Defamation Case: ಮಾನನಷ್ಟ ಮೊಕದ್ದಮೆ: ದೆಹಲಿ ಹೈಕೋರ್ಟ್​ನಿಂದ ಉದ್ಧವ್​, ಆದಿತ್ಯ ಠಾಕ್ರೆ ಸೇರಿ ಮೂವರ ವಿರುದ್ಧ ಸಮನ್ಸ್ ಜಾರಿ

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಹಾಗೂ ಶಿವಸೇನೆ (ಯುಬಿಟಿ) ಅಧ್ಯಕ್ಷ ಉದ್ಧವ್ ಠಾಕ್ರೆ ಅವರಿಗೆ ದೆಹಲಿ ಹೈಕೋರ್ಟ್‌ನಿಂದ ಹಿನ್ನಡೆಯಾಗಿದೆ. ಮಾನನಷ್ಟ ಪ್ರಕರಣದಲ್ಲಿ ಉದ್ಧವ್ ಠಾಕ್ರೆ ವಿರುದ್ಧ ದೆಹಲಿ ಹೈಕೋರ್ಟ್​ ಸಮನ್ಸ್ ಜಾರಿ ಮಾಡಿದೆ.

Defamation Case: ಮಾನನಷ್ಟ ಮೊಕದ್ದಮೆ: ದೆಹಲಿ ಹೈಕೋರ್ಟ್​ನಿಂದ ಉದ್ಧವ್​, ಆದಿತ್ಯ ಠಾಕ್ರೆ ಸೇರಿ ಮೂವರ ವಿರುದ್ಧ ಸಮನ್ಸ್ ಜಾರಿ
ಉದ್ಧವ್ ಠಾಕ್ರೆ
Follow us
ನಯನಾ ರಾಜೀವ್
|

Updated on:Mar 28, 2023 | 2:31 PM

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಹಾಗೂ ಶಿವಸೇನೆ (ಯುಬಿಟಿ) ಅಧ್ಯಕ್ಷ ಉದ್ಧವ್ ಠಾಕ್ರೆ ಅವರಿಗೆ ದೆಹಲಿ ಹೈಕೋರ್ಟ್‌ನಿಂದ ಹಿನ್ನಡೆಯಾಗಿದೆ. ಮಾನನಷ್ಟ ಪ್ರಕರಣದಲ್ಲಿ ಉದ್ಧವ್ ಠಾಕ್ರೆ ವಿರುದ್ಧ ದೆಹಲಿ ಹೈಕೋರ್ಟ್​ ಸಮನ್ಸ್ ಜಾರಿ ಮಾಡಿದೆ. ಉದ್ಧವ್ ಅವರಲ್ಲದೆ, ಅವರ ಪುತ್ರ ಆದಿತ್ಯ ಠಾಕ್ರೆ ಮತ್ತು ಪಕ್ಷದ ಹಿರಿಯ ನಾಯಕ ಸಂಜಯ್ ರಾವತ್ ಅವರಿಗೂ ಸಮನ್ಸ್ ನೀಡಲಾಗಿದೆ. ಪ್ರಕರಣದ ಮುಂದಿನ ವಿಚಾರಣೆ ಏಪ್ರಿಲ್ 17 ರಂದು ನಡೆಯಲಿದೆ.

ಶಿಂದೆ ಬಣದ ನಾಯಕನ ಅರ್ಜಿಗೆ ಸಮನ್ಸ್ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂದೆ ಬಣದ ನಾಯಕ ಮತ್ತು ಸಂಸದ ರಾಹುಲ್ ರಮೇಶ್ ಶೆವಾಲೆ ಅವರ ಅರ್ಜಿಯ ಮೇಲೆ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ರಮೇಶ್ ಶೆವಾಲೆ ಅವರು ಮೂವರು ನಾಯಕರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದರು.

ಮತ್ತಷ್ಟು ಓದಿ: Shiv Sena Symbol ಏಕನಾಥ್ ಶಿಂಧೆ ಬಣ ಪಾಲಾದ ‘ಬಿಲ್ಲು ಬಾಣ’ ಚಿಹ್ನೆ, ಉದ್ಧವ್ ಠಾಕ್ರಗೆ ಶಾಕ್ ಕೊಟ್ಟ ಚುನಾವಣಾ ಆಯೋಗ

ಠಾಕ್ರೆ ಬಣದ ಸಂಸದ ಸಂಜಯ್ ರಾವತ್, ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮತ್ತು ಶಾಸಕ ಆದಿತ್ಯ ಠಾಕ್ರೆ ಆ ಶಾಸಕರು ಮತ್ತು ಸಂಸದರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಸಂಜಯ್ ರಾವತ್, ಉದ್ಧವ್ ಠಾಕ್ರೆ, ಆದಿತ್ಯ ಠಾಕ್ರೆ ಅವರು ಶಿಂದೆ ಬಣದ ಶಾಸಕರು ಮತ್ತು ಸಂಸದರಿಗೆ ಸಂಬಂಧಿಸಿದಂತೆ ನೀಡಿದ ಹೇಳಿಕೆಗಳು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಅಂದರೆ ಗೂಗಲ್, ಫೇಸ್‌ಬುಕ್, ಇನ್‌ಸ್ಟಾಗ್ರಾಂ, ಟ್ವಿಟ್ಟರ್‌ನಲ್ಲಿ ಇನ್ನೂ ಚಾಲ್ತಿಯಲ್ಲಿವೆ.

ಹಾಗಾಗಿಯೇ ದೆಹಲಿ ಹೈಕೋರ್ಟ್ ಈ ವಿಚಾರದಲ್ಲಿ ಸಾಮಾಜಿಕ ಜಾಲತಾಣಗಳ ವಿರುದ್ಧ ನೋಟಿಸ್ ಜಾರಿ ಮಾಡಿದೆ. ಶಿವಸೇನೆಯ ಶಾಸಕರು ಮತ್ತು ಸಂಸದರು ಪಕ್ಷ ವಿಭಜನೆಯಾದ ನಂತರ ಏಕನಾಥ್ ಶಿಂದೆ ಅವರನ್ನು ಬೆಂಬಲಿಸಿದ್ದರು, ನಂತರ ಮಹಾರಾಷ್ಟ್ರದಲ್ಲಿ ಬಿಜೆಪಿ ಬೆಂಬಲದೊಂದಿಗೆ ಎನ್​ಡಿಎ ಸರ್ಕಾರ ರಚನೆಯಾಯಿತು.

ಉದ್ಧವ್ ಠಾಕ್ರೆ, ಸಂಜಯ್ ರಾವತ್ ಮತ್ತು ಆದಿತ್ಯ ಠಾಕ್ರೆ ಈ ಬಗ್ಗೆ ಹಲವು ರಾಜಕೀಯ ದಾಳಿಗಳನ್ನು ನಡೆಸಿದ್ದರು ಮತ್ತು ಏಕನಾಥ್ ಶಿಂದೆ ಅವರು ಶಿವಸೇನೆಯ ಚುನಾವಣಾ ಚಿಹ್ನೆಯನ್ನು 2000 ಕೋಟಿಗೆ ಖರೀದಿಸಿದ್ದಾರೆ ಎಂದು ಆರೋಪ ಮಾಡಿದ್ದರು.

ಉದ್ಧವ್ ಠಾಕ್ರೆ, ಸಂಜಯ್ ರಾವತ್ ಮತ್ತು ಆದಿತ್ಯ ಠಾಕ್ರೆ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲಾಗಿದೆ. ಈ ಹಿನ್ನೆಲೆಯಲ್ಲಿ ಇದೀಗ ಹೈಕೋರ್ಟ್ ಮೂವರೂ ಏಪ್ರಿಲ್ 17ರಂದು ಖುದ್ದು ಹಾಜರಾಗುವಂತೆ ಆದೇಶಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:29 pm, Tue, 28 March 23

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