರವ್ ಮೋದಿ, ಲಲಿತ್ ಮೋದಿ, ನರೇಂದ್ರ ಮೋದಿ … ಅವರೆಲ್ಲರೂ ಮೋದಿ ಸರ್ನೇಮ್ ಹೊಂದಿದ್ದಾರೆ. ಎಲ್ಲ ಕಳ್ಳರಿಗೂ ಹೇಗೆ ಮೋದಿ ಸರ್ನೇಮ್ ಬಂತು? ಎಂದಿದ್ದರು.ಈ ಹೇಳಿಕೆ ನೀಡಿದಾಗ ರಾಹುಲ್ ಗಾಂಧಿ ಕಾಂಗ್ರೆಸ್ ಅಧ್ಯಕ್ಷರಾಗಿದ್ದರು.
ಮಾನಹಾನಿಗೆ ಸಂಬಂಧಿಸಿದ ಐಪಿಸಿ ಸೆಕ್ಷನ್ 499 ಮತ್ತು 500 ರ ಅಡಿಯಲ್ಲಿ ಬಿಜೆಪಿ ಶಾಸಕ ಪೂರ್ಣೇಶ್ ಮೋದಿ ಅವರು 2019 ರ ಏಪ್ರಿಲ್‌ನಲ್ಲಿ ರಾಹುಲ್ ಗಾಂಧಿ ವಿರುದ್ಧ ದೂರು ದಾಖಲಿಸಿದ್ದರು. ” ಎಲ್ಲ ಕಳ್ಳರಿಗೂ ಹೇಗೆ ಮೋದಿ ಸರ್ನೇಮ್ ಬಂತು?” ಎಂದು ಹೇಳುವ ಮೂಲಕ ರಾಹುಲ್ ಗಾಂಧಿ ಇಡೀ ಮೋದಿ ಸಮುದಾಯವನ್ನು ದೂಷಿಸಿದ್ದಾರೆ ಎಂದು ಸೂರತ್-ಪಶ್ಚಿಮ ಕ್ಷೇತ್ರದ ಶಾಸಕರು ತಮ್ಮ ದೂರಿನಲ್ಲಿ ಆರೋಪಿಸಿದ್ದರು.
ನ್ಯಾಯಾಲಯವು ಮೊಕದ್ದಮೆಯನ್ನು ಒಪ್ಪಿಕೊಂಡಾಗ, ವಯನಾಡ್ ಮೂಲದ ಲೋಕಸಭಾ ಸದಸ್ಯರ ವಿರುದ್ಧ ಕ್ರಿಮಿನಲ್ ಮಾನಹಾನಿ ಪ್ರಕರಣವಿದೆ ಎಂದು ಅಭಿಪ್ರಾಯಪಟ್ಟಿದೆ.
Gujarat: Congress leader Rahul Gandhi arrives at Surat court to defend himself in a criminal defamation case over the ‘Modi surname’ remark pic.twitter.com/odl2eynsVT
— ANI (@ANI) June 24, 2021
ಇದಕ್ಕೂ ಮುನ್ನ ರಾಹುಲ್ ಗಾಂಧಿ ಅವರು 2019 ರ ಅಕ್ಟೋಬರ್‌ನಲ್ಲಿ ನ್ಯಾಯಾಲಯಕ್ಕೆ ಹಾಜರಾಗಿ ತಪ್ಪಿತಸ್ಥರಲ್ಲ ಒಪ್ಪಿಕೊಂಡಿದ್ದರು.
ಒಂದು ವಾರದ ಹಿಂದೆ, ಸೂರತ್‌ನ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಎ.ಎನ್. ಡೇವ್ ಅವರು ಪ್ರಕರಣದಲ್ಲಿ ತಮ್ಮ ಅಂತಿಮ ಹೇಳಿಕೆಯನ್ನು ದಾಖಲಿಸಲು ಜೂನ್ 24 ರಂದು ಗಾಂಧಿಯನ್ನು ನ್ಯಾಯಾಲಯಕ್ಕೆ ಹಾಜರಾಗುವಂತೆ ನಿರ್ದೇಶಿಸಿದ್ದರು.
ಇದರ ಬೆನ್ನಲ್ಲೇ, ರಾಹುಲ್ ಗಾಂಧಿ ಗುರುವಾರ ನ್ಯಾಯಾಲಯಕ್ಕೆ ಹಾಜರಾಗಿದ್ದು ಯಾವುದೇ ಸಮುದಾಯವನ್ನು ಗುರಿಯಾಗಿಸಿಕೊಂಡು ಆ ಮಾತು ಹೇಳಿಲ್ಲ ಎಂದು ಸ್ಪಷ್ಟಪಡಿಸಿದರು.
ಪ್ರಸ್ತುತ ಪ್ರಕರಣದ ವಿಚಾರಣೆಯನ್ನು ಜುಲೈ 12ಕ್ಕೆ ಮುಂದೂಡಲಾಗಿದೆ .
ಇದನ್ನೂ ಓದಿ: ಮಾನಹಾನಿ ಪ್ರಕರಣ: ಹೇಳಿಕೆ ದಾಖಲಿಸಲು ಗುಜರಾತಿನ ನ್ಯಾಯಾಲಯಕ್ಕೆ ಹಾಜರಾದ ರಾಹುಲ್ ಗಾಂಧಿ
ಇದನ್ನೂ ಓದಿ: Rahul Gandhi tiger cub adoption: ಹಂಪಿಯಲ್ಲಿ ಹುಲಿ ಮರಿ ದತ್ತು ಪಡೆದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ
(Defamation case about Modi surname remark It was sarcasm Congress leader Rahul Gandhi tells court)