ದೆಹಲಿ: ಪ್ರಸಾದ ಕೊಡುವ ನೆಪದಲ್ಲಿ ಪರಿಚಯದ ಮಹಿಳೆಯ ಮೇಲೆ ಅತ್ಯಾಚಾರ ಮಾಡಿದ ಬಸ್ ಕಂಡಕ್ಟರ್

ಬಸ್ ಕಂಡಕ್ಟರ್​​ ಪರಿಚಯದ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಮಾಡಿರುವ ಘಟನೆ ಉತ್ತರ ದೆಹಲಿಯ ತಿಮಾರ್‌ಪುರ ಪ್ರದೇಶದಲ್ಲಿರುವ ದೆಹಲಿ ಸಾರಿಗೆ ನಿಗಮದಲ್ಲಿ(ಡಿಟಿಸಿ) ನಡೆದಿದೆ. ಇದೀಗ ಆರೋಪಿಯನ್ನು ಬಂಧಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

ದೆಹಲಿ: ಪ್ರಸಾದ ಕೊಡುವ ನೆಪದಲ್ಲಿ ಪರಿಚಯದ ಮಹಿಳೆಯ ಮೇಲೆ ಅತ್ಯಾಚಾರ ಮಾಡಿದ ಬಸ್ ಕಂಡಕ್ಟರ್
ಸಾಂದರ್ಭಿಕ ಚಿತ್ರ
Follow us
ಅಕ್ಷಯ್​ ಪಲ್ಲಮಜಲು​​
|

Updated on:Aug 24, 2023 | 5:18 PM

ದೆಹಲಿ, ಆ.24: ಬಸ್ ಕಂಡಕ್ಟರ್​​ ಪರಿಚಯದ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಮಾಡಿರುವ ಘಟನೆ ಉತ್ತರ ದೆಹಲಿಯ (delhi) ತಿಮಾರ್‌ಪುರ ಪ್ರದೇಶದಲ್ಲಿರುವ ದೆಹಲಿ ಸಾರಿಗೆ ನಿಗಮದಲ್ಲಿ(ಡಿಟಿಸಿ) ನಡೆದಿದೆ. ಇದರ ಜತೆಗೆ ಆಕೆಯ ಅಶ್ಲೀಲ ಫೋಟೋಗಳು ಮತ್ತು ವೀಡಿಯೊಗಳನ್ನು ತೆಗೆದು, ಆಕೆಯನ್ನು ಬ್ಲಾಕ್​ಮೇಲ್​​ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇದೀಗ ಆರೋಪಿಯನ್ನು ಬಂಧಿಸಲಾಗಿದೆ. ಮಹಿಳೆ ಡಿಟಿಸಿಯಲ್ಲಿ (Delhi Transport Corporation) 2010 ರಿಂದ 2017 ರವರೆಗೆ ಟೈಪಿಸ್ಟ್ ಆಗಿ ಕೆಲಸ ಮಾಡಿದ್ದಿದರು ಎಂದು ಹೇಳಲಾಗಿದೆ. ಆದರೆ ಆಕೆಗೆ ಮಗುವಾದ ನಂತರ ಕೆಲಸಕ್ಕೆ ಬರುವುದನ್ನು ನಿಲ್ಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಎರಡು ವರ್ಷಗಳ ಹಿಂದೆ ಆರೋಪಿಯನ್ನು ಭೇಟಿಯಾಗಿದ್ದರು ಎಂದು ಹೇಳಲಾಗಿದೆ.

