AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾನನಷ್ಟ ಪ್ರಕರಣ: ಶಿಕ್ಷೆಗೆ ತಡೆ ಕೋರಿ ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ನ್ಯಾಯಾಲಯ

ಮಾನನಷ್ಟ ಪ್ರಕರಣದಲ್ಲಿ ಶಿಕ್ಷೆಗೆ ತಡೆ ಕೋರಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿಯನ್ನು ಸೂರತ್ ಕೋರ್ಟ್ ವಜಾಗೊಳಿಸಿದೆ.

ಮಾನನಷ್ಟ ಪ್ರಕರಣ: ಶಿಕ್ಷೆಗೆ ತಡೆ ಕೋರಿ ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ನ್ಯಾಯಾಲಯ
ರಾಹುಲ್ ಗಾಂಧಿ
ಅಕ್ಷಯ್​ ಪಲ್ಲಮಜಲು​​
|

Updated on:Apr 20, 2023 | 12:06 PM

Share

ಸೂರತ್: ಮೋದಿ ಉಪನಾಮ ಟೀಕೆಗೆ ಸಂಬಂಧಿಸಿದಂತೆ 2019ರ ಮಾನನಷ್ಟ ಪ್ರಕರಣದಲ್ಲಿ ಶಿಕ್ಷೆಗೆ ತಡೆ ಕೋರಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಸಲ್ಲಿಸಿದ್ದ ಅರ್ಜಿಯನ್ನು ಸೂರತ್ ಕೋರ್ಟ್ ವಜಾಗೊಳಿಸಿದೆ. ಇದರ ಜತೆಗೆ ರಾಹುಲ್ ಗಾಂಧಿ ಅವರನ್ನು ಸಂಸತ್ತಿನ ಸದಸ್ಯರನ್ನಾಗಿ ಅರ್ಹಗೊಳಿಸಲು ಸಾಧ್ಯವಿಲ್ಲ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿರುವ ನ್ಯಾಯಾಲಯದ ಆದೇಶದ ವಿರುದ್ಧ ಸಲ್ಲಿಸಿರುವ ಮೇಲ್ಮನವಿ ಬಾಕಿ ಇರುವವರೆಗೆ ತನ್ನ ದೋಷಾರೋಪಣೆಯನ್ನು ತಡೆಹಿಡಿಯಬೇಕು ಎಂದು ರಾಹುಲ್ ಗಾಂಧಿ ಮನವಿ ಮಾಡಿದ್ದರು.

ಸಂಸದ ಸ್ಥಾನದಿಂದ ಅನರ್ಹವಾದ ನಂತರ ವಿಚಾರಣಾ ನ್ಯಾಯಾಲಯವು ತನ್ನನ್ನು ಸರಿಯಾಗಿ ನಡೆಸಿಕೊಂಡಿಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದರು. ಬಿಜೆಪಿ ಶಾಸಕ ಪೂರ್ಣೇಶ್ ಮೋದಿ ಸಲ್ಲಿಸಿದ್ದ ಪ್ರಕರಣದಲ್ಲಿ ಸೂರತ್‌ನ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದ ನಂತರ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಯಿತು.

ಏಪ್ರಿಲ್ 3 ರಂದು, ರಾಹುಲ್ ಗಾಂಧಿಯವರು ಮ್ಯಾಜಿಸ್ಟ್ರೇಟ್ ತೀರ್ಪಿನ ವಿರುದ್ಧ ಸೆಷನ್ಸ್ ನ್ಯಾಯಾಲಯಕ್ಕೆ ತಮ್ಮ ಮನವಿಯನ್ನು ಸಲ್ಲಿಸಿದರು. ನಂತರ ಅವರ ಮನವಿ ಇತ್ಯರ್ಥವಾಗುವವರೆಗೆ ಅವರಿಗೆ ಜಾಮೀನು ನೀಡಲಾಯಿತು. ನನ್ನ ಅನರ್ಹತೆಯು ಸರಿಪಡಿಸಲಾಗದ ನಷ್ಟ ಮತ್ತು ಬದಲಾಯಿಸಲಾಗದ ಗಾಯ ಎಂದು ರಾಹುಲ್ ಗಾಂಧಿಯವರು ಕಳೆದ ಗುರುವಾರ ಸೆಷನ್ಸ್ ನ್ಯಾಯಾಲಯಕ್ಕೆ ತಿಳಿಸಿದರು.

ದೋಷಾರೋಪಣೆ ಮತ್ತು ಎರಡು ವರ್ಷಗಳ ಜೈಲು ಶಿಕ್ಷೆಯಿಂದ ರಾಹುಲ್ ಗಾಂಧಿ ಎಂಟು ವರ್ಷಗಳ ಕಾಲ ಚುನಾವಣೆಯಲ್ಲಿ ಸ್ಪರ್ಧಿಸಲು ಅನರ್ಹರಾಗುತ್ತಾರೆ. ಉನ್ನತ ನ್ಯಾಯಾಲಯವು ಅವರ ಅಪರಾಧವನ್ನು ರದ್ದುಗೊಳಿಸಿದರೆ ಅಥವಾ ಅವರು ಶಿಕ್ಷೆಯನ್ನು ಎರಡು ವರ್ಷಗಳಿಗಿಂತಲೂ ಕಡಿಮೆಗೊಳಿಸಿದರೆ ಮತ್ತೆ ಅರ್ಹತೆಯನ್ನು ಪಡೆಯಬಹುದು.

ಇದನ್ನೂ ಓದಿ: Rahul Gandhi: ಸರ್ಕಾರಿ ನಿವಾಸ ಖಾಲಿ ಮಾಡಿದ ರಾಹುಲ್ ಗಾಂಧಿ

2019 ರ ಚುನಾವಣೆಗೆ ಪೂರ್ವಭಾವಿಯಾಗಿ ಕೋಲಾರದಲ್ಲಿ ಮಾಡಿದ ಭಾಷಣದಲ್ಲಿ ಮೋದಿ ಉಪನಾಮದ ಹೇಳಿಕೆ ಮಾನಹಾನಿಕರವಲ್ಲ ಎಂದು ರಾಹುಲ್ ಗಾಂಧಿ ವಾದಿಸಿದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ನೀಡಿದ ಭಾರತೀಯ ಜನತಾ ಪಕ್ಷದ (ಬಿಜೆಪಿ) ಶಾಸಕ ಪೂರ್ಣೇಶ್ ಮೋದಿ ಅವರು ರಾಹುಲ್ ಗಾಂಧಿ ಅವರ ಈ ಹೇಳಿಕೆ “ಬಾಲಿಶ ದುರಹಂಕಾರದ ಕೊಳಕು ಪ್ರದರ್ಶನ” ಎಂದು ಹೇಳಿದರು.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:16 am, Thu, 20 April 23

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು