ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ಇಬ್ಬರು ಉಗ್ರರು ಹತ; ರಜೌರಿಗೆ ರಾಜನಾಥ್ ಸಿಂಗ್ ಭೇಟಿ
ಭಯೋತ್ಪಾದಕರ ವಿರುದ್ಧ ರಾಜೌರಿ ಜಿಲ್ಲೆಯ ಕಂಡಿಯಲ್ಲಿ ನಡೆಯುತ್ತಿರುವ ಕಾರ್ಯಾಚರಣೆಗಳ ಪರಿಸ್ಥಿತಿಯನ್ನು ಅವರು ಪರಿಶೀಲಿಸುತ್ತಿದ್ದಾರೆ ಎಂದು ಸೇನೆ ಹೇಳಿಕೆಯಲ್ಲಿ ತಿಳಿಸಿದೆ. ಗ್ರೌಂಡ್ ಕಮಾಂಡರ್‌ಗಳಿಂದ ಕಾರ್ಯಾಚರಣೆಯ ಎಲ್ಲಾ ಅಂಶಗಳ ಬಗ್ಗೆ ಅವರಿಗೆ ವಿವರಿಸಲಾಗಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕೂಡ ಜಮ್ಮುವಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದರು ಎಂದು ಸೇನೆ ಹೇಳಿದೆ.
ಜಮ್ಮು ಮತ್ತು ಕಾಶ್ಮೀರದ (Jammu and Kashmir)) ರಜೌರಿ (Rajouri) ಮತ್ತು ಬಾರಾಮುಲ್ಲಾದಲ್ಲಿ ಶನಿವಾರ ನಡೆದ ಎರಡು ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ (Encounter) ಇಬ್ಬರು ಉಗ್ರರು ಹತರಾಗಿದ್ದಾರೆ. ರಾಜೌರಿಯಲ್ಲಿ ಭಯೋತ್ಪಾದಕರು ನಡೆಸಿದ ಸ್ಫೋಟದಲ್ಲಿ ಐವರು ಸೇನಾ ಸಿಬ್ಬಂದಿ ಸಾವನ್ನಪ್ಪಿದ ಒಂದು ದಿನದ ನಂತರ ಈ ಘಟನೆ ನಡೆದಿದೆ. ನಗ್ರೋಟಾ ಮೂಲದ ವೈಟ್ ನೈಟ್ ಕಾರ್ಪ್ಸ್ ಪ್ರಕಾರ, ಶನಿವಾರ ಬೆಳಗ್ಗೆ ರಜೌರಿ ಜಿಲ್ಲೆಯ ಕಂಡಿ ಅರಣ್ಯದಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ. ರಜೌರಿ ಸೆಕ್ಟರ್‌ನ ಕಂಡಿ ಅರಣ್ಯದಲ್ಲಿ 06 ಮೇ 2023 ರಂದು 0115 ಗಂಟೆಗೆ ಭಯೋತ್ಪಾದಕರ ವಿರುದ್ಧ ಗುಂಡಿನ ದಾಳಿ ನಡೆಸಲಾಗಿದೆ ಎಂದು ಎಂದು ಸೇನಾ ಪಡೆಯ ಪಿಆರ್ಒ ಲೆಫ್ಟಿನೆಂಟ್ ಕರ್ನಲ್ ದೇವೆಂದರ್ ಆನಂದ್ ಹೇಳಿದ್ದಾರೆ. ಜಮ್ಮು ಪೊಲೀಸ್ ಮತ್ತು ಸಿಆರ್ಪಿಎಫ್ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ, ಸುಮಾರು 07.00 ಗಂಟೆಗಳ ಕಾಲ ಉಗ್ರರ ಮೇಲೆ ದಾಳಿ ನಡೆಸಲಾಗಿದೆ. ಈ ಗುಂಡಿನ ಚಕಮಕಿಯಲ್ಲಿ ಒಬ್ಬ ಉಗ್ರನನ್ನು ಹತ್ಯೆ ಮಾಡಿದ್ದು ಮತ್ತೊಬ್ಬ ಗಾಯಗೊಂಡಿರುವ ಸಾಧ್ಯತೆ ಇದೆ ಎಂದು ವೈಟ್ ನೈಟ್ ಕಾರ್ಪ್ಸ್ ಟ್ವೀಟ್ ಮಾಡಿದೆ.