ಒಂದು ದಿನ ಆರೋಪಿಯು ದೇವರ ಪ್ರಸಾದ್ ನೀಡಲು ಎಂಬ ನೆಪವನ್ನು ಹೇಳಿ ಮಹಿಳೆಯ ಮನೆಗೆ ಬಂದಿದ್ದಾನೆ. ಈ ಹಿಂದೆ ಆರೋಪಿ ಆಕೆಗೆ ಡಿಟಿಸಿಯಲ್ಲಿ ಕೆಲಸ ಕೊಡಿಸಲು ಸಹಾಯ ಮಾಡಿದ್ದಾನೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ. ಮನೆಗೆ ಬಂದ ಆತನಿಗೆ ತಂಪು ಪಾನೀಯ ನೀಡಿ ಕೆಲವು ದಾಖಲೆಗಳನ್ನು ತರಲು ರೂಮಿನೊಳಗೆ ಹೋಗಿದ್ದಾಳೆ. ಈ ಸಮಯವನ್ನು ನೋಡಿದ ಆರೋಪಿ ಆಕೆಯ ತಂದ ತಂಪು ಪಾನೀಯ ಮತ್ತು ಪ್ರಸಾದಕ್ಕೆ ಪ್ರಜ್ಞೆ ತಪ್ಪುವ ಪುಡಿಯನ್ನು ಹಾಕಿ, ನಂತರ ಆಕೆಯ ಮೇಲೆ ಅತ್ಯಾಚಾರ ಮಾಡಿದ್ದಾನೆ. ಇದರ ಜತೆಗೆ ಅಶ್ಲೀಲ ಫೋಟೋಗಳನ್ನು ತೆಗೆದು ವೀಡಿಯೋ ಕೂಡ ಮಾಡಿದ್ದಾನೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಸಾಗರ್ ಸಿಂಗ್ ಕಲ್ಸಿ ಸುದ್ದಿ ಸಂಸ್ಥೆ ಪಿಟಿಐಗೆ ಹೇಳಿದ್ದಾರೆ.

ಇದನ್ನೂ ಓದಿ: ಎಂಟು ಮಂದಿಯ ತಂಡ ಮನೆಗೆ ನುಗ್ಗಿ 15 ವರ್ಷದ ಅನಾಥ ಬಾಲಕಿ ಮೇಲೆ ಅತ್ಯಾಚಾರ: ತೆಲಂಗಾಣ ಪೊಲೀಸರು

ಇನ್ನು ಈ ಫೋಟೋ, ವಿಡಿಯೋವನ್ನು ಇಟ್ಟುಕೊಂಡು, ಆಕೆಗೆ ಬ್ಲಾಕ್​​ಮೇಲ್​​ ಮಾಡಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾನೆ. ಈ ಘಟನೆಯ ಬಗ್ಗೆ ಮಹಿಳೆ ಆರೋಪಿಯ ಸ್ನೇಹಿತರೊಬ್ಬರಿಗೆ ತಿಳಿಸಿದಾಗ, ಅವನು ಫೋಟೋಗಳನ್ನು ಡಿಲಿಟ್​​ ಮಾಡುವ ನೆಪದಲ್ಲಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಹೇಳಲಾಗಿದೆ.

ಈ ಪ್ರಕರಣದಲ್ಲಿ ನಾಲ್ಕೈದು ಮಂದಿ ಭಾಗಿಯಾಗಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಮುಖ ಆರೋಪಿಯನ್ನು ಬಂಧಿಸಲಾಗಿದ್ದು, ಇತರ ಆರೋಪಿಗಳ ಪತ್ತೆಗೆ ಕಾರ್ಯಚರಣೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ. ಇನ್ನು ಈ ಬಗ್ಗೆ ತನಿಖೆ ನಡೆಸುವಂತೆ ಮತ್ತು ಕಠಿಣ ಕ್ರಮ ತೆಗೆದುಕೊಳ್ಳುವಂತೆ ಪೊಲೀಸ್​​ ಅಧಿಕಾರಿಗಳಿಗೆ ದೆಹಲಿ ಮಹಿಳಾ ಆಯೋಗದ (ಡಿಸಿಡಬ್ಲ್ಯು) ಮುಖ್ಯಸ್ಥೆ ಸ್ವಾತಿ ಮಲಿವಾಲ್ ಅವರು ಮನವಿ ಮಾಡಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:46 pm, Thu, 24 August 23

ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು