Video Viral: ನೋಡನೋಡುತ್ತಲೇ ಧರೆಗೆ ಉರುಳಿದ ಬಹುಮಹಡಿ ಕಟ್ಟಡ
ದೆಹಲಿಯ ಭಜನ್ಪುರದ ವಿಜಯ್ ಪಾರ್ಕ್ ಪ್ರದೇಶದಲ್ಲಿ 3 ಅಂತಸ್ತಿನ ಕಟ್ಟಡವೊಂದು ಧರೆಗೆ ಉರುಳಿದ ಘಟನೆ ನಡೆದಿದೆ, ಈಗಾಗಲೇ ರಕ್ಷಣೆ ಕಾರ್ಯ ನಡೆಯುತ್ತಿದ್ದು, ಕಟ್ಟಡ ಕುಸಿಯುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ದೆಹಲಿ: ಜನರು ನೋಡು ನೋಡುತ್ತಿದ್ದಂತೆ 3 ಅಂತಸ್ತಿನ ಕಟ್ಟಡವೊಂದು ಧರೆಗೆ ಉರುಳಿದ ಘಟನೆ ದೆಹಲಿಯ (Delhi) ಭಜನ್ಪುರದ ವಿಜಯ್ ಪಾರ್ಕ್ ಪ್ರದೇಶದಲ್ಲಿ ನಡೆದಿದೆ. ಇದೀಗ ರಕ್ಷಣೆ ಕಾರ್ಯಕ್ಕಾಗಿ ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿದೆ. ಅವಶೇಷಗಳನ್ನು ತೆರವುಗೊಳಿಸುತ್ತಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಈ ಬಗ್ಗೆ ಯಾವುದೇ ಹೆಚ್ಚಿನ ಮಾಹಿತಿ ಅಧಿಕಾರಿಗಳು ನೀಡಿಲ್ಲ. ಘಟನೆಗೆ ಸಂಬಂಧಿಸಿದಂತೆ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
#WATCH | Delhi: A building collapsed in Vijay Park, Bhajanpura. Fire department present at the spot, rescue operations underway. Details awaited
(Video Source – Shot by locals, confirmed by Police) pic.twitter.com/FV3YDhphoE
— ANI (@ANI) March 8, 2023
ಕಟ್ಟಡ ಕುಸಿತಕ್ಕೆ ಕಾರಣ ಏನು ಎಂಬುದು ಇನ್ನೂ ತಿಳಿದುಬಂದಿಲ್ಲ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸ್ ಅಧಿಕಾರಿಗಳ ಪ್ರಕಾರ, ಈ ಬಗ್ಗೆ ಅಗ್ನಿಶಾಮಕ ದಳಕ್ಕೆ ಮಧ್ಯಾಹ್ನ 3:05 ಕ್ಕೆ ಮಾಹಿತಿ ಬಂದಿತು ಎಂದು ಹೇಳಲಾಗಿದೆ.