AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಾಬ್ ಲಾಟರಿಯಲ್ಲಿ 6 ಕೋಟಿ ಗೆದ್ದ 80 ವರ್ಷದ ನಿವೃತ್ತ ಪೋಸ್ಟ್ ಮಾಸ್ಟರ್

ಈ ವರ್ಷದ ಪಂಜಾಬ್ ರಾಜ್ಯ ಬೈಸಾಖಿ ಬಂಪರ್ ಲಾಟರಿಯಲ್ಲಿ 6 ಕೋಟಿ ರೂ. ಮೊತ್ತದ ಪ್ರಥಮ ಬಹುಮಾನ ಗೆಲ್ಲುವ ಮೂಲಕ ದೆಹಲಿಯ ನಿವೃತ್ತ ಪೋಸ್ಟ್ ಮಾಸ್ಟರ್ ಅದೃಷ್ಟ ಖುಲಾಯಿಸಿದೆ. ಆಗಾಗ ಸಂಬಂಧಿಕರ ಮನೆಗೆ ಲುಧಿಯಾನಕ್ಕೆ ಹೋಗುತ್ತಿದ್ದ ಇವರು ಅಲ್ಲೇ ಲಾಟರಿ ಟಿಕೆಟ್ ಖರೀದಿಸಿದ್ದರು. ಅಲ್ಲಿ ಅವರು ಹಲವಾರು ದಶಕಗಳಿಂದ ಲಾಟರಿ ಖರೀದಿಸಿ ತಮ್ಮ ಅದೃಷ್ಟವನ್ನು ಪರೀಕ್ಷೆ ಮಾಡಿಕೊಳ್ಳುತ್ತಿದ್ದರು. ಆದರೆ, ಈ ಬಾರಿ ಅವರಿಗೆ ಅದೃಷ್ಟ ಕೈ ಹಿಡಿದಿದೆ. ಅವರು 500 ರೂ.ಗೆ ಲಾಟರಿ ಟಿಕೆಟ್ ಖರೀದಿಸಿದ್ದರು.

ಪಂಜಾಬ್ ಲಾಟರಿಯಲ್ಲಿ 6 ಕೋಟಿ ಗೆದ್ದ 80 ವರ್ಷದ ನಿವೃತ್ತ ಪೋಸ್ಟ್ ಮಾಸ್ಟರ್
Punjab Lottery Winner
ಸುಷ್ಮಾ ಚಕ್ರೆ
|

Updated on:Apr 22, 2026 | 10:00 PM

Share

ನವದೆಹಲಿ, ಏಪ್ರಿಲ್ 22: ದೆಹಲಿಯ 80 ವರ್ಷದ ನಿವೃತ್ತ ಪೋಸ್ಟ್ ಮಾಸ್ಟರ್ ಪಂಜಾಬ್ ರಾಜ್ಯ ಡಿಯರ್ ಬೈಸಾಖಿ ಬಂಪರ್ ಲಾಟರಿಯಲ್ಲಿ (Bumper Lottery) 6 ಕೋಟಿ ರೂ. ಪ್ರಥಮ ಬಹುಮಾನವನ್ನು ಗೆದ್ದಿದ್ದಾರೆ. ದೆಹಲಿಯ ನಿವಾಸಿಯಾದ 80 ವರ್ಷದ ಓಂ ಪ್ರಕಾಶ್ ಲುಧಿಯಾನದ ಘಂಟಾ ಘರ್ ನಲ್ಲಿರುವ ಅಂಗಡಿಯಿಂದ 500 ರೂ.ಗೆ ಲಾಟರಿ ಟಿಕೆಟ್ ಖರೀದಿಸಿದ್ದರು. ಬಿ 520729 ಸಂಖ್ಯೆಯ ಅವರ ಲಾಟರಿ ಟಿಕೆಟ್ ಏಪ್ರಿಲ್ 19ರಂದು ಘೋಷಿಸಲಾದ ಡ್ರಾದಲ್ಲಿ ಮೊದಲ ಬಹುಮಾನವನ್ನು ಪಡೆದುಕೊಂಡಿದೆ. ಹೀಗಾಗಿ, ರಾತ್ರಿ ಬೆಳಗಾಗುವಷ್ಟರಲ್ಲಿ ಅವರು ಕೋಟ್ಯಧಿಪತಿಯಾಗಿದ್ದಾರೆ.

