AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ: ಮಗನನ್ನು ರಕ್ಷಿಸಲು ಯತ್ನಿಸಿದ ವ್ಯಕ್ತಿಯನ್ನು ಇಟ್ಟಿಗೆಯಿಂದ ಹೊಡೆದು ಕೊಂದ ಯುವಕರ ಗುಂಪು

ಶುಕ್ರವಾರ ರಾತ್ರಿ 11:00 ಗಂಟೆಗೆ ಹನೀಫ್ ಅವರ 14 ವರ್ಷದ ಮಗ ಬೀದಿಯಲ್ಲಿ ನಿಲ್ಲಿಸಿದ್ದ ತನ್ನ ಬೈಕನ್ನು ಪಡೆಯಲು ಹೊರಗೆ ಹೋದಾಗ, ಅದರ ಮೇಲೆ ನಾಲ್ಕೈದು ಹುಡುಗರ ಗುಂಪು ತನ್ನ ದಾರಿಯನ್ನು ತಡೆದು ಕುಳಿತಿರುವುದನ್ನು ಕಂಡನು. ಅಲ್ಲಿಂದ ಸರಿಯುವಂತೆ ಹೇಳಿದಾಗ ಅವರು ನಿರಾಕರಿಸಿದರು. ಮಾತಿಗೆ ಮಾತು ಬೆಳೆದು ಜಗಳ ಶುರುವಾಗಿದೆ.

ದೆಹಲಿ: ಮಗನನ್ನು ರಕ್ಷಿಸಲು ಯತ್ನಿಸಿದ ವ್ಯಕ್ತಿಯನ್ನು ಇಟ್ಟಿಗೆಯಿಂದ ಹೊಡೆದು ಕೊಂದ ಯುವಕರ ಗುಂಪು
ಮೊಹಮ್ಮದ್ ಹನೀಫ್
ರಶ್ಮಿ ಕಲ್ಲಕಟ್ಟ
|

Updated on: Sep 09, 2023 | 2:20 PM

Share

ದೆಹಲಿ ಸೆಪ್ಟೆಂಬರ್ 09: ಬಾಲಕರ ಗುಂಪಿನಿಂದ ತನ್ನ ಮಗನನ್ನು ರಕ್ಷಿಸಲು ಯತ್ನಿಸಿದ 38 ವರ್ಷದ ವ್ಯಕ್ತಿಯೊಬ್ಬನನ್ನು ಶುಕ್ರವಾರ ಇಟ್ಟಿಗೆಗಳಿಂದ ಹೊಡೆದು ಕೊಂದಿರುವ ಘಟನೆ ದೆಹಲಿಯಲ್ಲಿ (Delhi) ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಓಖ್ಲಾ ಎರಡನೇ ಹಂತದ ಸಂಜಯ್ ಕಾಲೋನಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಸಂತ್ರಸ್ತ ಮೊಹಮ್ಮದ್ ಹನೀಫ್ (Mohammad Hanif) ಪೋರ್ಟರ್ ಕೆಲಸ ಮಾಡುತ್ತಿದ್ದರು. ಪೊಲೀಸರ ಪ್ರಕಾರ, ಅವರ ಇಬ್ಬರು ಅಪ್ರಾಪ್ತ ಪುತ್ರರು ಸಹ ಘರ್ಷಣೆಯಲ್ಲಿ ಗಾಯಗೊಂಡಿದ್ದಾರೆ.

