Defamation Case: ಮಾನನಷ್ಟ ಮೊಕದ್ದಮೆ: ದೆಹಲಿ ಹೈಕೋರ್ಟ್​ನಿಂದ ಉದ್ಧವ್​, ಆದಿತ್ಯ ಠಾಕ್ರೆ ಸೇರಿ ಮೂವರ ವಿರುದ್ಧ ಸಮನ್ಸ್ ಜಾರಿ

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಹಾಗೂ ಶಿವಸೇನೆ (ಯುಬಿಟಿ) ಅಧ್ಯಕ್ಷ ಉದ್ಧವ್ ಠಾಕ್ರೆ ಅವರಿಗೆ ದೆಹಲಿ ಹೈಕೋರ್ಟ್‌ನಿಂದ ಹಿನ್ನಡೆಯಾಗಿದೆ. ಮಾನನಷ್ಟ ಪ್ರಕರಣದಲ್ಲಿ ಉದ್ಧವ್ ಠಾಕ್ರೆ ವಿರುದ್ಧ ದೆಹಲಿ ಹೈಕೋರ್ಟ್​ ಸಮನ್ಸ್ ಜಾರಿ ಮಾಡಿದೆ.

Defamation Case: ಮಾನನಷ್ಟ ಮೊಕದ್ದಮೆ: ದೆಹಲಿ ಹೈಕೋರ್ಟ್​ನಿಂದ ಉದ್ಧವ್​, ಆದಿತ್ಯ ಠಾಕ್ರೆ ಸೇರಿ ಮೂವರ ವಿರುದ್ಧ ಸಮನ್ಸ್ ಜಾರಿ
ಉದ್ಧವ್ ಠಾಕ್ರೆ

Updated on: Mar 28, 2023 | 2:31 PM

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಹಾಗೂ ಶಿವಸೇನೆ (ಯುಬಿಟಿ) ಅಧ್ಯಕ್ಷ ಉದ್ಧವ್ ಠಾಕ್ರೆ ಅವರಿಗೆ ದೆಹಲಿ ಹೈಕೋರ್ಟ್‌ನಿಂದ ಹಿನ್ನಡೆಯಾಗಿದೆ. ಮಾನನಷ್ಟ ಪ್ರಕರಣದಲ್ಲಿ ಉದ್ಧವ್ ಠಾಕ್ರೆ ವಿರುದ್ಧ ದೆಹಲಿ ಹೈಕೋರ್ಟ್​ ಸಮನ್ಸ್ ಜಾರಿ ಮಾಡಿದೆ. ಉದ್ಧವ್ ಅವರಲ್ಲದೆ, ಅವರ ಪುತ್ರ ಆದಿತ್ಯ ಠಾಕ್ರೆ ಮತ್ತು ಪಕ್ಷದ ಹಿರಿಯ ನಾಯಕ ಸಂಜಯ್ ರಾವತ್ ಅವರಿಗೂ ಸಮನ್ಸ್ ನೀಡಲಾಗಿದೆ. ಪ್ರಕರಣದ ಮುಂದಿನ ವಿಚಾರಣೆ ಏಪ್ರಿಲ್ 17 ರಂದು ನಡೆಯಲಿದೆ.

ಶಿಂದೆ ಬಣದ ನಾಯಕನ ಅರ್ಜಿಗೆ ಸಮನ್ಸ್
ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂದೆ ಬಣದ ನಾಯಕ ಮತ್ತು ಸಂಸದ ರಾಹುಲ್ ರಮೇಶ್ ಶೆವಾಲೆ ಅವರ ಅರ್ಜಿಯ ಮೇಲೆ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ರಮೇಶ್ ಶೆವಾಲೆ ಅವರು ಮೂವರು ನಾಯಕರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದರು.