ವಶಪಡಿಸಿಕೊಂಡ ಮದ್ದುಗುಂಡುಗಳಲ್ಲಿ ಎಕೆ-56, ಎಕೆಯ ನಾಲ್ಕು ಮ್ಯಾಗಜೀನ್‌ಗಳು, 56 ಸುತ್ತಿನ ಎಕೆ, 9 ಎಂಎಂ ಪಿಸ್ತೂಲ್ ಜೊತೆಗೆ ಮ್ಯಾಗಜೀನ್, ಮೂರು ಗ್ರೆನೇಡ್‌ಗಳು ಮತ್ತು ಮದ್ದುಗುಂಡುಗಳ ಚೀಲ ಸೇರಿವೆ. ಉತ್ತರ ಸೇನಾ ಕಮಾಂಡರ್ ಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿ ಕೂಡಾ ಘಟನಾ ಸ್ಥಳಕ್ಕೆ ತಲುಪಿದ್ದಾರೆ. ಭಯೋತ್ಪಾದಕರ ವಿರುದ್ಧ ರಾಜೌರಿ ಜಿಲ್ಲೆಯ ಕಂಡಿಯಲ್ಲಿ ನಡೆಯುತ್ತಿರುವ ಕಾರ್ಯಾಚರಣೆಗಳ ಪರಿಸ್ಥಿತಿಯನ್ನು ಅವರು ಪರಿಶೀಲಿಸುತ್ತಿದ್ದಾರೆ ಎಂದು ಸೇನೆ ಹೇಳಿಕೆಯಲ್ಲಿ ತಿಳಿಸಿದೆ. ಗ್ರೌಂಡ್ ಕಮಾಂಡರ್‌ಗಳಿಂದ ಕಾರ್ಯಾಚರಣೆಯ ಎಲ್ಲಾ ಅಂಶಗಳ ಬಗ್ಗೆ ಅವರಿಗೆ ವಿವರಿಸಲಾಗಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಜಮ್ಮುವಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದರು ಎಂದು ಸೇನೆ ಹೇಳಿದೆ.
#WATCH | Defence Minister Rajnath Singh reaches Rajouri
5 soldiers lost their lives in an explosion during an encounter with terrorists in Rajouri yesterday. pic.twitter.com/JEU1xhx36p
— ANI (@ANI) May 6, 2023
ಏಪ್ರಿಲ್ 20 ರಂದು ಪೂಂಚ್ ಜಿಲ್ಲೆಯ ಭಟ್ಟಾ ದುರಿಯನ್ ಪ್ರದೇಶದ ಬಳಿ ಸೇನಾ ಟ್ರಕ್ ಮೇಲೆ ದಾಳಿ ನಡೆಸಿ ಐವರು ಸೈನಿಕರನ್ನು ಕೊಂದ ಭಯೋತ್ಪಾದಕರನ್ನು ಮಟ್ಟಹಾಕಲು ಆಪರೇಷನ್ ತ್ರಿನೇತ್ರ ಜಂಟಿ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ ಎಂದು ವೈಟ್ ನೈಟ್ ಕಾರ್ಪ್ಸ್ ಶುಕ್ರವಾರ ಟ್ವೀಟ್‌ನಲ್ಲಿ ತಿಳಿಸಿತ್ತು.
