Defamation case: ಮಾನನಷ್ಟ ಮೊಕದ್ದಮೆ: ರಾಹುಲ್ ಗಾಂಧಿಗೆ ಮಧ್ಯಂತರ ರಕ್ಷಣೆ ನೀಡಲು ಗುಜರಾತ್ ಹೈಕೋರ್ಟ್ ನಕಾರ

Rahul Gandhi: ಮೋದಿ ಸರ್​​ನೇಮ್ ಹೇಳಿಕೆಗೆ ಸಂಬಂಧಿಸಿದಂತೆ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿತಮ್ಮ ಶಿಕ್ಷೆಗೆ ತಡೆಯಾಜ್ಞೆ ಕೋರಿ ಸೂರತ್ ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಗುಜರಾತ್ ಹೈಕೋರ್ಟ್ ನಲ್ಲಿ ರಾಹುಲ್ ಗಾಂಧಿ ಮೇಲ್ಮನವಿ ಸಲ್ಲಿಸಿದ್ದರು.

Defamation case: ಮಾನನಷ್ಟ ಮೊಕದ್ದಮೆ: ರಾಹುಲ್ ಗಾಂಧಿಗೆ ಮಧ್ಯಂತರ ರಕ್ಷಣೆ ನೀಡಲು ಗುಜರಾತ್ ಹೈಕೋರ್ಟ್ ನಕಾರ
Follow us
ರಶ್ಮಿ ಕಲ್ಲಕಟ್ಟ
|

Updated on:May 02, 2023 | 5:31 PM

ಮೋದಿ ಸರ್​​ನೇಮ್ (Modi Surname) ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ (Rahul Gandhi) ಮಧ್ಯಂತರ ರಕ್ಷಣೆ ನೀಡಲು ಗುಜರಾತ್ ಹೈಕೋರ್ಟ್ (Gujarat High court) ಮಂಗಳವಾರ ನಿರಾಕರಿಸಿದೆ .2019 ರ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಮೋದಿ ಉಪನಾಮ ಹೇಳಿಕೆಗೆ ಸಂಬಂಧಿಸಿದಂತೆ ಶಿಕ್ಷೆಗೆ ತಡೆ ನೀಡುವಂತೆ ಕೋರಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸಲ್ಲಿಸಿದ ಮನವಿಯನ್ನು ಗುಜರಾತ್ ಹೈಕೋರ್ಟ್ ಮಂಗಳವಾರ ವಿಚಾರಣೆ ನಡೆಸಿತು. ಬೇಸಿಗೆ ರಜೆ ಮುಗಿದ ನಂತರ ಗುಜರಾತ್ ಹೈಕೋರ್ಟ್ ಇದರ ಬಗ್ಗೆ ತೀರ್ಪು ನೀಡಲಿದೆ. 2019 ರ ಮಾನನಷ್ಟ ಪ್ರಕರಣದಲ್ಲಿ ರಾಹುಲ್ ಗಾಂಧಿಯನ್ನು ದೋಷಿ ಎಂದು ಘೋಷಿಸಿದ ಸೂರತ್ ನ್ಯಾಯಾಲಯವು ಎರಡು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿತು. ಈ ದೋಷಾರೋಪಣೆಯ ನಂತರ, ರಾಹುಲ್ ಗಾಂಧಿ ಅವರನ್ನು ಸಂಸತ್ ಸದಸ್ಯತ್ವದಿಂದ ಅನರ್ಹಗೊಳಿಸಲಾಯಿತು.

ಸೂರತ್ ನ್ಯಾಯಾಲಯದ ತೀರ್ಪಿನ ವಿರುದ್ಧ ರಾಹುಲ್ ಗಾಂಧಿ ಗುಜರಾತ್ ಹೈಕೋರ್ಟ್‌ನ ಮೊರೆ ಹೋಗಿದ್ದಾರೆ. ಗುಜರಾತ್ ಹೈಕೋರ್ಟ್ ಮಂಗಳವಾರ ರಾಹುಲ್ ಗಾಂಧಿಗೆ ಮಧ್ಯಂತರ ರಕ್ಷಣೆಯನ್ನು ನಿರಾಕರಿಸಿದೆ. ರಜೆಯ ನಂತರ ಜೂನ್‌ನಲ್ಲಿ ತೀರ್ಪು ನೀಡುವುದಾಗಿ ನ್ಯಾಯಾಲಯ ಹೇಳಿದೆ. ಮೇ 5 ಹೈಕೋರ್ಟ್ ನ ಕೊನೆಯ ಕಾರ್ಯಾಚರಣೆ ದಿನವಾಗಿದ್ದು, ಜೂನ್ 5ರಂದು ಇದು ಮತ್ತೆ ತೆರೆಯಲಿದೆ.

ದೋಷಾರೋಪಣೆಗೆ ತಡೆ ಕೋರಿ ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿಯ ತೀರ್ಪನ್ನು ನ್ಯಾಯಮೂರ್ತಿ ಹೇಮಂತ್ ಪ್ರಚ್ಚಕ್ ಅವರು ಕಾಯ್ದಿರಿಸಿದ್ದಾರೆ.