ಮತ್ತಷ್ಟು ಓದಿ: Shiv Sena Symbol ಏಕನಾಥ್ ಶಿಂಧೆ ಬಣ ಪಾಲಾದ ‘ಬಿಲ್ಲು ಬಾಣ’ ಚಿಹ್ನೆ, ಉದ್ಧವ್ ಠಾಕ್ರಗೆ ಶಾಕ್ ಕೊಟ್ಟ ಚುನಾವಣಾ ಆಯೋಗ

ಠಾಕ್ರೆ ಬಣದ ಸಂಸದ ಸಂಜಯ್ ರಾವತ್, ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮತ್ತು ಶಾಸಕ ಆದಿತ್ಯ ಠಾಕ್ರೆ ಆ ಶಾಸಕರು ಮತ್ತು ಸಂಸದರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಸಂಜಯ್ ರಾವತ್, ಉದ್ಧವ್ ಠಾಕ್ರೆ, ಆದಿತ್ಯ ಠಾಕ್ರೆ ಅವರು ಶಿಂದೆ ಬಣದ ಶಾಸಕರು ಮತ್ತು ಸಂಸದರಿಗೆ ಸಂಬಂಧಿಸಿದಂತೆ ನೀಡಿದ ಹೇಳಿಕೆಗಳು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಅಂದರೆ ಗೂಗಲ್, ಫೇಸ್‌ಬುಕ್, ಇನ್‌ಸ್ಟಾಗ್ರಾಂ, ಟ್ವಿಟ್ಟರ್‌ನಲ್ಲಿ ಇನ್ನೂ ಚಾಲ್ತಿಯಲ್ಲಿವೆ.

ಹಾಗಾಗಿಯೇ ದೆಹಲಿ ಹೈಕೋರ್ಟ್ ಈ ವಿಚಾರದಲ್ಲಿ ಸಾಮಾಜಿಕ ಜಾಲತಾಣಗಳ ವಿರುದ್ಧ ನೋಟಿಸ್ ಜಾರಿ ಮಾಡಿದೆ.
ಶಿವಸೇನೆಯ ಶಾಸಕರು ಮತ್ತು ಸಂಸದರು ಪಕ್ಷ ವಿಭಜನೆಯಾದ ನಂತರ ಏಕನಾಥ್ ಶಿಂದೆ ಅವರನ್ನು ಬೆಂಬಲಿಸಿದ್ದರು, ನಂತರ ಮಹಾರಾಷ್ಟ್ರದಲ್ಲಿ ಬಿಜೆಪಿ ಬೆಂಬಲದೊಂದಿಗೆ ಎನ್​ಡಿಎ ಸರ್ಕಾರ ರಚನೆಯಾಯಿತು.

ಉದ್ಧವ್ ಠಾಕ್ರೆ, ಸಂಜಯ್ ರಾವತ್ ಮತ್ತು ಆದಿತ್ಯ ಠಾಕ್ರೆ ಈ ಬಗ್ಗೆ ಹಲವು ರಾಜಕೀಯ ದಾಳಿಗಳನ್ನು ನಡೆಸಿದ್ದರು ಮತ್ತು ಏಕನಾಥ್ ಶಿಂದೆ ಅವರು ಶಿವಸೇನೆಯ ಚುನಾವಣಾ ಚಿಹ್ನೆಯನ್ನು 2000 ಕೋಟಿಗೆ ಖರೀದಿಸಿದ್ದಾರೆ ಎಂದು ಆರೋಪ ಮಾಡಿದ್ದರು.

ಉದ್ಧವ್ ಠಾಕ್ರೆ, ಸಂಜಯ್ ರಾವತ್ ಮತ್ತು ಆದಿತ್ಯ ಠಾಕ್ರೆ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲಾಗಿದೆ. ಈ ಹಿನ್ನೆಲೆಯಲ್ಲಿ ಇದೀಗ ಹೈಕೋರ್ಟ್ ಮೂವರೂ ಏಪ್ರಿಲ್ 17ರಂದು ಖುದ್ದು ಹಾಜರಾಗುವಂತೆ ಆದೇಶಿಸಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Published On - 2:29 pm, Tue, 28 March 23

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us