ದೆಹಲಿಯ ಬಡಾಪುರ ಮೇಲ್ಸೇತುವೆಯಲ್ಲಿ ಬರುತ್ತಿದ್ದ ಟ್ರಕ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಶನಿವಾರ ಮಧ್ಯರಾತ್ರಿ 12.48 ಕ್ಕೆ ಈ ಘಟನೆ ನಡೆದಿದೆ. ಆಲ್ಟೊದಲ್ಲಿದ್ದ ಏಳು ಮಂದಿ ಫರಿದಾಬಾದ್‌ನಲ್ಲಿ ನಡೆದ ವಿವಾಹ ಸಮಾರಂಭದಲ್ಲಿ ಪಾಲ್ಗೊಂಡು ದೆಹಲಿಗೆ ಹಿಂತಿರುಗುತ್ತಿದ್ದರು ಎಂದು ಪ್ರಾಥಮಿಕ ವಿಚಾರಣೆಯಿಂದ ತಿಳಿದುಬಂದಿದೆ.
ಕಾರು ನಿಯಂತ್ರಣ ತಪ್ಪಿ ಬದರ್‌ಪುರ ಮೇಲ್ಸೇತುವೆಯಲ್ಲಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಎದುರುಗಡೆಯಿಂದ ಬರುತ್ತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಕಾರು ನಿಯಂತ್ರಣ ತಪ್ಪಿ ಬದರ್‌ಪುರ ಮೇಲ್ಸೇತುವೆಯಲ್ಲಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಎದುರುಗಡೆಯಿಂದ ಬರುತ್ತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಈ ಬಗ್ಗೆ ಕರೆ ಬಂದ ನಂತರ ಅಪಘಾತದ ಬಗ್ಗೆ ಪೊಲೀಸರಿಗೆ ತಿಳಿಯಿತು
ಬೀದರ್ನಲ್ಲಿ ಭೀಕರ ರಸ್ತೆ ಅಪಘಾತ; ಟ್ರಕ್-ಟಾಟಾ ಎಸ್ ಡಿಕ್ಕಿಯಾಗಿ ನಾಲ್ವರು ಸಾವು
ಇಂದು ಮುಂಜಾನೆ ಬೀದರ್ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಟ್ರಕ್ ಹಾಗೂ ಟಾಟಾ ಎಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಸೇವಾನಗರ ತಾಂಡಾ ಬಳಿ ನಡೆದಿದೆ. ಘಟನೆಯಲ್ಲಿ ಐದು ಜನರಿಗೆ ಗಾಯಗಳಾಗಿದ್ದು ಬೀದರ್ ನ ಬ್ರೀಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮೃತಪಟ್ಟಿರುವ ಎಲ್ಲರೂ ಮಹಾರಾಷ್ಟ್ರದ ಉಗ್ಗಿರ್ ಮೂಲದವರು ಎಂದು ತಿಳಿದು ಬಂದಿದೆ.
ಮತ್ತಷ್ಟು ಓದಿ: ಹಾವೇರಿಯಲ್ಲಿ ಭೀಕರ ರಸ್ತೆ ಅಪಘಾತ ಮೂವರ ಸಾವು; ಓರ್ವ ಮಗುವಿನ ಸ್ಥಿತಿ ಗಂಭೀರ
ಟಾಟಾ ಎಸ್ ವಾಹನದಲ್ಲಿ ಒಟ್ಟು 14 ಜನ ಉಗ್ಗಿರ್ ನಿಂದಾ ಹೈದ್ರಾಬಾದ್ ಹೋಗುತ್ತಿದ್ದರು. 6 ಜನ ಮಹಿಳೆಯರು 5 ಜನ ಪುರುಷರು 3 ಮಕ್ಕಳು ಪ್ರಯಾಣಿಸುತ್ತಿದ್ದರು. ಈ ವೇಳೆ ಟ್ರಕ್-ಟಾಟಾ ಎಸಿ ನಡುವೆ ಡಿಕ್ಕಿಯಾಗಿದ್ದು ದಸ್ತಗಿರ್ ದಾವಲಸಾಬ್ (36) ರಸೀದಾ ಶೇಕ್ (41) ಟಾಟಾ ಎಸಿ ಚಾಲಕ ವಲಿ (31) ಅಮಾಮ್ ಶೇಕ್ (51) ಸೇರಿ ನಾಲ್ವರು ಮೃತಪಟ್ಟಿದ್ದಾರೆ. ದನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೆಳಗ್ಗೆ 4:30ರ ಸುಮಾರಿಗೆ ಅಪಘಾತ ಸಂಭವಿಸಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 11:05 am, Sun, 3 March 24