ಪ್ರಧಾನಿ ಮೋದಿಯವರಿಗೆ ಬೆದರಿಕೆ ಹಾಕಿದ 22 ವರ್ಷದ ಯುವಕನ ಬಂಧನ
22 ವರ್ಷದ ಸಲ್ಮಾನ್ ಎಂಬ ಯುವಕ ನಿನ್ನೆ ರಾತ್ರಿ ಪೊಲೀಸರಿಗೆ ಕರೆ ಮಾಡಿ ಬೆದರಿಕೆ ಹಾಕಿದ್ದಾನೆ. ಈ ಕುರಿತಂತೆ ಪೊಲೀಸರು ಮಾಹಿತಿ ನೀಡಿದ್ದಾರೆ.
ದೆಹಲಿ: ಪ್ರಧಾನಿ ನರೇಂದ್ರ ಮೋದಿಯವರಿಗೆ ಮಾರಣಾಂತಿಕ ಬೆದರಿಕೆಯೊಂದಿಗೆ ದೂರವಾಣಿ ಕರೆ ಮಾಡಿದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. 22 ವರ್ಷದ ಸಲ್ಮಾನ್ ಎಂಬ ಯುವಕ ನಿನ್ನೆ ರಾತ್ರಿ ಪೊಲೀಸರಿಗೆ ಕರೆ ಮಾಡಿ ಬೆದರಿಕೆ ಹಾಕಿದ್ದಾನೆ. ಈ ಕುರಿತಂತೆ ಪೊಲೀಸರು ಮಾಹಿತಿ ನೀಡಿದ್ದಾರೆ.
ಈಶಾನ್ಯ ದೆಹಲಿಯ ಖಜೂರಿ ಖಾಸ್ ಪೊಲೀಸರು ಯುವಕನ್ನು ಬಂಧಿಸಿದ್ದಾರೆ. ಆ ಬಳಿಕ ಹಿರಿಯ ಪೊಲೀಸ್ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
ಸಲ್ಮಾನ್ ಮೇಲೆ ಅನೇಕ ಕ್ರಿಮಿನಲ್ ಆಪಾಧನೆಗಳಿವೆ. ಈ ಹಿಂದೆ ಆತ ಬಂಧನಕ್ಕೆ ಒಳಪಟ್ಟಿದ್ದ. ಬೇಲ್ ಮೂಲಕ ಆಚೆಗೆ ಬಂದಿದ್ದ. ತನಿಖೆಯಲ್ಲಿ ಪ್ರಶ್ನಿಸಿದಾಗ, ಮತ್ತೆ ಜೈಲಿಗೆ ಹೋಗಲು ಈ ರೀತಿ ಮಾಡಿದ್ದೇನೆ ಎಂದು ಉತ್ತರಿಸಿದ್ದಾನೆ ಎಂದು ಪೊಲೀಸರು ಮಾಹಿತಿ ಹಂಚಿಕೊಂಡಿದ್ದಾರೆ.
ಕಳೆದ ವರ್ಷ ಜನವರಿ ತಿಂಗಳಿನಲ್ಲಿ ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಮಾರಣಾಂತಿಕ ಬೆದರಿಕೆ ಹಾಕಿದ ಆರೋಪದ ಮೇಲೆ ಈತನನ್ನು ಬಂಧಿಸಲಾಗಿತ್ತು. ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ಹಾಗೂ ಉದ್ದೇಶಿತ ರಾಷ್ಟ್ರೀಯ ನಾಗರಿಕ ನೋಂದಣಿ(ಎನ್ಆರ್ಸಿ) ವಿರುದ್ಧ ಅವರು ಆನ್ಲೈನ್ ನಲ್ಲಿ ಸಂದೇಶಗಳನ್ನು ಪೋಸ್ಟ್ ಮಾಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ:
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ಟೀಕಿಸಿದ ನಟ ಸಿದ್ಧಾರ್ಥ್ಗೆ ಕೊಲೆ ಬೆದರಿಕೆ