ಏತನ್ಮಧ್ಯೆ, ಬಾರಾಮುಲ್ಲಾದ ಕರ್ಹಾಮಾ ಕುಂಜರ್ ಪ್ರದೇಶದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಮತ್ತೊಬ್ಬ ಉಗ್ರನನ್ನು ಕೊಲ್ಲಲಾಗಿದೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ. ಈ ಉಗ್ರನನ್ನು ಅಬಿದ್ ವಾನಿ ಎಂದು ಗುರುತಿಸಲಾಗಿದ್ದು, ನಿಷೇಧಿತ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ ಜೊತೆ ನಂಟು ಹೊಂದಿದ್ದಾನೆ. ಹತನಾದ ಉಗ್ರನನ್ನು ಅಬಿದ್ ವಾನಿ ಎಂದು ಗುರುತಿಸಲಾಗಿದೆ. ಈತ ನಿಷೇಧಿತ ಭಯೋತ್ಪಾದಕ ಸಂಘಟನೆ LeT ಯೊಂದಿಗೆ ಸಂಪರ್ಕ ಹೊಂದಿದ್ದ. ಈತನಿಂದ 01 ಎಕೆ 47 ರೈಫಲ್ ವಶಪಡಿಸಿಕೊಳ್ಳಲಾಗಿದೆ ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮಾಡಿದ್ದಾರೆ.
#WATCH |Defence Minister Rajnath Singh reaches Jammu. He was received by Lt Governor Manoj Sinha, Army Chief General Manoj Pande
Singh will proceed to Rajouri, where 5 soldiers lost their lives in an explosion during an encounter with terrorists yesterday pic.twitter.com/Xd0N4Tb9Nv
— ANI (@ANI) May 6, 2023
ಸುದ್ದಿ ಸಂಸ್ಥೆ ಎಎನ್‌ಐ ಜೊತೆ ಮಾತನಾಡಿದ ಬಾರಾಮುಲ್ಲಾ ಎಸ್‌ಎಸ್‌ಪಿ ಅಮೋದ್ ಅಶೋಕ್ ನಾಗ್‌ಪುರೆ,ಕೆಲವು ಅನುಮಾನಾಸ್ಪದ ಚಲನವಲನದ ಬಗ್ಗೆ ಮಾಹಿತಿಯನ್ನು ಸ್ವೀಕರಿಸಿದ ನಂತರ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು. ಆ ಸಮಯದಲ್ಲಿ ನಮ್ಮ ಕಡೆಗೆ ಗುಂಡಿನ ದಾಳಿ ನಡೆಸಲಾಯಿತು. ಪ್ರತೀಕಾರದ ಗುಂಡಿನ ದಾಳಿಯಲ್ಲಿ ಎಲ್ಇಟಿಯ ಒಬ್ಬ ಭಯೋತ್ಪಾದಕನನ್ನು ಕೊಲ್ಲಲಾಯಿತು. G20 ಶೃಂಗಸಭೆಯ ದೃಷ್ಟಿಯಿಂದ ನಮ್ಮ ಪಡೆಗಳು ಜಾಗರೂಕವಾಗಿವೆ. G20 ಶೃಂಗಸಭೆಯನ್ನು ಯಶಸ್ವಿಯಾಗಿ ಆಯೋಜಿಸಲಾಗುವುದು ಎಂದು ಹೇಳಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ದಟ್ಟ ಅರಣ್ಯ ಪ್ರದೇಶದಲ್ಲಿ ಶುಕ್ರವಾರ ಬೆಳಗ್ಗೆ ಉಗ್ರರು ದಾಳಿ ನಡೆಸಿದ್ದು, ಐವರು ಯೋಧರು ಹುತಾತ್ಮರಾಗಿದ್ದರು. ಸುಧಾರಿತ ಸ್ಫೋಟಕ ಸಾಧನ (ಐಇಡಿ) ಉಂಟಾದ ಸ್ಫೋಟದಲ್ಲಿ ಅಧಿಕಾರಿಯೊಬ್ಬರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹಿರಿಯ ಭದ್ರತಾ ಅಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ತಡರಾತ್ರಿಯವರೆಗೂ ಉಗ್ರರನ್ನು ಹೊಡೆದುರುಳಿಸುವ ಕಾರ್ಯಾಚರಣೆ ನಡೆದಿದೆ. ಸೇನೆಯ ಗಣ್ಯ ವಿಶೇಷ ಪಡೆಗಳು ಕೂಡ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದವು ಎಂದು ಮೂಲಗಳು ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿವೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 1:42 pm, Sat, 6 May 23