AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SCO ಸಭೆ: ಭಯೋತ್ಪಾದನೆ ವಿರುದ್ಧ ಒಗ್ಗಟ್ಟಾಗಿ ಹೋರಾಡಲು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕರೆ

ಸದಸ್ಯ ರಾಷ್ಟ್ರಗಳ ನಡುವೆ ರಕ್ಷಣಾ ಸಹಕಾರವನ್ನು ಉತ್ತೇಜಿಸುವ ಪ್ರಮುಖ ಘಟಕವಾಗಿ ಭಾರತವು ಎಸ್ ಸಿಒ ವನ್ನು ನೋಡಡುತ್ತದೆ. ನಾವು, ಒಂದು ರಾಷ್ಟ್ರವಾಗಿ, ಎಸ್‌ಸಿಒ ಸದಸ್ಯರ ನಡುವೆ ವಿಶ್ವಾಸ ಮತ್ತು ಸಹಕಾರದ ಮನೋಭಾವವನ್ನು ಇನ್ನಷ್ಟು ಬಲಪಡಿಸಲು ಬಯಸುತ್ತೇವೆ ಎಂದು ಸಿಂಗ್ ಹೇಳಿದರು.

SCO ಸಭೆ: ಭಯೋತ್ಪಾದನೆ ವಿರುದ್ಧ ಒಗ್ಗಟ್ಟಾಗಿ ಹೋರಾಡಲು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕರೆ
ರಾಜನಾಥ್ ಸಿಂಗ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Apr 28, 2023 | 1:34 PM

Share

ಮುಖ್ಯಾಂಶಗಳು

  • ಭಾರತ, ರಷ್ಯಾ, ಚೀನಾ ಮತ್ತು ಎಸ್ ಸಿಒದ ಇತರ ಸದಸ್ಯ ರಾಷ್ಟ್ರಗಳ ರಕ್ಷಣಾ  ಸಚಿವರು ದೆಹಲಿಯಲ್ಲಿ ಆಯೋಜಿಸಲಾದ ಸಮಾವೇಶದಲ್ಲಿ ಪ್ರಾದೇಶಿಕ ಭದ್ರತಾ ಸವಾಲುಗಳು ಮತ್ತು ಸಂಬಂಧಿತ ವಿಷಯಗಳ ಕುರಿತು ಚರ್ಚಿಸಿದರು
  • ಸುರಕ್ಷಿತ, ಸ್ಥಿರ ಮತ್ತು ಸಮೃದ್ಧ ಪ್ರದೇಶವನ್ನು ಖಚಿತಪಡಿಸಿಕೊಳ್ಳಲು, ನಾವು ನಮ್ಮ ಕಾರ್ಯಸೂಚಿಯ ಮೇಲೆ ಕೇಂದ್ರೀಕರಿಸಬೇಕಾಗಿದೆ
  • ಅಫ್ಘಾನಿಸ್ತಾನದಲ್ಲಿನ ಬೆಳವಣಿಗೆಗಳು ಸೇರಿದಂತೆ ಪ್ರಾದೇಶಿಕ ಭದ್ರತಾ ಪರಿಸ್ಥಿತಿಗಳ ಮೇಲೆ ಚರ್ಚೆಯ ಮುಖ್ಯ ಗಮನವನ್ನು ಕೇಂದ್ರೀಕರಿಸಲಾಗುವುದು

ದೆಹಲಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಶುಕ್ರವಾರ ಮತ್ತೊಮ್ಮೆ ಶಾಂಘೈ ಸಹಕಾರ ಸಂಸ್ಥೆ (SCO) ಸದಸ್ಯ ರಾಷ್ಟ್ರಗಳಿಗೆ ಭಯೋತ್ಪಾದನೆ (terrorism) ವಿರುದ್ಧ ಒಗ್ಗಟ್ಟಿನಿಂದ ಹೋರಾಡಲು ಮತ್ತು ಅದರ ಎಲ್ಲಾ ರೀತಿಯ ಬೆದರಿಕೆಯನ್ನು ತೊಡೆದುಹಾಕಲು ಕರೆ ನೀಡಿದ್ದಾರೆ. ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ಅವರು ವರ್ಚುವಲ್ ಆಗಿ ಸಭೆಯಲ್ಲಿ ಭಾಗವಹಿಸಲು ನಿರ್ಧರಿಸಲಾಗಿತ್ತು.  ನಾವು ಒಗ್ಗಟ್ಟಿನಿಂದ ಭಯೋತ್ಪಾದನೆ ವಿರುದ್ಧ ಹೋರಾಡಬೇಕು. ಎಸ್‌ಸಿಒ ಪ್ರಬಲವಾಗಿ ಹೊರಹೊಮ್ಮಬೇಕಾದರೆ, ನಾವು ಒಟ್ಟಾಗಿ ಹೋರಾಡಬೇಕು. ಭಯೋತ್ಪಾದಕ ಗುಂಪುಗಳು ಸಾಮಾಜಿಕ ಮಾಧ್ಯಮ ಮತ್ತು ಕ್ರೌಡ್‌ಫಂಡಿಂಗ್‌ನಂತಹ ಹೊಸ ವಿಧಾನಗಳನ್ನು ಬಳಸುತ್ತಿವೆ ಎಂದು ಎಸ್‌ಸಿಒ ರಕ್ಷಣಾ ಸಚಿವರ ಸಭೆಯಲ್ಲಿ ಸಿಂಗ್ ಹೇಳಿರುವುದಾಗಿ ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಭಾರತ, ರಷ್ಯಾ, ಚೀನಾ ಮತ್ತು ಎಸ್ ಸಿಒದ ಇತರ ಸದಸ್ಯ ರಾಷ್ಟ್ರಗಳ ರಕ್ಷಣಾ  ಸಚಿವರು ದೆಹಲಿಯಲ್ಲಿ ಆಯೋಜಿಸಲಾದ ಸಮಾವೇಶದಲ್ಲಿ ಪ್ರಾದೇಶಿಕ ಭದ್ರತಾ ಸವಾಲುಗಳು ಮತ್ತು ಸಂಬಂಧಿತ ವಿಷಯಗಳ ಕುರಿತು ಚರ್ಚಿಸಿದರು. ಸಿಂಗ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯಲ್ಲಿ ಅಫ್ಘಾನಿಸ್ತಾನದ ಒಟ್ಟಾರೆ ಪರಿಸ್ಥಿತಿಯನ್ನು ಪರಿಶೀಲಿಸುವ ನಿರೀಕ್ಷೆಯಿದೆ.

ಈ ವೇದಿಕೆಯು ನಮ್ಮೆಲ್ಲರಿಗೂ ನಮ್ಮ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳಲು, ನಮ್ಮ ದೃಷ್ಟಿಕೋನಗಳು ಮತ್ತು ಕಾಳಜಿಗಳನ್ನು ಹಂಚಿಕೊಳ್ಳಲು ಅವಕಾಶವನ್ನು ಒದಗಿಸುತ್ತದೆ. ನಮ್ಮ ಮುಂದಿರುವ ಸವಾಲುಗಳನ್ನು ಚರ್ಚಿಸಿ ಪರಿಹಾರ ಕಂಡುಕೊಳ್ಳುವ ಪ್ರಮುಖ ವೇದಿಕೆ ಇದಾಗಿದೆ ಎಂದು ರಕ್ಷಣಾ ಸಚಿವರು ಹೇಳಿದ್ದಾರೆ.

ಸದಸ್ಯ ರಾಷ್ಟ್ರಗಳ ನಡುವೆ ರಕ್ಷಣಾ ಸಹಕಾರವನ್ನು ಉತ್ತೇಜಿಸುವ ಪ್ರಮುಖ ಘಟಕವಾಗಿ ಭಾರತವು ಎಸ್​​ಸಿಒವನ್ನು ನೋಡುತ್ತದೆ. ನಾವು, ಒಂದು ರಾಷ್ಟ್ರವಾಗಿ, ಎಸ್‌ಸಿಒ ಸದಸ್ಯರ ನಡುವೆ ವಿಶ್ವಾಸ ಮತ್ತು ಸಹಕಾರದ ಮನೋಭಾವವನ್ನು ಇನ್ನಷ್ಟು ಬಲಪಡಿಸಲು ಬಯಸುತ್ತೇವೆ ಎಂದು ಸಿಂಗ್ ಹೇಳಿದರು.

ಎಸ್‌ಸಿಒವನ್ನು ಬಲಿಷ್ಠಗೊಳಿಸಲು ಭಾರತವು ಸಂಪೂರ್ಣ ಬದ್ಧವಾಗಿದ್ದು, ಎಸ್‌ಸಿಒ ಆದೇಶದ ಅನುಷ್ಠಾನಕ್ಕೆ ಮತ್ತು ಸಾಮಾನ್ಯ ಸವಾಲುಗಳನ್ನು ಎದುರಿಸುವುದಕ್ಕೆ ಸಹಾಯವಾಗಿ ನಿಲ್ಲುತ್ತದೆ.

