AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವರ್ಷವೂ ದೆಹಲಿಯಲ್ಲಿ ವಾಯುಮಾಲಿನ್ಯ ಹೆಚ್ಚು: ಆರೋಗ್ಯಕರ ಗಾಳಿ ಮತ್ತಷ್ಟು ಹಾಳು

ದೆಹಲಿಯಲ್ಲಿ ವಾಯುಮಾಲಿನ್ಯದ ಪ್ರಮಾಣವು ದಿನೇ ದಿನೇ ಹೆಚ್ಚಾಗುತ್ತಿದ್ದು, ನವೆಂಬರ್ 2019ಕ್ಕೆ ಹೋಲಿಸಿದರೆ ಈ ವರ್ಷ ವಾಯುಮಾಲಿನ್ಯ ಉಲ್ಬಣಗೊಂಡಿರುವುದು ಢಾಳಾಗಿ ಕಾಣಸಿಗುತ್ತದೆ. ಇದು ನೆರೆ ರಾಜ್ಯಗಳಲ್ಲಿ ಕೃಷಿ ತ್ಯಾಜ್ಯಗಳ ಸುಡುವಿಕೆಯಿಂದ ಉಂಟಾಗುವ ಹೊಗೆಯಿಂದ ಉಂಟಾಗಿದ್ದು, ಆರೋಗ್ಯಕರ ಗಾಳಿಯನ್ನು ಹಾಳು ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ. ಗುರುವಾರ ದೆಹಲಿಯಲ್ಲಿ ವಾಯುಮಾಲಿನ್ಯ ಗುಣಮಟ್ಟ ಹೆಚ್ಚಾಗಿದ್ದು, ಇದಕ್ಕೆ ಮೂಲ ಕಾರಣ ಈ ವರ್ಷ ಶೇಕಡಾ 42ರಷ್ಟು ತ್ಯಾಜ್ಯ ಸುಡುವಿಕೆಯಿಂದ ಉಂಟಾದ ಮಾಲಿನ್ಯ ಎಂದು ಪರಿಗಣಿಸಲಾಗಿದೆ. ನಗರದ 24 ಗಂಟೆಗಳ ಸರಾಸರಿ ವಾಯು ಗುಟ್ಟಮಟ್ಟದ […]

ಈ ವರ್ಷವೂ ದೆಹಲಿಯಲ್ಲಿ ವಾಯುಮಾಲಿನ್ಯ ಹೆಚ್ಚು: ಆರೋಗ್ಯಕರ ಗಾಳಿ ಮತ್ತಷ್ಟು ಹಾಳು
ಸಾಧು ಶ್ರೀನಾಥ್​
| Edited By: |

Updated on: Nov 07, 2020 | 5:56 PM

Share

ದೆಹಲಿಯಲ್ಲಿ ವಾಯುಮಾಲಿನ್ಯದ ಪ್ರಮಾಣವು ದಿನೇ ದಿನೇ ಹೆಚ್ಚಾಗುತ್ತಿದ್ದು, ನವೆಂಬರ್ 2019ಕ್ಕೆ ಹೋಲಿಸಿದರೆ ಈ ವರ್ಷ ವಾಯುಮಾಲಿನ್ಯ ಉಲ್ಬಣಗೊಂಡಿರುವುದು ಢಾಳಾಗಿ ಕಾಣಸಿಗುತ್ತದೆ. ಇದು ನೆರೆ ರಾಜ್ಯಗಳಲ್ಲಿ ಕೃಷಿ ತ್ಯಾಜ್ಯಗಳ ಸುಡುವಿಕೆಯಿಂದ ಉಂಟಾಗುವ ಹೊಗೆಯಿಂದ ಉಂಟಾಗಿದ್ದು, ಆರೋಗ್ಯಕರ ಗಾಳಿಯನ್ನು ಹಾಳು ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ.

ಗುರುವಾರ ದೆಹಲಿಯಲ್ಲಿ ವಾಯುಮಾಲಿನ್ಯ ಗುಣಮಟ್ಟ ಹೆಚ್ಚಾಗಿದ್ದು, ಇದಕ್ಕೆ ಮೂಲ ಕಾರಣ ಈ ವರ್ಷ ಶೇಕಡಾ 42ರಷ್ಟು ತ್ಯಾಜ್ಯ ಸುಡುವಿಕೆಯಿಂದ ಉಂಟಾದ ಮಾಲಿನ್ಯ ಎಂದು ಪರಿಗಣಿಸಲಾಗಿದೆ. ನಗರದ 24 ಗಂಟೆಗಳ ಸರಾಸರಿ ವಾಯು ಗುಟ್ಟಮಟ್ಟದ ಸೂಚ್ಯಂಕ 406ರಷ್ಟಿತ್ತು. ಗುರುವಾರ, ಎಕ್ಯೂಐ 450 ಆಗಿದ್ದು, ಕಳೆದ ವರ್ಷ ನವೆಂಬರ್ 15ರಂದು 458 ರಷ್ಟಿತ್ತು.

