ದೆಹಲಿಯಲ್ಲಿ ಮತ್ತೊಂದು ಅಗ್ನಿ ಅವಘಡ(Fire Accident) ಸಂಭವಿಸಿದೆ, ಇಂದು ಬೆಳಗ್ಗೆ ದೆಹಲಿಯ ಕೃಷ್ಣನಗರ ಪ್ರದೇಶದಲ್ಲಿರುವ ವಸತಿ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡು ಮೂವರು ಸಾವನ್ನಪ್ಪಿದ್ದಾರೆ. ಬೆಳಗಿನ ಜಾವ 2.30ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡ ಬಗ್ಗೆ ಅಗ್ನಿಶಾಮಕ ದಳಕ್ಕೆ ಕರೆ ಬಂದಿದ್ದು, ಐದು ಅಗ್ನಿಶಾಮಕ ಟೆಂಡರ್‌ಗಳನ್ನು ಸ್ಥಳಕ್ಕೆ ಕಳುಹಿಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಗ್ನಿಶಾಮಕ ಅಧಿಕಾರಿಗಳ ಪ್ರಕಾರ, ಒಟ್ಟು 13 ಜನರನ್ನು ರಕ್ಷಿಸಲಾಯಿತು ಆದರೆ ಮೂವರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಲಾಯಿತು.
ವರದಿಗಳ ಪ್ರಕಾರ, ಕಟ್ಟಡದ ಪಾರ್ಕಿಂಗ್ ಸ್ಥಳದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಅನಾಹುತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ.
ಮೃತರನ್ನು ಅಂಜು ಶರ್ಮಾ (40) ಮತ್ತು ಕೇಶವ್ ಶರ್ಮಾ (18) ಎಂದು ಗುರುತಿಸಲಾಗಿದೆ. ಆದಾಗ್ಯೂ, ತೀವ್ರವಾಗಿ ಸುಟ್ಟುಹೋಗಿರುವ ಮೂರನೇ ದೇಹವು ಗುರುತು ಪತ್ತೆಯಾಗಿಲ್ಲ.
#UPDATE | Three people died and three were injured after a fire broke out at a building in Delhi’s Krishna Nagar, at around 2 am today. Seven people were rescued safely by the DFS unit.
All three injured have been admitted to hospital for treatment. https://t.co/i1yZcNzdMR
— ANI (@ANI) May 26, 2024
ಬೇಬಿ ಕೇರ್ ಸೆಂಟರ್ನಲ್ಲಿ ಬೆಂಕಿ ಅವಘಡ, ಏಳು ನವಜಾತ ಶಿಶುಗಳು ಸಾವು
ಶನಿವಾರ (ಮೇ 25) ರಾತ್ರಿ ರಾಷ್ಟ್ರ ರಾಜಧಾನಿಯ ವಿವೇಕ್ ವಿಹಾರ್ ಪ್ರದೇಶದಲ್ಲಿನ ನ್ಯೂ ಬಾರ್ನ್ ಬೇಬಿ ಕೇರ್ ಆಸ್ಪತ್ರೆಯಲ್ಲಿ ಮತ್ತೊಂದು ಭಾರಿ ಬೆಂಕಿ ಕಾಣಿಸಿಕೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳದಿಂದ ರಕ್ಷಿಸಿದ ನಂತರ ಕನಿಷ್ಠ ಏಳು ನವಜಾತ ಶಿಶುಗಳು ಸಾವನ್ನಪ್ಪಿವೆ.
ಮತ್ತಷ್ಟು ಓದಿ: Delhi Hospital Fire: ದೆಹಲಿಯ ಬೇಬಿ ಕೇರ್ ಸೆಂಟರ್ನಲ್ಲಿ ಅಗ್ನಿ ಅವಘಡ, 6 ನವಜಾತ ಶಿಶುಗಳು ಸಾವು
ಮಾಹಿತಿ ಮೇರೆಗೆ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಅಗ್ನಿಶಾಮಕ ಅಧಿಕಾರಿಯ ಪ್ರಕಾರ, ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಲಾಗಿದೆ ಮತ್ತು ಒಟ್ಟು 12 ಮಕ್ಕಳನ್ನು ರಕ್ಷಿಸಲಾಗಿದೆ, ಅದರಲ್ಲಿ ಏಳು ಮಂದಿ ಸಾವನ್ನಪ್ಪಿದ್ದಾರೆ ಮತ್ತು ಐವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ರಕ್ಷಿಸಲ್ಪಟ್ಟ ನವಜಾತ ಶಿಶುಗಳನ್ನು ಪೂರ್ವ ದೆಹಲಿಯ ಅಡ್ವಾನ್ಸ್ NICU ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 10:06 am, Sun, 26 May 24