ಸುರಕ್ಷಿತ, ಸ್ಥಿರ ಮತ್ತು ಸಮೃದ್ಧ ಪ್ರದೇಶವನ್ನು ಖಚಿತಪಡಿಸಿಕೊಳ್ಳಲು, ನಾವು ನಮ್ಮ ಕಾರ್ಯಸೂಚಿಯ ಮೇಲೆ ಕೇಂದ್ರೀಕರಿಸಬೇಕಾಗಿದೆ. ಇದು ಪ್ರತಿ ಸದಸ್ಯ ರಾಷ್ಟ್ರದ ಜನರ ಜೀವನದ ಗುಣಮಟ್ಟವನ್ನು ಸುಧಾರಿಸಲು ಸಹಾಯ ಮಾಡುತ್ತದೆ ಎಂದು ಸಿಂಗ್ ಹೇಳಿದ್ದಾರೆ.

ಅಫ್ಘಾನಿಸ್ತಾನದಲ್ಲಿನ ಬೆಳವಣಿಗೆಗಳು ಸೇರಿದಂತೆ ಪ್ರಾದೇಶಿಕ ಭದ್ರತಾ ಪರಿಸ್ಥಿತಿಗಳ ಮೇಲೆ ಚರ್ಚೆಯ ಮುಖ್ಯ ಗಮನವನ್ನು ಕೇಂದ್ರೀಕರಿಸಲಾಗುವುದು ಎಂದು ಸಭೆಯ ಸಿದ್ಧತೆಯಲ್ಲಿ ತೊಡಗಿರುವ ಅಧಿಕಾರಿಗಳು ಈ ಹಿಂದೆ ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದರು.

ಭಯೋತ್ಪಾದನೆ ಮತ್ತು ಉಗ್ರವಾದವನ್ನು ಪರಿಣಾಮಕಾರಿಯಾಗಿ ಎದುರಿಸಲು ಎಸ್‌ಸಿಒ ಸದಸ್ಯ ರಾಷ್ಟ್ರಗಳ ನಡುವೆ ಸಮನ್ವಯವನ್ನು ಹೆಚ್ಚಿಸುವುದು ಮತ್ತೊಂದು ಆದ್ಯತೆಯಾಗಿದೆ ಎಂದು ಅವರು ಹೇಳಿದರು.

ಎಸ್‌ಸಿಒ ಪ್ರಭಾವಶಾಲಿ ಆರ್ಥಿಕ ಮತ್ತು ಭದ್ರತಾ ವೇದಿಕೆ ಆಗಿದ್ದು ಇದು ಅತಿದೊಡ್ಡ ಪ್ರಾದೇಶಿಕ ಅಂತರರಾಷ್ಟ್ರೀಯ ಸಂಸ್ಥೆಗಳಲ್ಲಿ ಒಂದಾಗಿ ಹೊರಹೊಮ್ಮಿದೆ.

ಇದನ್ನೂ ಓದಿ: ಜಿಯಾ ಖಾನ್​ ಕೇಸ್​ನಲ್ಲಿ ಸೂರಜ್​​​ ಪಾಂಚೋಲಿ ನಿರಪರಾಧಿ; ಮಹತ್ವದ ತೀರ್ಪು ನೀಡಿದ ನ್ಯಾಯಾಲಯ

ಭಾರತವು ಎಸ್‌ಸಿಒ ಮತ್ತು ಅದರ ಪ್ರಾದೇಶಿಕ ಭಯೋತ್ಪಾದನೆ-ವಿರೋಧಿ ರಚನೆ (RATS) ನೊಂದಿಗೆ ತನ್ನ ಭದ್ರತೆ-ಸಂಬಂಧಿತ ಸಹಕಾರವನ್ನು ಗಾಢವಾಗಿಸುವಲ್ಲಿ ತೀವ್ರ ಆಸಕ್ತಿಯನ್ನು ತೋರಿಸಿದೆ, ಇದು ನಿರ್ದಿಷ್ಟವಾಗಿ ಭದ್ರತೆ ಮತ್ತು ರಕ್ಷಣೆಗೆ ಸಂಬಂಧಿಸಿದ ವಿಷಯಗಳೊಂದಿಗೆ ವ್ಯವಹರಿಸುತ್ತದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:15 pm, Fri, 28 April 23

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