ಶುಕ್ರವಾರ ರಾತ್ರಿ 11:00 ಗಂಟೆಗೆ ಹನೀಫ್ ಅವರ 14 ವರ್ಷದ ಮಗ ಬೀದಿಯಲ್ಲಿ ನಿಲ್ಲಿಸಿದ್ದ ತನ್ನ ಬೈಕನ್ನು ಪಡೆಯಲು ಹೊರಗೆ ಹೋದಾಗ, ಅದರ ಮೇಲೆ ನಾಲ್ಕೈದು ಹುಡುಗರ ಗುಂಪು ತನ್ನ ದಾರಿಯನ್ನು ತಡೆದು ಕುಳಿತಿರುವುದನ್ನು ಕಂಡನು. ಅಲ್ಲಿಂದ ಸರಿಯುವಂತೆ ಹೇಳಿದಾಗ ಅವರು ನಿರಾಕರಿಸಿದರು. ಮಾತಿಗೆ ಮಾತು ಬೆಳೆದು ಜಗಳ ಶುರುವಾಗಿದೆ.

ಜಗಳ ಸದ್ದು ಕೇಳಿ ಹನೀಫ್ ಮನೆಗೆಯಿಂದ ಹೊರಗೆ ಬಂದಿದ್ದಾರೆ. ಆಗ ಹುಡುಗರ ಗುಂಪು ತನ್ನ ಮಗನ ಮೇಲೆ ಹಲ್ಲೆ ನಡೆಸುತ್ತಿರುವುದನ್ನು ನೋಡಿದ್ದಾರೆ. ಜಗಳ ಬಿಡಸಲು ಬಂದಾಗ ಆ ಹುಡುಗರು ತಿರುಗಿಬಿದ್ದು ಹನೀಫ್ ಗೆ ಇಟ್ಟಿಗೆಯಿಂದ ಹೊಡೆದಿದ್ದಾರೆ.

SOS ಕರೆಗೆ ಸ್ಪಂದಿಸಿದ ಪೊಲೀಸ್ ತಂಡವು ತ್ವರಿತವಾಗಿ ಸ್ಥಳಕ್ಕೆ ತಲುಪಿದ್ದು, ಸಂತ್ರಸ್ತ ಹನೀಫ್ ನ್ನು AIIMS ನ ಟ್ರಾಮಾ ಸೆಂಟರ್‌ಗೆ ದಾಖಲಿಸಿತು, ಅಲ್ಲಿ ವೈದ್ಯರು ಅವರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಿದರು. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

ಇದನ್ನೂ ಓದಿ: G20 summit: ಜಿ20 ಶೃಂಗಸಭೆಗೆ ಬಂದ ವಿದೇಶಿ ಅತಿಥಿಗಳಿಗೆ ವಿಶೇಷ ಸ್ಮರಣಿಕೆ, ಹಿತ್ತಾಳೆ ನಾಡಿನಿಂದ ದೆಹಲಿಗೆ ಬಂತು ಕಮಲ

18ನೇ ಜಿ20 ನಾಯಕರ ಶೃಂಗಸಭೆಗೆ ರಾಷ್ಟ್ರ ರಾಜಧಾನಿಯಲ್ಲಿ ಬಿಗಿ ಭದ್ರತೆ ಏರ್ಪಡಿಸಿದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಶೃಂಗಸಭೆಯ ಸಮಯದಲ್ಲಿ ನಗರದ ಮೇಲೆ ನಿಕಟ ನಿಗಾ ಇಡಲು 50,000 ಕ್ಕೂ ಹೆಚ್ಚು ಸಿಬ್ಬಂದಿ ಮತ್ತು ಶ್ವಾನದಳ ಮತ್ತು ಮೌಂಟೆಡ್ ಪೊಲೀಸರನ್ನು ನಿಯೋಜಿಸಲಾಗಿದೆ.

ಯುಎಸ್ ಅಧ್ಯಕ್ಷ ಜೋ ಬೈಡನ್ ಮತ್ತು ಯುಕೆ ಪ್ರಧಾನಿ ರಿಷಿ ಸುನಕ್ ಸೇರಿದಂತೆ ವಿಶ್ವದ ಪ್ರಮುಖ ನಾಯಕರ ಎರಡು ದಿನಗಳ ಸಭೆಯ ತಯಾರಿಗಾಗಿ ರಾಷ್ಟ್ರ ರಾಜಧಾನಿಯಾದ್ಯಂತ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್