ದಿಲ್ಲಿ ಆಪ್​ ಸರ್ಕಾರದ ಮತ್ತೊಂದು ವಿಕೆಟ್ ಪತನ: ಮತಾಂತರ ಕಾರ್ಯಕ್ರಮವೊಂದರಲ್ಲಿ ಕಾಣಿಸಿಕೊಂಡಿದ್ದ ಸಚಿವ ರಾಜೀನಾಮೆ

| Updated By: ರಮೇಶ್ ಬಿ. ಜವಳಗೇರಾ

Updated on: Oct 09, 2022 | 5:42 PM

ಸಾರ್ವಜನಿಕ ಸಾಮೂಹಿಕ ಧಾರ್ಮಿಕ ಮತಾಂತರ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿದ್ದ ಸಚಿವ ರಾಜೀನಾಮೆ ನೀಡಿದ್ದಾರೆ.

ದಿಲ್ಲಿ ಆಪ್​ ಸರ್ಕಾರದ ಮತ್ತೊಂದು ವಿಕೆಟ್ ಪತನ: ಮತಾಂತರ ಕಾರ್ಯಕ್ರಮವೊಂದರಲ್ಲಿ ಕಾಣಿಸಿಕೊಂಡಿದ್ದ ಸಚಿವ ರಾಜೀನಾಮೆ
Rajendra Pal Gautam
Follow us on

ನವದೆಹಲಿ: ದೆಹಲಿ ಆಪ್ ಸರ್ಕಾರದ ಮತ್ತೊಂದು ವಿಕೆಟ್ ಪತನವಾಗಿದೆ. ರಾಜೇಂದ್ರ ಪಾಲ್ ಗೌತಮ್(Rajendra Pal Gautam )ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜೇಂದ್ರ ಪಾಲ್ ಗೌತಮ್ ಅವರು ಅರವಿಂದ್ ಕೇಜ್ರಿವಾಲ್ ಸಂಪುಟದಲ್ಲಿ ಸಮಾಜ ಕಲ್ಯಾಣ ಸಚಿವರಾಗಿದ್ದರು.

ರಾಜೇಂದ್ರ ಪಾಲ್ ಗೌತಮ್ ಅವರು ಇತ್ತೀಚೆಗೆ ಸಾರ್ವಜನಿಕ ಸಾಮೂಹಿಕ ಧಾರ್ಮಿಕ ಮತಾಂತರ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿದ್ದ ವಿಡಿಯೋ ವೈರಲ್ ಆಗಿತ್ತು. ಈ ಹಿನ್ನೆಲೆಯಲ್ಲಿ ರಾಜೇಂದ್ರ ಪಾಲ್ ಗೌತಮ್ ರಾಜೀನಾಮೆ ನೀಡಬೇಕೆಂದು ಬಿಜೆಪಿ ಆಗ್ರಹಿಸಿತ್ತು. ಇದರ ಬೆನ್ನಲ್ಲೇ ಇಂದು(ಅಕ್ಟೋಬರ್.09) ರಾಜೇಂದ್ರ ಪಾಲ್ ಗೌತಮ್ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಆಮ್ ಆದ್ಮಿ ಪಕ್ಷದ ಸಚಿವ ರಾಜೇಂದ್ರ ಪಾಲ್ ಗೌತಮ್ ಅವರು ಇತ್ತೀಚೆಗೆ ಸಾಮೂಹಿಕ ಧಾರ್ಮಿಕ ಮತಾಂತರ ಕಾರ್ಯಕ್ರಮದಲ್ಲಿ ಭಾಗಿಯಾದ ವಿಡಿಯೋ ವೈರಲ್ ಆಗಿತ್ತು.  ಅ.5ರಂದು ದೆಹಲಿಯ ಅಂಬೇಡ್ಕರ್ ಭವನದಲ್ಲಿ ನಡೆದ ಬೃಹತ್ ಜನ ಸಮೂಹವು ಹಿಂದೂ ದೇವರು ಮತ್ತು ದೇವತೆಗಳನ್ನು ನಿರಾಕರಿಸುವ ಪ್ರತಿಜ್ಞೆ ಕೈಗೊಂಡಿರುವುದು ವಿಡಿಯೋಗಳಲ್ಲಿ ದಾಖಲಾಗಿತ್ತು.

ನನಗೆ ಬ್ರಹ್ಮ ವಿಷ್ಣು ಮಹೇಶ್ವರರಲ್ಲಿ ನಂಬಿಕೆಯಿಲ್ಲ, ಪೂಜಿಸುವುದಿಲ್ಲ ಎಂದು ರಾಜೇಂದ್ರ ಪಾಲ್ ಗೌತಮ್ ಸಾರ್ವಜನಿಕ ಸಮಾರಂಭದಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದ್ದರು.

ಈ ಕಾರ್ಯಕ್ರಮದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ, ಎಎಪಿ ನಾಯಕನ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ. ಇದು ‘ಭಾರತವನ್ನು ಒಡೆಯುವ’ ಯೋಜನೆ ಎಂದು ಕಿಡಿಕಾರಿತ್ತು. ಅಲ್ಲದೇ ರಾಜೀನಾಮೆಗೆ ಆಗ್ರಹಿಸಿತ್ತು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:34 pm, Sun, 9 October 22