ಮಾನನಷ್ಟ ಮೊಕದ್ದಮೆ: ಜು.21ಕ್ಕೆ ರಾಹುಲ್ ಮೇಲ್ಮನವಿ ಅರ್ಜಿ ವಿಚಾರಣೆಗೆ ಸುಪ್ರೀಂ ಒಪ್ಪಿಗೆ

ಪ್ರಧಾನಿ ನರೇಂದ್ರ ಮೋದಿ ಉಪನಾಮಕ್ಕೆ ಸಂಬಂಧಿಸಿದಂತೆ ತನ್ನ ಮೇಲೆ ಮಾನನಷ್ಟ ಮೊಕದ್ದಮೆಯಡಿಯಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆ ನೀಡಿದ ಆದೇಶವನ್ನು ತಡೆಹಿಡಿಯಲು ನಿರಾಕರಿಸಿದ ಗುಜರಾತ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ರಾಹುಲ್ ಗಾಂಧಿ ಅವರು ಸುಪ್ರೀಂ ಕೋರ್ಟ್​ಗೆ ಸಲ್ಲಿಸಿದ ಮೇಲ್ಮನವಿಯನ್ನು ಜುಲೈ 21 ರಂದು ವಿಚಾರಣೆ ನಡೆಸಲಾಗುವುದು ಎಂದು ಸುಪ್ರೀಂ ಕೋರ್ಟ್​ ತಿಳಿಸಿದೆ.

ಮಾನನಷ್ಟ ಮೊಕದ್ದಮೆ: ಜು.21ಕ್ಕೆ ರಾಹುಲ್ ಮೇಲ್ಮನವಿ ಅರ್ಜಿ ವಿಚಾರಣೆಗೆ ಸುಪ್ರೀಂ ಒಪ್ಪಿಗೆ
ರಾಹುಲ್ ಗಾಂಧಿ
Follow us
ಅಕ್ಷಯ್​ ಪಲ್ಲಮಜಲು​​
|

Updated on:Jul 18, 2023 | 1:14 PM

ದೆಹಲಿ, ಜು.18: ಪ್ರಧಾನಿ ನರೇಂದ್ರ ಮೋದಿ ಉಪನಾಮಕ್ಕೆ ಸಂಬಂಧಿಸಿದಂತೆ, ತನ್ನ ಮೇಲೆ ಮಾನನಷ್ಟ ಮೊಕದ್ದಮೆಯಡಿಯಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆ ನೀಡಿದ ಸೂರತ್​ ನ್ಯಾಯಲಯದ ಆದೇಶವನ್ನು ತಡೆಹಿಡಿಯಲು ನಿರಾಕರಿಸಿದ ಗುಜರಾತ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸುಪ್ರೀಂ ಕೋರ್ಟ್​ಗೆ ಸಲ್ಲಿಸಿದ ಮೇಲ್ಮನವಿಯನ್ನು ಜುಲೈ 21 ರಂದು ವಿಚಾರಣೆ ನಡೆಸಲಾಗುವುದು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ತಿಳಿಸಿದೆ. ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು ಈ ವಿಷಯಕ್ಕೆ ಸಂಬಂಧಿಸಿದಂತೆ ಸುಪ್ರೀಂನಲ್ಲಿ ಪ್ರಸ್ತಾಪಿಸಿದ್ದು, ಇದೀಗ ಭಾರತದ ಮುಖ್ಯ ನ್ಯಾಯಮೂರ್ತಿ ಧನಂಜಯ ವೈ ಚಂದ್ರಚೂಡ್ ಅವರು ರಾಹುಲ್​​ ಗಾಂಧಿಯವರ ಮೇಲ್ಮನವಿಯ ವಿಚಾರಣೆಗೆ ದಿನಾಂಕವನ್ನು ನಿಗದಿಪಡಿಸಿದ್ದಾರೆ, ಜತೆಗೆ ಶೀಘ್ರ ವಿಚಾರಣೆಯನ್ನು ನಡೆಸುವಂತೆ ಅಭಿಷೇಕ್ ಮನು ಸಿಂಘ್ವಿ ಕೇಳಿಕೊಂಡಿದ್ದಾರೆ.

ಜುಲೈ 7 ರಂದು, ರಾಹುಲ್​​ ಗಾಂಧಿ ಅವರಿಗೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ 2 ವರ್ಷಗಳ ಜೈಲು ಶಿಕ್ಷೆಯನ್ನು ತಡೆಹಿಡಿಯಲು ಸಾಧ್ಯವಿಲ್ಲ ಎಂದು ಗುಜರಾತ್​ ಹೈಕೋರ್ಟ್ ನೀಡಿದ ಆದೇಶದ ನಂತರ ಸುಪ್ರೀಂ ಕೋರ್ಟ್​ಗೆ ರಾಹುಲ್​​ ಗಾಂಧಿ ಅವರು ಜು.15ರಂದು ಮನವಿ ಸಲ್ಲಿಸಿದ್ದಾರೆ.

