ಜುಲೈ 26ರಂದು ಕೋರ್ಟ್​ಗೆ ಹಾಜರಾಗದಿದ್ದರೆ ರಾಹುಲ್ ಗಾಂಧಿ ವಿರುದ್ಧ ಕಠಿಣ ಕ್ರಮ

|

Updated on: Jul 02, 2024 | 12:48 PM

ಚುನಾವಣಾ ಪ್ರಚಾರದ ವೇಳೆ ಗೃಹ ಸಚಿವ ಅಮಿತ್ ಶಾ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಮಾನನಷ್ಟ ಮೊಕದ್ದಮೆಯಲ್ಲಿ ಜುಲೈ 26 ರಂದು ಉತ್ತರ ಪ್ರದೇಶದ ಸುಲ್ತಾನ್‌ಪುರದ ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚಿಸಲಾಗಿದೆ. ಬಿಜೆಪಿ ನಾಯಕ ವಿಜಯ್ ಮಿಶ್ರಾ ಅವರು 2018 ರಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅಮಿತ್ ಶಾ ವಿರುದ್ಧ ಅವಹೇಳನಕಾರಿ ಹೇಳಿಕೆಗಳಿಗಾಗಿ ರಾಹುಲ್ ಗಾಂಧಿ ವಿರುದ್ಧ ದೂರು ದಾಖಲಿಸಿದ್ದರು.

ಜುಲೈ 26ರಂದು ಕೋರ್ಟ್​ಗೆ ಹಾಜರಾಗದಿದ್ದರೆ ರಾಹುಲ್ ಗಾಂಧಿ ವಿರುದ್ಧ ಕಠಿಣ ಕ್ರಮ
ರಾಹುಲ್ ಗಾಂಧಿ
Follow us on

ಕೇಂದ್ರ ಗೃಹ ಸಚಿವ ಅಮಿತ್ ಶಾ(Amit Shah) ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಿರುದ್ಧ ಸುಲ್ತಾನ್ ಪುರದ ಎಂಪಿಎಂಎಲ್ ಎ ನ್ಯಾಯಾಲಯದಲ್ಲಿ ಪ್ರಕರಣ ನಡೆಯುತ್ತಿದೆ. ಇಂದು ವಿಚಾರಣೆ ಇತ್ತು ಆದರೆ ರಾಹುಲ್ ಗಾಂಧಿ ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ, ಸದನದ ಕಲಾಪ ನಡೆಯುತ್ತಿರುವುದರಿಂದ ರಾಹುಲ್ ಗಾಂಧಿ ಅವರು ನ್ಯಾಯಾಲಯಕ್ಕೆ ಬರಲು ಅಸಮರ್ಥರಾಗಿದ್ದಾರೆ ಎಂದು ನ್ಯಾಯಾಲಯದಲ್ಲಿ ರಾಹುಲ್ ಗಾಂಧಿ ಪರ ವಕೀಲರು ತಿಳಿಸಿದ್ದಾರೆ.

ಇದಕ್ಕೆ ನ್ಯಾಯಾಲಯವು ಜುಲೈ 26ರಂದು ರಾಹುಲ್ ಗಾಂಧಿ ಕೋರ್ಟ್​ಗೆ ಹಾಜರಾಗದಿದ್ದರೆ ನ್ಯಾಯಾಲಯವು ಕಠಿಣ ಕ್ರಮ ಜರುಗಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದೆ. ಆಗಸ್ಟ್ 4, 2018 ರಂದು, ಜಿಲ್ಲಾ ಸಹಕಾರಿ ಬ್ಯಾಂಕ್‌ನ ಮಾಜಿ ಅಧ್ಯಕ್ಷ ವಿಜಯ್ ಮಿಶ್ರಾ ಅವರು ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ನ್ಯಾಯಾಲಯಕ್ಕೆ ದೂರು ಸಲ್ಲಿಸಿದ್ದರು.

ನ್ಯಾಯಾಲಯವು 27 ನವೆಂಬರ್ 2023 ರಂದು ವಿಚಾರಣೆಗೆ ಅವರನ್ನು ಕರೆದಿತ್ತು. ರಾಹುಲ್ ಗಾಂಧಿ ಫೆಬ್ರವರಿ 20 ರಂದು ನ್ಯಾಯಾಲಯಕ್ಕೆ ಹಾಜರಾಗಿ ಜಾಮೀನು ಪಡೆದಿದ್ದರು. ಅವರ ಹೇಳಿಕೆ ದಾಖಲಿಸುವ ವಿಚಾರ ಸಂಸದ-ಶಾಸಕರ ವಿಶೇಷ ನ್ಯಾಯಾಲಯದಲ್ಲಿ ಬಾಕಿ ಇದೆ. ಈ ಪ್ರಕರಣದ ವಿಚಾರಣೆ ಮಂಗಳವಾರ ನಡೆಯಬೇಕಿತ್ತು, ಆದರೆ ರಾಹುಲ್ ಗಾಂಧಿ ನೇರವಾಗಿ ನ್ಯಾಯಾಲಯಕ್ಕೆ ಬಂದಿಲ್ಲ.

ಮತ್ತಷ್ಟು ಓದಿ: Defamation case: ಮಾನನಷ್ಟ ಮೊಕದ್ದಮೆ: ರಾಹುಲ್ ಗಾಂಧಿಗೆ ಮಧ್ಯಂತರ ರಕ್ಷಣೆ ನೀಡಲು ಗುಜರಾತ್ ಹೈಕೋರ್ಟ್ ನಕಾರ

ಈ ಬಗ್ಗೆ ಕಟ್ಟುನಿಟ್ಟಿನ ನಿಲುವು ತಳೆದಿರುವ ನ್ಯಾಯಾಲಯ ರಾಹುಲ್ ಗಾಂಧಿಗೆ ಕಠಿಣ ಎಚ್ಚರಿಕೆ ನೀಡಿ ಪ್ರಕರಣದ ವಿಚಾರಣೆಯನ್ನು ಜುಲೈ 26ಕ್ಕೆ ಮುಂದೂಡಿದೆ. ರಾಹುಲ್ ಗಾಂಧಿ ಅವರು ಅಮಿತ್ ಶಾ ಅವರ ವರ್ಚಸ್ಸಿಗೆ ಧಕ್ಕೆ ತಂದಿದ್ದಾರೆ ಎಂದು ಮಿಶ್ರಾ ಆರೋಪಿಸಿದ್ದರು.

ಈ ವರ್ಷದ ಫೆಬ್ರವರಿ 20 ರಂದು, ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿ ಅವರಿಗೆ 25,000 ರೂ.ಗಳ ಶ್ಯೂರಿಟಿ ಮತ್ತು ಅದೇ ಮೊತ್ತದ ವೈಯಕ್ತಿಕ ಬಾಂಡ್ ಮೇಲೆ ಸಂಸದ-ಶಾಸಕ ನ್ಯಾಯಾಲಯವು ಜಾಮೀನು ನೀಡಿತ್ತು.ರಾಹುಲ್ ಗಾಂಧಿಗೆ ಜಾಮೀನು ಸಿಕ್ಕರೂ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