ಓಂ ಪ್ರಕಾಶ್ ಸುಮಾರು 30 ವರ್ಷಗಳಿಂದ ಲಾಟರಿ ಟಿಕೆಟ್‌ಗಳನ್ನು ಖರೀದಿಸುತ್ತಿದ್ದರು. ಆಗಾಗ ಸಂಬಂಧಿಕರ ಮೂಲಕ ಲಾಟರಿ ಟಿಕೆಟ್ ಖರೀದಿಸುತ್ತಿದ್ದರು. ಅವರು ತಮ್ಮ ಅತ್ತಿಗೆಯನ್ನು ಭೇಟಿ ಮಾಡಲು ಆಗಾಗ ಲುಧಿಯಾನಕ್ಕೆ ಪ್ರಯಾಣಿಸುತ್ತಿದ್ದರು. ಅವರು ಅಲ್ಲಿಗೆ ಭೇಟಿ ನೀಡಿದ ಸಮಯದಲ್ಲಿ ಟಿಕೆಟ್‌ಗಳನ್ನು ಖರೀದಿಸುತ್ತಿದ್ದರು.

ಇದನ್ನೂ ಓದಿ: ಮಗ 49 ಕೋಟಿ ರೂ ಲಾಟರಿ ಗೆದ್ದ, ಕುಟುಂಬಸ್ಥರ ಸಂತೋಷ ಹೇಗಿತ್ತು ನೋಡಿ

ಲಾಟರಿ ಫಲಿತಾಂಶಗಳು ಘೋಷಣೆಯಾದ ನಂತರ, ಓಂ ಪ್ರಕಾಶ್ ಲುಧಿಯಾನಕ್ಕೆ ಪ್ರಯಾಣ ಬೆಳೆಸಿದರು. ಅಲ್ಲಿ ಅವರನ್ನು ಸಂಭ್ರಮಾಚರಣೆಗಳೊಂದಿಗೆ ಸ್ವಾಗತಿಸಲಾಯಿತು. ಈ ಹಣವನ್ನು ದತ್ತಿ ಉದ್ದೇಶಗಳಿಗಾಗಿ ಬಳಸಲು ಅವರ ಕುಟುಂಬ ಯೋಜಿಸಿದೆ. ಲುಧಿಯಾನ ಪ್ರದೇಶದ ನಿರ್ಗತಿಕರಿಗೆ ಮತ್ತು ಅನಾಥಾಶ್ರಮಗಳಲ್ಲಿ ಅಗತ್ಯವಿರುವವರಿಗೆ ಸಹಾಯ ಮಾಡುವುದಾಗಿ ಓಂ ಪ್ರಕಾಶ್ ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:47 pm, Wed, 22 April 26

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
ಭೀಕರ ಜಲ ಸಂಕಷ್ಟ: ರಾಯಚೂರು, ಕಲಬುರಗಿ, ಬೀದರಲ್ಲಿ ಕುಡಿಯುವ ನೀರಿಗಾಗಿ ಪರದಾಟ
ಭೀಕರ ಜಲ ಸಂಕಷ್ಟ: ರಾಯಚೂರು, ಕಲಬುರಗಿ, ಬೀದರಲ್ಲಿ ಕುಡಿಯುವ ನೀರಿಗಾಗಿ ಪರದಾಟ
ವಿಜಯಲಕ್ಷ್ಮಿ-ಧನ್ವೀರ್ ವಿವಾದದ ಬಗ್ಗೆ ದರ್ಶನ್​​ಗೆ ತಿಳಿಸುತ್ತೇವೆಂದ ವಕೀಲ
ವಿಜಯಲಕ್ಷ್ಮಿ-ಧನ್ವೀರ್ ವಿವಾದದ ಬಗ್ಗೆ ದರ್ಶನ್​​ಗೆ ತಿಳಿಸುತ್ತೇವೆಂದ ವಕೀಲ
RSS ಪಥಸಂಚಲನಕ್ಕೆ ಸಿದ್ಧತೆ: ಕೆಲವೆಡೆ ಷರತ್ತುಬದ್ಧ ಅನುಮತಿ; ಕೆಲವೆಡೆ ನಕಾರ
RSS ಪಥಸಂಚಲನಕ್ಕೆ ಸಿದ್ಧತೆ: ಕೆಲವೆಡೆ ಷರತ್ತುಬದ್ಧ ಅನುಮತಿ; ಕೆಲವೆಡೆ ನಕಾರ
‘ಪ್ರೇಮದ ಊರಲಿ’ ಸಿನಿಮಾ ಸಂಗೀತ ನಿರ್ದೇಶಕರಿಗೆ ಸಿಕ್ಕ ಸಂಭಾವನೆ ಎಷ್ಟು?
‘ಪ್ರೇಮದ ಊರಲಿ’ ಸಿನಿಮಾ ಸಂಗೀತ ನಿರ್ದೇಶಕರಿಗೆ ಸಿಕ್ಕ ಸಂಭಾವನೆ ಎಷ್ಟು?
ದೊಡ್ಡಬಳ್ಳಾಪುರ ಬೆನ್ನಲ್ಲೇ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲೂ ಲಘು ಭೂಕಂಪನ
ದೊಡ್ಡಬಳ್ಳಾಪುರ ಬೆನ್ನಲ್ಲೇ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲೂ ಲಘು ಭೂಕಂಪನ
ಸುದೀಪ್ ಮಾತಿಗೆ ಕಣ್ಣೀರಿಟ್ಟ ತಾಂಡವ್, ಕುಣಿದಾಡಿದ ಸೌಂದರ್ಯಾ: ವಿಡಿಯೋ
ಸುದೀಪ್ ಮಾತಿಗೆ ಕಣ್ಣೀರಿಟ್ಟ ತಾಂಡವ್, ಕುಣಿದಾಡಿದ ಸೌಂದರ್ಯಾ: ವಿಡಿಯೋ
ದೊಡ್ಡಬಳ್ಳಾಪುರ ತಾಲೂಕಿನ ಹಲವೆಡೆ ಮತ್ತೆ ಭೂಕಂಪನ; ಸ್ಥಳೀಯರಲ್ಲಿ ಆತಂಕ
ದೊಡ್ಡಬಳ್ಳಾಪುರ ತಾಲೂಕಿನ ಹಲವೆಡೆ ಮತ್ತೆ ಭೂಕಂಪನ; ಸ್ಥಳೀಯರಲ್ಲಿ ಆತಂಕ
ಭೀಕರ ಬರದಿಂದ ಬತ್ತಿದ ಭತ್ತದ ನಾಡು: ಇಡೀ ರಾಜ್ಯಕ್ಕೆ ಅಕ್ಕಿ ದರ ಏರಿಕೆಯ ಬಿಸಿ
ಭೀಕರ ಬರದಿಂದ ಬತ್ತಿದ ಭತ್ತದ ನಾಡು: ಇಡೀ ರಾಜ್ಯಕ್ಕೆ ಅಕ್ಕಿ ದರ ಏರಿಕೆಯ ಬಿಸಿ
ರೆಸ್ಯೂಮ್​​ನಲ್ಲಿ ಕನ್ನಡ ಇದ್ರೆ ರಿಜೆಕ್ಟ್​: ಅಳಲು ತೋಡಿಕೊಂಡ ಯುವತಿ
ರೆಸ್ಯೂಮ್​​ನಲ್ಲಿ ಕನ್ನಡ ಇದ್ರೆ ರಿಜೆಕ್ಟ್​: ಅಳಲು ತೋಡಿಕೊಂಡ ಯುವತಿ
ಹಿಂಗಾರು ಮಳೆ ಅಬ್ಬರಕ್ಕೆ ಹಚ್ಚ ಹಸಿರಾದ ಹಿಮವದ್ ಗೋಪಾಲಸ್ವಾಮಿ ಬೆಟ್ಟ
ಹಿಂಗಾರು ಮಳೆ ಅಬ್ಬರಕ್ಕೆ ಹಚ್ಚ ಹಸಿರಾದ ಹಿಮವದ್ ಗೋಪಾಲಸ್ವಾಮಿ ಬೆಟ್ಟ