ಅನರ್ಹತೆಗೊಂಡಿರುವ ಸಂಸದ ಸ್ಥಾನವನ್ನು ಮತ್ತೆ ಪಡೆಯಲು ತನಗೆ 2 ವರ್ಷಗಳ ಜೈಲು ಶಿಕ್ಷೆ ನೀಡಿರುವ ಆದೇಶವನ್ನು ತಕ್ಷಣವೇ ತಡೆಹಿಡಿಯುವಂತೆ ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಲಾಗಿದೆ. ಶಿಕ್ಷೆಯ ಆದೇಶವು ವಾಕ್ ಸ್ವಾತಂತ್ರ್ಯ, ಮುಕ್ತ ಅಭಿವ್ಯಕ್ತಿ, ಮುಕ್ತ ಚಿಂತನೆ ಮತ್ತು ಮುಕ್ತ ಹೇಳಿಕೆ ಹಕ್ಕಿಗೆ ವಿರುದ್ಧವಾಗಿದೆ ಎಂದು ವಾದದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಮಾನನಷ್ಟ ಪ್ರಕರಣದಲ್ಲಿ 2 ವರ್ಷ ಶಿಕ್ಷೆ; ಸುಪ್ರೀಂಕೋರ್ಟ್ ಮೆಟ್ಟಿಲೇರಿದ ರಾಹುಲ್ ಗಾಂಧಿ

ರಾಜಕೀಯ ಪ್ರಚಾರದ ಸಂದರ್ಭದಲ್ಲಿ ದೇಶಕ್ಕೆ ವಂಚನೆ ಮಾಡಿದವರನ್ನು ಮತ್ತು ರಾಜಕೀಯವಾಗಿ ನರೇಂದ್ರ ಮೋದಿಯವರನ್ನು ಟೀಕಿಸುವುದು ಕಠಿಣ ಶಿಕ್ಷೆಗೆ ಹೇಗೆ ಒಳಲಾಗುತ್ತದೆ. ಇದು ನೈತಿಕ ಭ್ರಷ್ಟತೆಯ ಕೃತ್ಯವಾಗಿದೆ ಮತ್ತು ಇದು ಪ್ರಜಾಸತ್ತಾತ್ಮಕ ವಾಕ್ ಸ್ವಾತಂತ್ರ್ಯಕ್ಕೆ ಧಕ್ಕೆ ತಂದಿದೆ ಎಂದು ಗಾಂಧಿಯವರ ಅರ್ಜಿಯಲ್ಲಿ ತಿಳಿಸಿದ್ದಾರೆ.

ಮಾರ್ಚ್ 23 ರಂದು, ಪೂರ್ಣೇಶ್ ಮೋದಿ ಅವರು ಕ್ರಿಮಿನಲ್ ಮೊಕದ್ದಮೆಯನ್ನು ಸಲ್ಲಿಸಿದ ನಂತರ ಗುಜರಾತ್​​ನ ಸೂರತ್​ ಮ್ಯಾಜಿಸ್ಟ್ರಿಯಲ್ ನ್ಯಾಯಾಲಯವು ಮೋದಿ ಉಪನಾಮದ ಕುರಿತು ರಾಹುಲ್​​ ಗಾಂಧಿ ಅವರನ್ನು ದೋಷಿ ಎಂದು ಘೋಷಿಸಿತು. ರಾಹುಲ್​​ ಗಾಂಧಿಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಯಿತು, ನಂತರ ಪ್ರಜಾಪ್ರತಿನಿಧಿ ಕಾಯ್ದೆಯಡಿಯಲ್ಲಿ ಅವರನ್ನು ಸಂಸದರಾಗಿ ಅನರ್ಹಗೊಳಿಸಿತು. ಲೋಕಸಭೆ ಸೆಕ್ರೆಟರಿಯೇಟ್ ಅಧಿಸೂಚನೆಯ ನಂತರ ಮಾರ್ಚ್ 24 ರಂದು ಕೇರಳದ ವಯನಾಡ್ ಸಂಸದರಾಗಿ ರಾಹುಲ್​​ ಗಾಂಧಿ ಅವರನ್ನು ಅನರ್ಹಗೊಳಿಸಲಾಯಿತು. ಸೂರತ್​ ನ್ಯಾಯಲಯ ನೀಡಿದ ಆದೇಶವನ್ನು ಪುನರ್​​ಪರಿಶೀಲಿಸುವಂತೆ ಮನವಿ ಸಲ್ಲಿಸಿದ್ದರು, ಆದರೆ ಅದನ್ನು ನ್ಯಾಯಲಯ ತಿರಸ್ಕರಿಸಿತ್ತು. ನಂತರ ರಾಹುಲ್​​ ಗಾಂಧಿ ಅವರು ಗುಜರಾತ್​ ಹೈಕೋರ್ಟ್​ಗೆ ಮನವಿ ಸಲ್ಲಿಸಿದರು. ಕಾಂಗ್ರೆಸ್ ನಾಯಕ “ಮಾನ್ಯತೆಯನ್ನು ಉಲ್ಲಂಘಿಸಿದ್ದಾರೆ” ಮತ್ತು ಅವರ ಅಪರಾಧವು “ನೈತಿಕ ಪ್ರಕ್ಷುಬ್ಧತೆಯನ್ನು” ಒಳಗೊಂಡಿತ್ತು ಎಂದು ಜುಲೈ 7ರಂದು ಅವರ ಮನವಿಯನ್ನು ವಜಾಗೊಳಿತ್ತು. ನಂತರ ಸುಪ್ರೀಂ ಕೋರ್ಟ್​ಗೆ ಮನವಿ ಸಲ್ಲಿಸಿದ್ದು, ಇದೀಗ ಸುಪ್ರೀಂ ರಾಹುಲ್​​ ಗಾಂಧಿ ಅವರ ಮನವಿಯನ್ನು ಆಲಿಸಲು ಸಿದ್ಧ ಎಂದು ಹೇಳಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:02 pm, Tue, 18 July 23

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