ಏಪ್ರಿಲ್ 29 ರಂದು ಹಿಂದಿನ ವಿಚಾರಣೆಯ ಸಂದರ್ಭದಲ್ಲಿ, ರಾಹುಲ್ ಗಾಂಧಿಯವರ ವಕೀಲರು ಜಾಮೀನು ನೀಡಬಹುದಾದ, ಗುರುತಿಸಲಾಗದ ಅಪರಾಧಕ್ಕಾಗಿ ಗರಿಷ್ಠ ಎರಡು ವರ್ಷಗಳ ಶಿಕ್ಷೆಯನ್ನು ರಾಹುಲ್ ಅವರ ಲೋಕಸಭಾ ಸ್ಥಾನವನ್ನು ಕಳೆದುಕೊಳ್ಳಬಹುದು ಎಂದು ವಾದಿಸಿದರು. ಆಪಾದಿತ ಅಪರಾಧವು ಸ್ವಭಾವತಃ ಗಂಭೀರವಾಗಿಲ್ಲ ಮತ್ತು ನೈತಿಕ ಕ್ಷೋಭೆಯನ್ನು ಒಳಗೊಂಡಿಲ್ಲ. ರಾಹುಲ್ ಗಾಂಧಿಯವರ ಅನರ್ಹತೆ, ಅವರ ಮತ್ತು ಅವರ ಕ್ಷೇತ್ರದ ಜನರ ಮೇಲೆ ಪರಿಣಾಮ ಬೀರುತ್ತದೆ ಎಂದು ಅವರು ಹೇಳಿದರು.

ಇದನ್ನೂ ಓದಿಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧ ಪ್ರಸ್ತಾಪ; ಸೋನಿಯಾ ಗಾಂಧಿ ವಿರುದ್ಧ ವಿಎಚ್​​​ಪಿ ವಾಗ್ದಾಳಿ

ಬಿಜೆಪಿ ಸಲ್ಲಿಸಿದ ಪ್ರಕರಣದಲ್ಲಿ ಕ್ರಿಮಿನಲ್ ಮಾನನಷ್ಟಕ್ಕಾಗಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 499 ಮತ್ತು 500 ರ ಅಡಿಯಲ್ಲಿ ಅಪರಾಧಿ ಎಂದು ಘೋಷಿಸಿದ ನಂತರ ಸೂರತ್ ನ್ಯಾಯಾಲಯವು ಮಾರ್ಚ್ 23 ರಂದು ಕೇರಳದ ವಯನಾಡ್ ಸಂಸದೀಯ ಕ್ಷೇತ್ರವನ್ನು ಪ್ರತಿನಿಧಿಸುವ ರಾಹುಲ್ ಗಾಂಧಿ ಅವರಿಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿತು.

ಎಪ್ರಿಲ್ 13, 2019 ರಂದು ಕರ್ನಾಟಕದ ಕೋಲಾರದಲ್ಲಿ ಚುನಾವಣಾ ರ್ಯಾಲಿಯಲ್ಲಿ ಎಲ್ಲ ಕಳ್ಳರ ಉಪನಾಮ ಮೋದಿ ಎಂದೇ ಯಾಕಿದೆ? ಎಂಬ ಹೇಳಿಕೆಗೆ ಗಾಂಧಿ ವಿರುದ್ಧ ಶಾಸಕ ಪೂರ್ಣೇಶ್ ಮೋದಿ ಅವರು ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.

ಏಪ್ರಿಲ್ 3 ರಂದು, ಗಾಂಧಿಯವರ ವಕೀಲರು ಎರಡು ಅರ್ಜಿಗಳೊಂದಿಗೆ ಸೆಷನ್ಸ್ ನ್ಯಾಯಾಲಯವನ್ನು ಸಂಪರ್ಕಿಸಿದರು.ನ್ಯಾಯಾಲಯವು ಗಾಂಧಿಗೆ ಜಾಮೀನು ಮಂಜೂರು ಮಾಡಿದರೂ, ಶಿಕ್ಷೆಗೆ ತಡೆಯಾಜ್ಞೆ ನೀಡುವ ಅವರ ಮನವಿಯನ್ನು ಅದು ತಿರಸ್ಕರಿಸಿತು.

ಕಳೆದ ಬುಧವಾರ, ಗುಜರಾತ್ ಹೈಕೋರ್ಟ್‌ನ ನ್ಯಾಯಮೂರ್ತಿ ಗೀತಾ ಗೋಪಿ ಅವರು ಈ ಪ್ರಕರಣವನ್ನು ತುರ್ತು ವಿಚಾರಣೆಗಾಗಿ ತಮ್ಮ ಮುಂದೆ ಹಾಜರುಪಡಿಸಿದ ನಂತರ ವಿಚಾರಣೆಯಿಂದ ಹಿಂದೆ ಸರಿದಿದ್ದರು. ನಂತರ ಪ್ರಕರಣವನ್ನು ನ್ಯಾಯಮೂರ್ತಿ ಪ್ರಚ್ಛಕ್ ಅವರಿಗೆ ವಹಿಸಲಾಯಿತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:58 pm, Tue, 2 May 23