ದಿನೇ ದಿನೇ ಹೆಚ್ಚಾಗುತ್ತಿರುವ ವಾಯುಮಾಲಿನ್ಯಕ್ಕೆ ಪಂಜಾಬ್ ಮೂಲ ಕಾರಣಕರ್ತವಾಗಿದ್ದು, ಶುಕ್ರವಾರ ಗಾಳಿಯ ವೇಗ ಗಂಟೆಗೆ 10 ಕಿಲೋಮೀಟರ್ ಮತ್ತು ಕನಿಷ್ಟ ತಾಪಮಾನ 11.2 ಡಿಗ್ರಿ ಸೆಲ್ಸಿಯಸ್ ಇದ್ದು, ಶಾಂತ ಗಾಳಿ ಮತ್ತು ಕಡಿಮೆ ತಾಪಮಾನವು ಮಾಲಿನ್ಯಯುಕ್ತವಾದ ಅಂಶಗಳನ್ನು ನೆಲಕ್ಕೆ ಹತ್ತಿರವಾಗುವಂತೆ ಮಾಡುತ್ತದೆ. ಇನ್ನು ಇದು ಕೊವಿಡ್-19 ಸಾಂಕ್ರಾಮಿಕ ರೋಗ ಹರಡುವ ಸಂದರ್ಭವಾಗಿರುವುದರಿಂದ ವಾಯುಮಾಲಿನ್ಯದ ಜೊತೆಗೆ ಸುತ್ತಿಕೊಂಡ ಉಸಿರಾಟ ಸಂಬಂಧಿತ ಕಾಯಿಲೆಗಳು ನೇರವಾಗಿ ಕೊರೊನಾದ ಹೆಚ್ಚಳಕ್ಕೆ ನಾಂದಿ ಹಾಡುವ ಸಾಧ್ಯತೆ ಹೆಚ್ಚಾಗಿರುತ್ತದೆ.

ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆಯ ಕ್ರಮವಾಗಿ ಜನರು ಆದಷ್ಟು ಹೊರಾಂಗಣ ಚಟುವಟಿಕೆಗಳನ್ನು ಕಡಿಮೆಗೊಳಿಸಲು, ಮುಂಜಾನೆಯ ನಡಿಗೆಯನ್ನು ನಿಲ್ಲಿಸುವುದರ ಜೊತೆಗೆ ಕೊಠಡಿ ಬಾಗಿಲುಗಳನ್ನು ಮುಚ್ಚುವಂತೆ ಅಧಿಕಾರಿಗಳು ಸೂಚನೆಯನ್ನು ನೀಡಿದ್ದಾರೆ. ತೀವ್ರವಾದ ಗಾಳಿಯ ಗುಣಮಟ್ಟವು ಆರೋಗ್ಯವಂತ ಜನರಿಗೆ ಉಸಿರಾಟದ ತೊಂದರೆ ಮತ್ತು ಶ್ವಾಸಕೋಶ ಅಥವಾ ಹೃದಯ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದವರಿಗೆ ಗಂಭೀರವಾದ ಪರಿಣಾಮವನ್ನು ಉಂಟುಮಾಡಲಿದ್ದು, ಎದೆನೋವು, ಕೆಮ್ಮು, ಉಬ್ಬಸ ಇತ್ಯಾದಿ ಸಮಸ್ಯೆಗಳು ಬಂದರೆ ವೈದ್ಯರನ್ನು ಸಂಪರ್ಕಿಸಿ ಎಂಬ ಸಲಹೆ ನೀಡಲಾಗಿದೆ.

ಶುಕ್ರವಾರ ಬೆಳಗ್ಗೆ ಗಾಳಿಯ ಮಟ್ಟಕ್ಕೆ ಹೋಲಿಸಿದರೆ ಸಂಜೆ ಹೊತ್ತಿಗೆ ಮತ್ತಷ್ಟು ತೀವ್ರವಾಗುವ ಸಾಧ್ಯತೆ ಇದೆ. ಮತ್ತು ಗಡಿ ಪದರದ ಗಾಳಿಯ ದಿಕ್ಕು ಉತ್ತರ ವಾಯವ್ಯ ದಿಕ್ಕಿನಲ್ಲಿದ್ದು, ಕೃಷಿ ಬೆಂಕಿಯೂ ನೇರವಾಗಿ ದೆಹಲಿಯ ಮೇಲೆ ಧಾವಿಸುವುದರಿಂದ ಇದರ ಪರಿಣಾಮ ಹೆಚ್ಚಾಗಿರುತ್ತದೆ ಎಂದು ಐಎಂಡಿಯ ಪರಿಸರ ಮೇಲ್ವಿಚಾರಣಾ ಸಂಶೋಧನಾ ಕೇಂದ್ರದ ಮುಖ್ಯಸ್ಥ ವಿ.ಕೆ. ಸೋನಿ ತಿಳಿಸಿದ್ದಾರೆ.

ಇನ್ನು ಬೆಂಗಳೂರಿನ ವಾಯುಮಾಲಿನ್ಯ ಮಟ್ಟವು ಶನಿವಾರದಂದು 32ರಷ್ಟು ಗಾಳಿಯ ಗುಣಮಟ್ಟದ ಸೂಚ್ಯಂಕವನ್ನು ಹೊಂದಿದ್ದು, ಸುರಕ್ಷಿತ ಮಟ್ಟದಲ್ಲಿ ಸದ್ಯಕ್ಕೆ ಕಂಡು ಬಂದಿದೆಯಾದರೂ, ಹವಾಮಾನದ ಬದಲಾವಣೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಗಮನಹರಿಸುವುದು ಮುಖ್ಯವಾಗಿದೆ. ದೆಹಲಿಯು 1000ರಷ್ಟು ಎಕ್ಯೂಐ ವಾಯುಮಾಲಿನ್ಯವನ್ನು ಹೊಂದಿದ್ದು, ಅಪಾಯದ ಹಂತವನ್ನು ಮೀರುವ ಸಾಧ್ಯತೆಗಳೇ ಹೆಚ್ಚು ಕಂಡುಬಂದಿದೆ.

ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು